ಜರ್ಮನಿಯ ಮ್ಯೂನಿಕ್ ವಿಮಾನ ನಿಲ್ದಾಣದಿಂದ ಹೊರಟು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಇಳಿದ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
ಭಾರತೀಯ ಕಾಲಮಾನ ಸಂಜೆ 4.09ಕ್ಕೆ ಮ್ಯೂನಿಕ್ನಿಂದ ಟೇಕಾಫ್ ಆಗಿದ್ದ ಲುಫ್ತಾನ್ಸಾ ಏರ್ಲೈನ್ಸ್ನ ಎಲ್ಎಚ್ 764 ವಿಮಾನದಲ್ಲಿ ಹತ್ತಿದ್ದ ಪ್ರಜ್ವಲ್ ರೇವಣ್ಣ, ಗುರುವಾರ ತಡರಾತ್ರಿ 12.45ರ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಯಿತು. ಆ ಬಳಿಕ ವಿಮಾನ ನಿಲ್ದಾಣದಲ್ಲಿ ಕಾದು ಕುಳಿತಿದ್ದ ಎಸ್ಐಟಿ ಅಧಿಕಾರಿಗಳ ತಂಡ, ಇಮಿಗ್ರೇಷನ್ ಅಧಿಕಾರಿಗಳ ಗಮನಕ್ಕೆ ತಂದು, ಪ್ರಜ್ವಲ್ ರೇವಣ್ಣ ಪ್ರತ್ಯಕ್ಷವಾಗುತ್ತಿದ್ದಂತೆಯೇ ವಶಕ್ಕೆ ಪಡೆದು ಬಂಧಿಸಿದ್ದಾರೆ.
🔴 #BREAKING | Karnataka Sex Crimes Case: Accused #PrajwalRevanna lands at Bengaluru’s international airport pic.twitter.com/vcV2chMxUI
— NDTV (@ndtv) May 30, 2024
ಮೇ 31ರಂದು ಎಸ್ಐಟಿ ಮುಂದೆ ಹಾಜರು
ವಿದೇಶದಲ್ಲಿದ್ದುಕೊಂಡೇ ಇತ್ತೀಚೆಗೆ ವಿಡಿಯೋವನ್ನು ಬಿಡುಗಡೆಗೊಳಿಸಿದ್ದ ಪ್ರಜ್ವಲ್ ರೇವಣ್ಣ, “ಮೇ 31 ರಂದು ಎಸ್ಐಟಿ ಪೊಲೀಸರೆದುರು ಹಾಜರಾಗಿ ತನಿಖೆಗೆ ಸಹಕರಿಸುತ್ತೇನೆ” ಎಂದು ತಿಳಿಸಿದ್ದ.
