ಲೈಂಗಿಕ ದೌರ್ಜನ್ಯ | ಸಿ ಪಿ ಯೋಗೇಶ್ವರ್ ಆಪ್ತ ಟಿ ಎಸ್‌ ರಾಜು ವಿರುದ್ಧ ದೂರು ದಾಖಲು, ಆರೋಪಿ ಪರಾರಿ

Date:

ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಚನ್ನಪಟ್ಟಣ ಬಿಜೆಪಿ ಗ್ರಾಮಾಂತರ ಮಂಡಳದ ಅಧ್ಯಕ್ಷ ತೂಬಿನಕೆರೆಯ ಟಿ ಎಸ್ ರಾಜು ವಿರುದ್ಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಭಾನುವಾರ ದೂರು ದಾಖಲಾಗಿದೆ.

- Advertisement -

ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ತಮ್ಮ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆರೋಪಿಸಿ ಬೆಂಗಳೂರಿನಲ್ಲಿ ನೆಲೆಸಿರುವ ಮಹಿಳೆ ಟಿ ಎಸ್ ರಾಜು ವಿರುದ್ಧ ದೂರು ನೀಡಿದ್ದಾರೆ. ಆರೋಪಿ ರಾಜು ವಿಧಾನ ಪರಿಷತ್ ಸದಸ್ಯ ಸಿ ಪಿ ಯೋಗೇಶ್ವರ್ ಅವರ ಆಪ್ತ ಎನ್ನಲಾಗಿದ್ದು, ಘಟನೆ ಬೆನ್ನಲ್ಲೇ ರಾಜು ತಲೆಮರೆಸಿಕೊಂಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ರಾಜು ವಿರುದ್ಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ, ಇತ್ತ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎಂ ಎನ್ ಆನಂದಸ್ವಾಮಿ ಅವರು ಸೋಮವಾರ ರಾಜುನನ್ನು ಪಕ್ಷದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಘಟನೆ ವಿವರ

ಬೆಂಗಳೂರಿನಲ್ಲಿ ನೆಲೆಸಿರುವ ಮಹಿಳೆ ಗಣೇಶ ಹಬ್ಬದ ಸಲುವಾಗಿ ತವರು ಮನೆಗೆ ಬಂದಿದ್ದರು. ಸೆ. 7ರಂದು ಗ್ರಾಮದಲ್ಲಿ ರಾತ್ರಿ ಗಣೇಶ ಮೂರ್ತಿ ವಿಸರ್ಜನೆ ಸಲುವಾಗಿ ಮೆರವಣಿಗೆ ನಡೆಯುವಾಗ ಮಹಿಳೆ ರಾತ್ರಿ 11.40ರ ಸುಮಾರಿಗೆ ತಾಯಿಯೊಂದಿಗೆ ಮನೆ ಮುಂದೆ ನಿಂತಿದ್ದರು. ತಾಯಿ ಕಾರ್ಯನಿಮಿತ್ತ ಒಳಕ್ಕೆ ಹೋಗಿದ್ದರು. ಮಹಿಳೆ ಒಬ್ಬರೇ ಇದ್ದಿದ್ದನ್ನು ಗಮನಿಸಿ ಅವರತ್ತ ಬಂದಿದ್ದ ರಾಜು, ‘ಯಾವಾಗ ಬಂದೆ ಬೇಬಿ’ ಎಂದು ಕೇಳಿದ್ದ ಎಂದು ಮಹಿಳೆ ದೂರಿನಲ್ಲಿಉಲ್ಲೇಖಿಸಿದ್ದಾರೆ.

ಮಹಿಳೆಯ ಹೆಗಲ ಮೇಲೆ ಕೈ ಹಾಕಿ ಎದೆ ಭಾಗವನ್ನು ಮುಟ್ಟುತ್ತಾ, ಕಾಮುಕ ದೃಷ್ಟಿಯಿಂದ ಕೈ ಹಿಡಿದು ಎಳೆದಾಡಿ ಅನುಚಿತವಾಗಿ ವರ್ತಿಸಿದ್ದಾನೆ. ಅಲ್ಲದೆ, ತನ್ನ ಮೊಬೈಲ್‌ ಫೋನ್‌ನಿಂದ ಮಹಿಳೆಯ ಫೋಟೊ ತೆಗೆದು ತನ್ನ ಸ್ನೇಹಿತರಿಗೆ ಕಳಿಸಿದ್ದ. ಈ ಕುರಿತು ಮಹಿಳೆ ಪ್ರಶ್ನಿಸಿದಾಗ, ‘ನನ್ನ ಮೊಬೈಲ್, ನನ್ನಿಷ್ಟ’ ಎಂದು ರಾಜು ಕೆಟ್ಟದಾಗಿ ಪ್ರತಿಕ್ರಿಯಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

ರಾಜು ವರ್ತನೆಯಿಂದ ದಿಗ್ಬ್ರಮೆಗೊಂಡ ಮಹಿಳೆ ತಕ್ಷಣ ಒಳಗಿದ್ದ ತನ್ನ ಅಣ್ಣನಿಗೆ ವಿಷಯ ತಿಳಿಸಿದ್ದಾರೆ. ಅವರು ಬಂದು ಪ್ರಶ್ನಿಸಿದಾಗ, ರಾಜು ತಬ್ಬಿಬ್ಬುಗೊಂಡಿದ್ದಾನೆ. ನಂತರ, ಕುಟುಂಬದವರು ಆತನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ, ಆತನ ಮೊಬೈಲ್ ಕಿತ್ತಕೊಂಡು ಇಟ್ಟುಕೊಂಡಿದ್ದು, ತನಿಖೆ ಸಂದರ್ಭದಲ್ಲಿ ಹಾಜರುಪಡಿಸುವುದಾಗಿ ಮಹಿಳೆ ದೂರಿನಲ್ಲಿ ಹೇಳಿದ್ದಾರೆ.

ಹಿಂದೆಯೂ ಕಿರಿ ಕಿರಿ

ಈ ಹಿಂದೆಯೂ ರಾಜು ನನಗೆ ಕಿರಿಕಿರಿ ಕೊಟ್ಟಿದ್ದಾನೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನನಗೆ ಕರೆ ಮಾಡಿ, ‘ಮೈಸೂರು ಕಾಫಿ ಡೇಗೆ ಹೋಗೋಣ. ನೀನೊಬ್ಬಳೇ ಬಾ. ಯಾರಿಗೂ ಹೇಳಬೇಡ’ ಎಂದಿದ್ದ. ನನ್ನೊಂದಿಗೆ ಕೆಟ್ಟದಾಗಿ ನಡೆದುಕೊಂಡಿರುವ ರಾಜು, ನನ್ನ ಗೌರವಕ್ಕೆ ಚ್ಯುತಿ ತಂದಿದ್ದಾನೆ” ಎಂದು ಮಹಿಳೆ ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನನುಡಿ 2026 | ಫ್ಯಾಸಿಸಂ ಯಾವತ್ತೂ ನಮ್ಮ ಆಯ್ಕೆ ಆಗಬಾರದು: ಶಿವಸುಂದರ್

"ಫ್ಯಾಸಿಸಂನಲ್ಲಿ ಉಗ್ರ ರೂಪವೂ ಇದೆ, ಮಂದ ರೂಪವೂ ಇದೆ. ಉಗ್ರ...

ಜನನುಡಿ 2026 | ಶಿಕ್ಷಣಕ್ಕಾಗಿ ನಡೆದ ಹೋರಾಟವನ್ನು ಕೇವಲ ಜೆನ್-ಜಿ ಚಳವಳಿಯೆಂದು ಕರೆಯಬಾರದು: ಶರಣ್ಯ ವರ್ಮ

ಜನನುಡಿ 2026ರ ಉದ್ಘಾಟನಾ ಗೋಷ್ಠಿಯಲ್ಲಿ ಮಾತನಾಡಿದ ದೆಹಲಿ ವಿದ್ಯಾರ್ಥಿ ಚಳವಳಿಯ ಪ್ರತಿನಿಧಿ...

ಬೆಂಗಳೂರು | ‘ಫ್ರೀಡಂ ಫ್ರಮ್‌ ಫ್ರೀಡಂ ಪಾರ್ಕ್’ ಪ್ರತಿಭಟನೆ; 100ಕ್ಕೂ ಹೆಚ್ಚು ಮಂದಿ ಬಂಧನ

ಬೆಂಗಳೂರು ನಗರದಾದ್ಯಂತ ಇರುವ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಭಟನೆ ನಡೆಸುವ ಹಕ್ಕನ್ನು...

ಬೀದರ್‌ | 107 ಗ್ರಾಮಗಳಲ್ಲಿ ಕನ್ನಡ ಮಾಧ್ಯಮ ಶಾಲೆಗಳಿಲ್ಲ; ಮಕ್ಕಳಿಗೆ ಮರಾಠಿ ಶಿಕ್ಷಣವೇ ಗತಿ!

ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿರುವ ಬೀದರ್ ಜಿಲ್ಲೆಯ ಸುಮಾರು...