ಲೋಕಸಭೆ ಚುನಾವಣೆ| ಶಾ, ಮೋದಿ, ರಾಹುಲ್; ಕಣದಲ್ಲಿರುವ ಪ್ರಮುಖ ಹತ್ತು ಅಭ್ಯರ್ಥಿಗಳು

Date:

ಒಟ್ಟು ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ ಮತ ಎಣಿಕೆ ಇಂದು ನಡೆಯಲಿದ್ದು ಅಮಿತ್ ಶಾ, ರಾಹುಲ್ ಗಾಂಧಿ, ನರೇಂದ್ರ ಮೋದಿ ಸೇರಿದಂತೆ ಪ್ರಮುಖ ನಾಯಕರ ಭವಿಷ್ಯ ಇಂದು ನಿರ್ಧಾರವಾಗಲಿದೆ.

- Advertisement -

ಆಡಳಿತಾರೂಢ ಬಿಜೆಪಿಯಿಂದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಕಣದಲ್ಲಿದ್ದರೆ, ಇಂಡಿಯಾ ಒಕ್ಕೂಟದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎನ್‌ಸಿಪಿ ನಾಯಕಿ ಸುಪ್ರಿಯಾ ಸುಳೆ, ಎಸ್‌ಪಿಯ ಸಮಾಜವಾದಿ ಪಕ್ಷ ಸ್ಪರ್ಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಪ್ರಮುಖ ಹತ್ತು ಅಭ್ಯರ್ಥಿಗಳಿವರು

1. ನರೇಂದ್ರ ಮೋದಿ: ಪ್ರಧಾನಿ ನರೇಂದ್ರ ಮೋದಿ ವಾರಾಣಾಸಿ ಕ್ಷೇತ್ರದಿಂದ ಮೂರನೇ ಬಾರಿಗೆ ಸ್ಪರ್ಧಿಸುತ್ತಿದ್ದು, ಇಂಡಿಯಾ ಒಕ್ಕೂಟದ ಕಾಂಗ್ರೆಸ್ ನಾಯಕ ಅಜಯ್ ರಾಯ್ ಅವರು ಮೋದಿ ವಿರುದ್ಧ ಕಣದಲ್ಲಿದ್ದಾರೆ. 2014, 2019ರಲ್ಲಿ ಪ್ರಧಾನಿ ಮೋದಿ ವಾರಾಣಾಸಿಯಲ್ಲಿ ಜಯಗಳಿಸಿದ್ದಾರೆ.

2. ರಾಹುಲ್ ಗಾಂಧಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಯನಾಡು ಮತ್ತು ರಾಯ್‌ಬರೇಲಿ ಎರಡು ಕ್ಷೇತ್ರಗಳಲ್ಲಿ ಕಣದಲ್ಲಿದ್ದಾರೆ. ರಾಹುಲ್ 2019ರಲ್ಲಿ ಅಮೇಥಿಯಲ್ಲಿ ಸ್ಪರ್ಧಿಸಿದ್ದು ಸೋಲು ಕಂಡಿದ್ದರು. ಆದರೆ ವಯನಾಡಿನಲ್ಲಿ ಗೆಲುವು ಸಾಧಿಸಿದ್ದರು. ಪ್ರಸ್ತುತ ರಾಯ್‌ಬರೇಲಿಯಲ್ಲಿ ಬಿಜೆಪಿಯ ದಿನೇಶ್ ಪ್ರತಾಪ್ ಸಿಂಗ್, ವಯನಾಡಿನಿಂದ ಬಿಜೆಪಿಯ ಕೆ ಸುರೇಂದ್ರನ್, ಸಿಪಿಐಎಂನ ಅನ್ನಿ ರಾಜಾ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.

3. ಅಮಿತ್ ಶಾ: ಕೇಂದ್ರ ಗೃಹ ಸಚಿವ ಅಮಿತ್ ಶಾ 2019ರಲ್ಲಿ ಗಾಂಧಿನಗರದಿಂದ ಲೋಕಸಭೆಯಲ್ಲಿ ಸ್ಪರ್ಧಿಸಿದ್ದಾರೆ. ಈ ಹಿಂದೆ ಬಿಜೆಪಿ ಅಧ್ಯಕ್ಷರಾಗಿದ್ದ ಶಾ ಕಾಂಗ್ರೆಸ್ ಅಭ್ಯರ್ಥಿ ಸೋನಾಲ್ ಪಟೇಲ್ ವಿರುದ್ಧ ಕಣಕ್ಕಿಳಿದಿದ್ದಾರೆ.

4. ಸುಪ್ರಿಯಾ ಸುಳೆ ಮತ್ತು ಸುನೇತ್ರಾ ಪವಾರ್: ಬಾರಾಮತಿ ಕ್ಷೇತ್ರವು ‘ಪವಾರ್’ ಪರಂಪರೆಯ ಭವಿಷ್ಯವನ್ನು ನಿರ್ಧರಿಸುವ ಮತ್ತೊಂದು ಹಾಟ್‌ ಸೀಟ್ ಆಗಿದೆ. ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ ಅವರ ಸೋದರ ಸಂಬಂಧಿ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ವಿರುದ್ಧ ಈ ಸ್ಥಾನದಿಂದ ಸ್ಪರ್ಧಿಸಿದ್ದಾರೆ.

5. ಶಶಿ ತರೂರ್: ತಿರುವನಂತಪುರದಿಂದ ಮೂರು ಬಾರಿ ಸಂಸದರಾಗಿರುವ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಬಿಜೆಪಿಯ ರಾಜೀವ್ ಚಂದ್ರಶೇಖರ್ ಮತ್ತು ಸಿಪಿಐ-ಎಂನ ಪನ್ನಿಯನ್ ರವೀಂದ್ರನ್ ವಿರುದ್ಧ ಮತ್ತೆ ಅದೇ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ.

6. ಕೆ. ಅಣ್ಣಾಮಲೈ: ಬಿಜೆಪಿ ತಮಿಳುನಾಡು ಮುಖ್ಯಸ್ಥ ಕೊಯಮತ್ತೂರಿನಿಂದ ಸ್ಪರ್ಧಿಸುತ್ತಿರುವ ಮಾಜಿ ಪೊಲೀಸ್ ಅಧಿಕಾರಿ ಕೆ. ಅಣ್ಣಾಮಲೈ ಡಿಎಂಕೆ ನಾಯಕ ಗಣಪತಿ ಪಿ ರಾಜ್‌ಕುಮಾರ್ ಮತ್ತು ಎಐಎಡಿಎಂಕೆಯ ಸಿಂಗೈ ರಾಮಚಂದ್ರನ್ ವಿರುದ್ಧ ಸ್ಪರ್ಧಿಸಿದ್ದಾರೆ.

7. ರಾಜನಾಥ್ ಸಿಂಗ್: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲಕ್ನೋದಿಂದ ಮೂರನೇ ಅವಧಿಗೆ ಸ್ಪರ್ಧಿಸುತ್ತಿದ್ದಾರೆ. ಉತ್ತರ ಪ್ರದೇಶದ ಮಾಜಿ ಸಿಎಂ ಬಿಜೆಪಿಯ ಮೊದಲ ಅವಧಿಯಲ್ಲಿ ಗೃಹ ಸಚಿವರಾಗಿ ಮತ್ತು ಎರಡನೇ ಅವಧಿಯಲ್ಲಿ ರಕ್ಷಣಾ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ರಾಜನಾಥ್ ಸಿಂಗ್ ವಿರುದ್ಧ ಎಸ್‌ಪಿ ಅಭ್ಯರ್ಥಿ ರವಿದಾಸ್ ಮೆಹ್ರೋತ್ರಾ ಮತ್ತು ಬಿಎಸ್‌ಪಿ ಅಭ್ಯರ್ಥಿ ಸರ್ವರ್ ಮಲಿಕ್ ಕಣದಲ್ಲಿದ್ದಾರೆ.

8. ಅಭಿಷೇಕ್ ಬ್ಯಾನರ್ಜಿ: ಟಿಎಂಸಿ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಡೈಮಂಡ್ ಹಾರ್ಬರ್‌ ಕ್ಷೇತ್ರದಲ್ಲಿ ಎರಡನೇ ಅವಧಿಗೆ ಸ್ಪರ್ಧಿಸುತ್ತಿದ್ದಾರೆ. ಸಿಪಿಐ(ಎಂ) ಅಭ್ಯರ್ಥಿ ಪ್ರತೀಕುರ್ ರಹಮಾನ್ ಮತ್ತು ಬಿಜೆಪಿಯ ಅಭಿಜಿತ್ ದಾಸ್ ವಿರುದ್ಧ ಕಣಕ್ಕಿಳಿದಿದ್ದಾರೆ.

9. ಅಖಿಲೇಶ್ ಯಾದವ್: ಉತ್ತರ ಪ್ರದೇಶದ ಮಾಜಿ ಸಿಎಂ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಕನೌಜ್‌ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಕರ್ಹಾಲ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಯಾದವ್ ಅವರು ಹಾಲಿ ಸಂಸದ ಮತ್ತು ಬಿಜೆಪಿ ನಾಯಕ ಸುಬ್ರತ್ ಪಾಠಕ್ ಅವರನ್ನು ಎದುರಿಸುತ್ತಿದ್ದಾರೆ.

10. ಅಸಾದುದ್ದೀನ್ ಓವೈಸಿ: ಹೈದರಾಬಾದ್ ಕ್ಷೇತ್ರದಲ್ಲಿ ನಾಲ್ಕು ಬಾರಿ ಸಂಸದರಾಗಿರುವ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಬಿಜೆಪಿ ಅಭ್ಯರ್ಥಿ ಮತ್ತು ನಟಿ-ರಾಜಕಾರಣಿ ಮಾಧವಿ ಲತಾ ವಿರುದ್ಧ ಹಣಾಹಣಿಗೆ ಸಿದ್ಧವಾಗಿದ್ದಾರೆ.

543 ಲೋಕಸಭೆ ಕ್ಷೇತ್ರಗಳಿಗೆ 7 ಹಂತದಲ್ಲಿ ಚುನಾವಣೆ ನಡೆದಿದ್ದು ಜೂನ್ 4ರಂದು (ಇಂದು) ಮತ ಎಣಿಕೆ ನಡೆಯುತ್ತಿದೆ. ಬಿಜೆಪಿ ಮೂರನೇ ಬಾರಿಗೆ ಗದ್ದುಗೆ ಪಡೆಯುವ ಯತ್ನದಲ್ಲಿದ್ದರೆ ಪ್ರಮುಖ ವಿಪಕ್ಷಗಳ ಇಂಡಿಯಾ ಒಕ್ಕೂಟವು ಎನ್‌ಡಿಎ ಕೂಟವನ್ನು ಕೆಳಗಿಳಿಸಿ ಅಧಿಕಾರವನ್ನು ಪಡೆಯಲು ಸಜ್ಜಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ಪತ್ರಕರ್ತರು, ನಾಗರಿಕರ ವಿರುದ್ಧ ವಿಶೇಷಾಧಿಕಾರ ಅಸ್ತ್ರ ಬೇಡ: ಸುಪ್ರೀಂಗೆ CPIM ನಾಯಕಿ ಸುಭಾಷಿಣಿ ಅಲಿ ಮನವಿ

ಶಾಸಕಾಂಗವನ್ನು ಟೀಕಿಸಿದ ಮಾತ್ರಕ್ಕೆ ಸಂಸತ್ ಸದಸ್ಯರಲ್ಲದ ನಾಗರಿಕರು ಅಥವಾ ಪತ್ರಕರ್ತರ ವಿರುದ್ಧ...

3,000 ಮದರಸಾಗಳ ನಿರ್ವಹಣೆ, ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ರಾಜಸ್ಥಾನ ಹೈಕೋರ್ಟ್‌ ಸೂಚನೆ

ರಾಜಸ್ಥಾನದಲ್ಲಿ ಕಾರ್ಯಾಚರಿಸುತ್ತಿರುವ ಸುಮಾರು 3,000 ಮದರಸಾಗಳ ಪರಿಣಾಮಕಾರಿ ನಿರ್ವಹಣೆ, ಮೇಲ್ವಿಚಾರಣೆ ಹಾಗೂ...