ಲೈಂಗಿಕ ದೌರ್ಜನ್ಯ | ಸಂತ್ರಸ್ತೆ ಸಮೇತ ಹೆಚ್ ಡಿ ರೇವಣ್ಣ ಮನೆಯಲ್ಲಿ ಎಸ್‌ಐಟಿ ಮಹಜರು

Date:

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್‌ಐಟಿ ತಂಡ, ಹೊಳೆನರಸೀಪುರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಸಂತ್ರಸ್ತೆಯನ್ನು ಸೋಮವಾರ ಬೆಂಗಳೂರಿನ ಬಸವನಗುಡಿಯಲ್ಲಿರುವ ಶಾಸಕ ಹೆಚ್ ಡಿ ರೇವಣ್ಣ ಮನೆಗೆ ಕರೆತಂದು ಮಹಜರು ನಡೆಸಿದರು.

- Advertisement -

ಸಂತ್ರಸ್ತೆಯು ದೂರಿನಲ್ಲಿ ತನ್ನನ್ನು ಇಲ್ಲಿಗೂ ಮನೆಗೂ ಕರೆತರಲಾಗಿತ್ತು ಎಂದು ದಾಖಲಿಸಿದಂತಿದೆ. ಹೀಗಾಗಿ ಪೊಲೀಸ್ ಜೀಪಿನಲ್ಲಿ ಸಂತ್ರಸ್ತೆಯನ್ನು ರೇವಣ್ಣ ಅವರ ಬಸವನಗುಡಿ ಮನೆಗೆ ಕರೆದೊಯ್ದಿದ್ದ ಅಧಿಕಾರಿಗಳು, ಒಂದು ಗಂಟೆಗೂ ಹೆಚ್ಚು ಕಾಲ ಮಹಜರು ನಡೆಸಿದರು. ಘಟನೆಯ ಮರುಸೃಷ್ಟಿ ಮಾಡಿ, ವಿಡಿಯೊ ಚಿತ್ರೀಕರಣ ಮಾಡಿಕೊಂಡರು. ಇದೆಲ್ಲ ಅಂಶವನ್ನು ಅಧಿಕಾರಿಗಳು, ದೋಷಾರೋಪ ಪಟ್ಟಿಯಲ್ಲಿ ನಮೂದಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕೆ.ಆ‌ರ್.ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರನ್ನು ಬಂಧಿಸಿರುವ ಅಧಿಕಾರಿಗಳು, ಮೇ 8ರವರೆಗೆ ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದಾರೆ. ಅರಮನೆ ರಸ್ತೆಯಲ್ಲಿರುವ ಸಿಐಡಿ ಕಟ್ಟಡದ ಸೆಲ್‌ನಲ್ಲಿ ಇರಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಅಪಹರಣವಾಗಿದ್ದ ಸಂತ್ರಸ್ತೆಯನ್ನು ರಕ್ಷಿಸಿ ಹೇಳಿಕೆ ಪಡೆದಿರುವ ಅಧಿಕಾರಿಗಳು, ಅವರನ್ನು ನ್ಯಾಯಾಧೀಶರ ಎದುರು ಸದ್ಯದಲ್ಲೇ ಹಾಜರುಪಡಿಸಲಿದ್ದಾರೆ. ಸಿಆರ್‌ಪಿಸಿ 164 ಅಡಿ ಹೇಳಿಕೆ ದಾಖಲಿಸಲಿದ್ದಾರೆ. ಅದಕ್ಕೂ ಮುನ್ನವೇ ಅವರನ್ನು ಆರೋಪಿ ಮನೆ ಹಾಗೂ ತೋಟದ ಮನೆಗಳಿಗೆ ಕರೆದೊಯ್ದು ಮಹಜರು ನಡೆಸುತ್ತಿದ್ದಾರೆ.

ಅತ್ಯಾಚಾರ ಪ್ರಕರಣದಲ್ಲಿ ತಲೆಮರೆಯಿಸಿಕೊಂಡಿರುವ ಮತ್ತೊಬ್ಬ ಆರೋಪಿ ರೇವಣ್ಣ ಅವರ ಪುತ್ರ ಮತ್ತು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿಯಾಗಿದ್ದು, ಅವರ ವಿರುದ್ಧ ಎಸ್‌ಐಟಿ ಬ್ಲೂ ಕಾರ್ನರ್ ನೋಟಿಸ್ ಜಾರಿಮಾಡುವಂತೆ ಸಿಬಿಐಅನ್ನು ಕೋರಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೇರಿ | ತಟ್ಟಂಚಾವಡಿ ಉಪಚುನಾವಣೆ: AINRC ಅಭ್ಯರ್ಥಿ ಅಶೋಕ್ ಆನಂದ್‌ಗೆ ಗೆಲುವು

ಪುದುಚೇರಿಯ ತಟ್ಟಂಚಾವಡಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಲ್ ಇಂಡಿಯಾ ಎನ್‌ಆರ್‌...

ಅಯೋಧ್ಯೆಯಿಂದ ಸ್ಪರ್ಧಿಸಿ ಗೆದ್ದು ತೋರಿಸಿ: ಸಿಎಂ ಯೋಗಿಗೆ ಅಖಿಲೇಶ್ ಯಾದವ್ ಬಹಿರಂಗ ಸವಾಲು

ಉತ್ತರ ಪ್ರದೇಶದ ಮುಂಬರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು...

ಉಪಚುನಾವಣೆ: ನಂದಿಗ್ರಾಮ, ನಗಾಂವ್‌ ಫಲಿತಾಂಶದತ್ತ ಎಲ್ಲರ ಚಿತ್ತ

ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರ ಮತ್ತು ಪಶ್ಚಿಮ ಬಂಗಾಳ, ತಮಿಳುನಾಡು, ಕೇಂದ್ರಾಡಳಿತ...