ಲೈಂಗಿಕ ದೌರ್ಜನ್ಯ ಪ್ರಕರಣ | ಹೆಚ್ ಡಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ

Date:

ಮನೆ ಕೆಲಸದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆಗೆ (ಶುಕ್ರವಾರ) ಮುಂದೂಡಿದೆ.

- Advertisement -

ನಿರೀಕ್ಷಣಾ ಜಾಮೀನು ಕೋರಿ ವಕೀಲರ ಮೂಲಕ ಮಧ್ಯಾಹ್ನ ಹೆಚ್.ಡಿ.ರೇವಣ್ಣ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು, “ಎಫ್‌ಐಆರ್‌ನಲ್ಲಿ ಎಲ್ಲವೂ ಜಾಮೀನು ನೀಡಬಹುದಾದ ಆರೋಪಗಳಿವೆ. ನಿರೀಕ್ಷಣಾ ಜಾಮೀನು ಅರ್ಜಿ ಹೇಗೆ ಊರ್ಜಿತವಾಗುತ್ತದೆ. ನೀವು ವಿಚಾರಣಾ ನ್ಯಾಯಾಲಯದಲ್ಲಿ ನೇರವಾಗಿ ಹಾಜರಾಗಬಹುದಿತ್ತಲ್ಲಾ?” ಎಂದು ರೇವಣ್ಣ ಪರ ಹಿರಿಯ ವಕೀಲ ಮೂರ್ತಿ ಡಿ. ನಾಯ್ಕ್ ಅವರಲ್ಲಿ ಕೋರ್ಟ್ ಪ್ರಶ್ನೆ ಮಾಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬಳಿಕ ಅರ್ಜಿಯ ವಿಚಾರಣೆ ನಡೆಸಿ ನ್ಯಾಯಾಲಯವು, ಎಸ್‌ಐಟಿಗೆ ನೋಟಿಸ್ ಜಾರಿ ಮಾಡಿದೆ. ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿಗೆ ಸೂಚನೆ ನೀಡಿದೆ. ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.

ಇದನ್ನು ಓದಿದ್ದೀರಾ? ದೇವೇಗೌಡರ ಕುಟುಂಬವನ್ನು ‘420’ ಎನ್ನಲ್ಲ; ಪೆನ್‌ಡ್ರೈವ್ ಈ ಕುಟುಂಬದ ಆಸ್ತಿ: ಡಿ ಕೆ ಸುರೇಶ್ ವ್ಯಂಗ್ಯ

ಮಧ್ಯಂತರ ಜಾಮೀನು ನೀಡಲು ಹೆಚ್.ಡಿ.ರೇವಣ್ಣ ಪರ ವಕೀಲರ ಮನವಿ ಮಾಡಿದ್ದಾರೆ ಎಂದು ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ಆದೇಶದಲ್ಲಿ ತಿಳಿಸಿದ್ದಾರೆ. ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ರೇವಣ್ಣ ವಿರುದ್ಧ ಸಂತ್ರಸ್ತ ಮಹಿಳೆಯು ದೂರು ನೀಡಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...