ಲೈಂಗಿಕ ದೌರ್ಜನ್ಯ ಪ್ರಕರಣ | ಜೂನ್ 6ರವರೆಗೆ ಸಂಸದ ಪ್ರಜ್ವಲ್ ರೇವಣ್ಣ ಎಸ್‌ಐಟಿ ಕಸ್ಟಡಿಗೆ

Date:

ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನದ ಭೀತಿಯಿಂದ 35 ದಿನಗಳಿಂದ ವಿದೇಶದಿಂದ ತಲೆಮರೆಸಿಕೊಂಡಿದ್ದ ಸಂಸದ ಪ್ರಜ್ವಲ್‌ ರೇವಣ್ಣನನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಡರಾತ್ರಿ ಬಂಧಿಸಿದ ಬಳಿಕ ಇಂದು 42ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿದ್ದರು.

- Advertisement -

ಜೂನ್ 6ರವರೆಗೆ ಎಸ್‌ಐಟಿಗೆ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಎಸ್‌ಐಟಿ ಪರ ಹಿರಿಯ ವಕೀಲ, ಎಸ್‌ಪಿಪಿ ಅಶೋಕ್‌ ನಾಯ್ಕ್‌ ಹಾಗೂ ಪ್ರಜ್ವಲ್‌ ರೇವಣ್ಣ ಪರ ವಕೀಲ ಅರುಣ್‌ ವಾದ ಮಂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಎಸ್‌ಐಟಿ ಕಚೇರಿಯಲ್ಲೇ ರಾತ್ರಿ ಕಳೆದಿದ್ದ ಪ್ರಜ್ವಲ್‌ ಅವರನ್ನು ಇಂದು ಬೆಳಗ್ಗೆ ವೈದ್ಯಕೀಯ ಪರೀಕ್ಷೆಗೆ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ಪರೀಕ್ಷೆಯ ನಂತರ ಪೊಲೀಸರು 42ನೇ ಎಸಿಎಂಎಂ ಕೋರ್ಟ್‌ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು.

ಇದನ್ನು ಓದಿದ್ದೀರಾ? ಬಿಜೆಪಿ ಅವಧಿಯಲ್ಲಿ ಪೊಲೀಸರಿಗೆ ಕೇಸರಿ ಸಮವಸ್ತ್ರ ಹಾಕಿಸಿದ್ದನ್ನು ಅಶೋಕ್ ಮರೆತಿದ್ದಾರಾ? ಡಿಕೆ ಶಿವಕುಮಾರ್

ವಿಚಾರಣೆ ವೇಳೆ ಎಸ್‌ಐಟಿ 15 ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿತ್ತು. ಮಧ್ಯಾಹ್ನದ ನಂತರ ಸುದೀರ್ಘ ವಿಚಾರಣೆ ನಡೆಸಿದ ಕೋರ್ಟ್‌ ಜೂನ್ 6ರವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶ ಪ್ರಕಟಿಸಿತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...