ಶರಣ ಮೇಳ ಎಂದರೆ ಜಾತಿಯಿಂದ ಮುಕ್ತರಾದ ಮನುಷ್ಯರ ಮೇಳ: ಸಿಎಂ ಸಿದ್ದರಾಮಯ್ಯ

Date:

Advertisements

ಬಸವಾದಿ ಶರಣರ ಆಶಯದ ಜಾತಿ ರಹಿತ ಸಮಾಜ ನಿರ್ಮಾಣ ಶರಣರಿಂದ ಸಾಧ್ಯ. ಶರಣ ಎಂದರೆ ಜಾತಿ-ವರ್ಗ ಇಲ್ಲದ್ದು. ಶರಣ ಮೇಳ ಎಂದರೆ ಜಾತಿಯಿಂದ ಮುಕ್ತರಾದ ಮನುಷ್ಯರ ಮೇಳ ಎಂದು ಸಿ.ಎಂ ಸಿದ್ದರಾಮಯ್ಯ ಅವರು ಹೇಳಿದರು.

ಲಿಂಗಾಯತ ಧರ್ಮ ಸಂಸ್ಥಾಪನಾ ದಿನದ ಅಂಗವಾಗಿ ಕೂಡಲಸಂಗಮದಲ್ಲಿ ಆಯೋಜಿಸಿದ್ದ 37ನೇ ಶರಣ ಮೇಳ ಉದ್ಘಾಟಿಸಿ ಮಾತನಾಡಿದ ಅವರು, “ಬಸವಾದಿ ಶರಣರು 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದರು. ನಮ್ಮ ಚಲನೆ ರಹಿತ ಜಾತಿ ವ್ಯವಸ್ಥೆಯ ಸಾಮಾಜಿಕ ವ್ಯವಸ್ಥೆಯನ್ನು ಪಟ್ಟಭದ್ರ ಹಿತಾಸಕ್ತಿಗಳು ರೂಪಿಸಿದರು. ಇದನ್ನು ಮಾಡಿದ್ದು ದೇವರಲ್ಲ ಎಂದು” ನುಡಿದರು.

“ಬಹು ಸಂಖ್ಯಾತರನ್ನು ಶಿಕ್ಷಣದಿಂದ ದೂರ ಇಡಲು ಅಸಮಾನತೆಯಿಂದ ಕೂಡಿದ ಚಾತುವರ್ಣ ವ್ಯವಸ್ಥೆಯನ್ನು ಮಾಡಿದರು. ಬಸವಾದಿ ಶರಣರ ವಚನ ಚಳವಳಿ ತಾರತಮ್ಯದಿಂದ ಕೂಡಿದ ಕರ್ಮ ಸಿದ್ಧಾಂತವನ್ನು, ಮೌಢ್ಯವನ್ನು ತೊಡೆದು ಹಾಕಿತು. ಹಣೆಬರಹ ಮತ್ತು ಕರ್ಮ ಸಿದ್ಧಾಂತವನ್ನು, ಹಿಂದಿನ ಜನ್ಮ-ಮುಂದಿನ ಜನ್ಮ ಎನ್ನುವುದನ್ನು ಬಸವಣ್ಣನವರು ಸಂಪೂರ್ಣ ತಿರಸ್ಕರಿಸಿದರು” ಎಂದರು.

Advertisements

“ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ ಎಂದು ಬಸವಾದಿ ಶರಣರು ಪ್ರತಿಪಾದಿಸಿದರು. ಧರ್ಮ ತಾರತಮ್ಯ ಮಾಡಬೇಡಿ, ಮನುಷ್ಯ ಮನುಷ್ಯನನ್ನು ದ್ವೇಷಿಸುವುದನ್ನು ಬಸವಾದಿ ಶರಣರು ವಿರೋಧಿಸಿದ್ದರು. ಈ ಕಾರಣಕ್ಕೇ ಇವ ನಮ್ಮವ, ಇವ ನಮ್ಮವ ಎನ್ನುವ ಉದಾತ್ತವಾದ ಮೌಲ್ಯವನ್ನು 800 ವರ್ಷಗಳ ಹಿಂದೆಯೇ ಹೇಳಿದರು. ಹೀಗಾಗಿ ಜಾತಿ ವ್ಯವಸ್ಥೆಯನ್ನು ಶರಣರೇ ಹೋಗಲಾಡಿಸಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಂದು ಪಕೋಡ, ಇಂದು ಶ್ರೀರಾಮ ಭಜನೆ; ನಿರುದ್ಯೋಗ ನಿವಾರಣೆಯಾಯಿತೇ?

“ಜಾತಿ ಕಾರಣಕ್ಕೆ ಹಿಂದುಳಿದಿರುವ ಸಮುದಾಯಗಳಿಗೆ ಆರ್ಥಿಕ ಶಕ್ತಿ ನೀಡಬೇಕು. ಜಾತಿ, ವರ್ಗ, ಅಂತಸ್ತನ್ನು ಸೋಕಿಸಿಕೊಳ್ಳದೆ ಇರುವವರು ಮಾತ್ರ ನಿಜ ಶರಣರು. ಪಟ್ಟಭದ್ರ ಹಿತಾಸಕ್ತರು ಇರುವುದು ಬಹಳ ಕಡಿಮೆ ಜನ. ಆದರೆ ಇವರು ಸ್ಟ್ರಾಂಗ್ ಇದ್ದಾರೆ. ಆದರೆ, ಶೋಷಣೆಗೆ, ದೌರ್ಜನ್ಯಕ್ಕೆ ಒಳಗಾದವರು ಬಹುಸಂಖ್ಯಾತರು. ಇವರು ಒಗ್ಗಟ್ಟಾಗಬೇಕು” ಎಂದರು.

ಬಸವಧರ್ಮ ಪೀಠದ ಪೀಠಾಧ್ಯಕ್ಷರಾದ ಡಾ.ಮಾತೆಗಂಗಾದೇವಿಯವರು, ಪೀಠದ ಉಪಾದ್ಯಕ್ಷ ಮಹದೇಶ್ವರ ಸ್ವಾಮೀಜಿ, ಕುಂಬಳಗೋಡಿನ ಬಸವಯೋಗಿ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಅಧ್ಯಕ್ಷತೆಯನ್ನು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ವಹಿಸಿದ್ದರು.

ಸಚಿವರಾದ ಬೈರತಿ ಸುರೇಶ್, ತಿಮ್ಮಾಪುರ ಅವರ ಜತೆಗೆ ಶಾಸಕರಾದ ಎಂ.ನರೇಂದ್ರ ಸ್ವಾಮಿ, ಎಚ್.ವೈ.ಮೇಠಿ, ರಾಘವೇಂದ್ರ ಹಿಟ್ನಾಳ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X