ಮಹಾರಾಷ್ಟ್ರ | ಹಿಂದಿ ಹೇರಿಕೆ ವಿರುದ್ಧ ಜುಲೈ 5ರ ಪ್ರತಿಭಟನಾ ಮೆರವಣಿಗೆಗೆ ಬೆಂಬಲ ಸೂಚಿಸಿದ ಎನ್‌ಸಿಪಿ

Date:

ರಾಷ್ಟ್ರೀಯ ಶಿಕ್ಷಣ ನೀತಿ 2020ರ ಮೂಲಕ ಮಹಾರಾಷ್ಟ್ರದ ಶಾಲಾ ಪಠ್ಯಕ್ರಮದಲ್ಲಿ ಹಿಂದಿ ಹೇರಿಕೆ ಮಾಡುವುದನ್ನು ವಿರೋಧಿಸಿ ಜುಲೈ 5ರಂದು ಮಹಾರಾಷ್ಟ್ರದಲ್ಲಿ ನಡೆಯಲಿರುವ ಪ್ರತಿಭಟನಾ ಮೆರವಣಿಗೆಯನ್ನು ಶರದ್ ಪವಾರ್ ನೇತೃತ್ವದ ಎನ್‌ಸಿಪಿ(ಎಸ್‌ಪಿ) ಕೂಡಾ ಬೆಂಬಲ ವ್ಯಕ್ತಪಡಿಸಿದೆ.

- Advertisement -

ಎನ್‌ಸಿಪಿ ಅಡಿಯಲ್ಲಿ ತ್ರಿಭಾಷಾ ಸೂತ್ರವನ್ನು ಮಹಾರಾಷ್ಟ್ರ ಸರ್ಕಾರ ಜಾರಿಗೆ ತಂದಿದ್ದು, 1ನೇ ತರಗತಿಯಿಂದ ಹಿಂದಿಯನ್ನು ಮೂರನೇ ಭಾಷೆಯಾಗಿ ಕಡ್ಡಾಯಗೊಳಿಸಿದೆ. ಈ ರೀತಿ ಹಿಂದಿ ಹೇರಿಕೆ ಮಾಡುವುದನ್ನು ವಿಪಕ್ಷಗಳು ತೀವ್ರವಾಗಿ ವಿರೋಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಮಹಾರಾಷ್ಟ್ರ ಶಾಲೆಗಳಲ್ಲಿ ಹಿಂದಿ ಹೇರಿಕೆಗೆ ವಿರೋಧ: ಮತ್ತೆ ಒಂದಾದ ರಾಜ್, ಉದ್ಧವ್ ಠಾಕ್ರೆ

“ಮಹಾರಾಷ್ಟ್ರದ ಹಿತಾಸಕ್ತಿ ಅಪಾಯದಲ್ಲಿದೆ, ಹಾಗಾಗಿ ನಾವು ಮಹಾರಾಷ್ಟ್ರದೊಂದಿಗೆ ನಿಲ್ಲುತ್ತೇವೆ. ರಾಷ್ಟ್ರದ ಹಿತಾಸಕ್ತಿ ಅಪಾಯದಲ್ಲಿರುವಾಗ, ನಾವು ರಾಜಕೀಯ ಮಾರ್ಗಗಳನ್ನು ಬದಿಗಿಟ್ಟು ರಾಷ್ಟ್ರದೊಂದಿಗೆ ನಿಲ್ಲುತ್ತೇವೆ. ಅದು ಎನ್‌ಸಿಪಿಯ ಮೂಲ ನೀತಿಯಾಗಿದೆ” ಎಂದು ಎನ್‌ಸಿಪಿ ಮಹಾರಾಷ್ಟ್ರ ಘಟಕದ ಅಧ್ಯಕ್ಷ ಜಯಂತ್ ಪಾಟೀಲ್ ಹೇಳಿದ್ದಾರೆ.

“ಮಗುವಿನ ಮಾತೃಭಾಷೆಯಲ್ಲಿ ಆರಂಭಿಕ ಶಿಕ್ಷಣ ನಡೆಯಬೇಕೆಂದು ವಾದಿಸುವ ಶಿಕ್ಷಣ ತಜ್ಞರು, ಪೋಷಕರು, ಭಾಷಾಶಾಸ್ತ್ರಜ್ಞರು ಮತ್ತು ಕಾರ್ಯಕರ್ತರು ಈ ಕ್ರಮವನ್ನು ವಿರೋಧಿಸಿದ್ದಾರೆ” ಎಂದೂ ಈ ಸಂದರ್ಭದಲ್ಲೇ ಪಾಟೀಲ್ ತಿಳಿಸಿದರು.

“ಮರಾಠಿ ಜನರು ಹಿಂದಿ ಸೇರಿದಂತೆ ಬೇರೆ ಯಾವುದೇ ಭಾಷೆಗಳನ್ನು ಕಲಿಯುವುದನ್ನು ನಾವು ವಿರೋಧಿಸುವುದಿಲ್ಲ. ಆದರೆ ಪ್ರಾಥಮಿಕ ಹಂತದಲ್ಲಿ ಮಕ್ಕಳ ಮೇಲೆ ಹಿಂದಿಯನ್ನು ಕಡ್ಡಾಯವಾಗಿ ಹೇರಿಕೆ ಮಾಡುವುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದು ಎನ್‌ಸಿಪಿ ಹೇಳಿದೆ.

ಇದನ್ನು ಓದಿದ್ದೀರಾ? ಮರಾಠಿಯನ್ನು ದುರ್ಬಲಗೊಳಿಸುವುದನ್ನು ಸಹಿಸಲಾಗದು: ಹಿಂದಿ ಹೇರಿಕೆ ವಿರುದ್ಧ ಸುಪ್ರಿಯಾ ಸುಳೆ ಆಕ್ರೋಶ

“ತ್ರಿಭಾಷಾ ನೀತಿಯನ್ನು ಮಾತೃಭಾಷೆಯನ್ನು ಬದಿಗಿಡಲು ಒಂದು ಸಾಧನವಾಗಿ ಬಳಸುತ್ತಿದ್ದರೆ, ಮರಾಠಿ ಮಾತನಾಡುವ ಸಮುದಾಯವು ಅಂತಹ ಕ್ರಮಗಳನ್ನು ಒಗ್ಗಟ್ಟಿನಿಂದ ವಿರೋಧಿಸುತ್ತದೆ” ಎಂದು ಪಾಟೀಲ್ ತಿಳಿಸಿದ್ದಾರೆ.

ಹಿಂದಿ ಹೇರಿಕೆ ವಿರುದ್ಧವಾಗಿ ಜುಲೈ 5ರಂದು ಮಹಾರಾಷ್ಟ್ರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಈಗಾಗಲೇ ಹಿಂದಿ ಹೇರಿಕೆ ವಿರುದ್ಧ ಠಾಕ್ರೆ ಸಹೋದರರಾದ ರಾಜ್ ಠಾಕ್ರೆ ಮತ್ತು ಉದ್ಧವ್ ಠಾಕ್ರೆ ಜೊತೆಯಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...