ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಅಭಿಯಾನ; ಶಶಿ ತರೂರ್ ನೇತೃತ್ವದ ಸರ್ವಪಕ್ಷ ನಿಯೋಗ ರಚನೆ

Date:

ಪಾಕಿಸ್ತಾನದ ಭಯೋತ್ಪಾದನೆ ವಿರುದ್ಧ ಭಾರತ ರಾಜತಾಂತ್ರಿಕ ಅಭಿಯಾನ ನಡೆಸಲು ನಿರ್ಧರಿಸಿದೆ. ವಿಶ್ವ ವೇದಿಕೆಯಲ್ಲಿ ಉಗ್ರವಾದದ ವಿರುದ್ಧ ಭಾರತದ ಶೂನ್ಯ ಸಹಿಷ್ಣುತೆಯ ಬಗ್ಗೆ ತಿಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಸರ್ವಪಕ್ಷ ನಿಯೋಗವನ್ನು ಶನಿವಾರ ರಚಿಸಿದೆ. ಈ ನಿಯೋಗದ ನೇತೃತ್ವವನ್ನು ಕೇಂದ್ರವು ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ನೀಡಿದೆ.

- Advertisement -

ಆಪರೇಷನ್ ಸಿಂಧೂರ ಬಳಿಕ ಕೇಂದ್ರ ಸರ್ಕಾರವನ್ನು ಹೊಗಳಿದ್ದಕ್ಕೆ ಸ್ವಪಕ್ಷದಿಂದಲೇ ಶಶಿ ತರೂರ್ ಟೀಕೆಗೆ ಒಳಗಾಗಿದ್ದರು. ಇದೀಗ ಕೇಂದ್ರವು ಈ ನಿಯೋಗಕ್ಕೆ ಕಾಂಗ್ರೆಸ್‌ ನೀಡಿದ್ದ ನಾಲ್ಕು ಹೆಸರುಗಳನ್ನು ಬದಿಗಿಟ್ಟು ತರೂರ್ ಅವರನ್ನು ಆಯ್ಕೆ ಮಾಡಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಸಿಎಎ ರದ್ದು: ಶಶಿ ತರೂರ್

ಒಟ್ಟು ಏಳು ಮಂದಿಯನ್ನು ಒಳಗೊಂಡ ಸರ್ವಪಕ್ಷ ನಿಯೋಗವನ್ನು ರಚಿಸಲಾಗಿದೆ. ಎಲ್ಲಾ ರೀತಿಯ ಭಯೋತ್ಪಾದನೆಯನ್ನು ಎದುರಿಸಲು ಭಾರತ ಒಮ್ಮತ ಮತ್ತು ದೃಢನಿಶ್ಚಯದ ವಿಧಾನವನ್ನು ಪ್ರದರ್ಶಿಸುವುದೇ ಈ ಕಾರ್ಯಾಚರಣೆಯ ಗುರಿಯಾಗಿದೆ ಎಂದ ಸಂಸದೀಯ ವ್ಯವಹಾರಗಳ ಸಚಿವಾಲಯ ಹೇಳಿದೆ.

ನಿಯೋಗದಲ್ಲಿರುವ ನಾಯಕರು ಯಾರು?

1- ಶಶಿ ತರೂರ್, ಕಾಂಗ್ರೆಸ್

2- ರವಿಶಂಕರ್ ಪ್ರಸಾದ್, ಬಿಜೆಪಿ

3- ಸಂಜಯ್ ಕುಮಾರ್ ಝಾ, ಜೆಡಿಯು

4- ಬೈಜಯಂತ್ ಪಾಂಡಾ, ಬಿಜೆಪಿ

5- ಕನಿಮೋಳಿ ಕರುಣಾನಿಧಿ, ಡಿಎಂಕೆ

6- ಸುಪ್ರಿಯಾ ಸುಳೆ, ಎನ್‌ಸಿಪಿ

7- ಶ್ರೀಕಾಂತ್ ಏಕನಾಥ್ ಶಿಂದೆ, ಶಿವಸೇನೆ

ಸುಮಾರು 40 ಬಹು-ಪಕ್ಷ ಸಂಸದರು ಏಳು ಗುಂಪುಗಳನ್ನು ರಚಿಸುತ್ತಾರೆ. ವಿಶ್ವದ ವಿವಿಧ ಪ್ರದೇಶಗಳಿಗೆ ಪ್ರಯಾಣಿಸುತ್ತಾರೆ. ಈ ಏಳು ನಿಯೋಗಗಳ ಸದಸ್ಯರ ಹೆಸರುಗಳನ್ನು ಇನ್ನೂ ಘೋಷಿಸಲಾಗಿಲ್ಲ. ಪ್ರತಿ ನಿಯೋಗವು ಏಳರಿಂದ ಎಂಟು ಸದಸ್ಯರನ್ನು ಹೊಂದಿರುವ ಸಾಧ್ಯತೆಯಿದೆ. ನಾಲ್ಕರಿಂದ ಐದು ದೇಶಗಳಿಗೆ ಭೇಟಿ ನೀಡಬಹುದು ಎಂದು ವರದಿಯಾಗಿದೆ.

ಮೇ 23ರಿಂದ ಸರ್ವಪಕ್ಷ ನಿಯೋಗ ಪ್ರವಾಸ ಆರಂಭಿಸಲಿದ್ದು ಹತ್ತು ದಿನಗಳವರೆಗೆ ಈ ಅಭಿಯಾನ ನಡೆಸುವ ನಿರೀಕ್ಷೆಯಿದೆ. ಅಮೆರಿಕ, ಯುನೈಟೆಡ್ ಕಿಂಗ್‌ಡಮ್(ಯುಕೆ), ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ), ದಕ್ಷಿಣ ಆಫ್ರಿಕಾ ಮತ್ತು ಜಪಾನ್ ಸೇರಿದಂತೆ ಹಲವು ಪ್ರಮುಖ ದೇಶಗಳ ರಾಜಧಾನಿಗೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ವರದಿ ಉಲ್ಲೇಖಿಸಿದೆ.

ಇದನ್ನು ಓದಿದ್ದೀರಾ? ಆಪರೇಷನ್ ಸಿಂಧೂರ | ಕಾರ್ಯಾಚರಣೆ ಮಾಹಿತಿ ವಿವರಿಸಿದ ಸೋಫಿಯಾ ಖುರೇಶಿ ಬೆಳಗಾವಿಯ ಸೊಸೆ

ಏಪ್ರಿಲ್ 22ರಂದು ಪಾಕಿಸ್ತಾನದ ಉಗ್ರ ಸಂಘಟನೆಯು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದನಾ ದಾಳಿ ನಡೆಸಿ 26 ಪ್ರವಾಸಿಗರನ್ನು ಕೊಂದಿದೆ. ಈ ದಾಳಿ ಹೊಣೆಯನ್ನು ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (ಎಲ್‌ಇಟಿ)ದ ಒಂದು ಶಾಖೆಯಾದ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಹೊತ್ತುಕೊಂಡಿದೆ.

ಈ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಮೇ 7ರಂದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಆಪರೇಷನ್ ಸಿಂಧೂರ ಹೆಸರಲ್ಲಿ ದಾಳಿ ನಡೆಸಿವೆ. ನೂರಕ್ಕೂ ಅಧಿಕ ಭಯೋತ್ಪಾದಕರನ್ನು ಕೊಲ್ಲಲಾಗಿದೆ ಎಂದು ಹೇಳಲಾಗಿದೆ. ಅದಾದ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಅಧಿಕೃತವಾಗಿ ಯುದ್ಧ ಆರಂಭಿಸುವುದಕ್ಕೂ ಮುನ್ನವೇ ಕದನ ವಿರಾಮ ಒಪ್ಪಂದ ಮಾಡಿಕೊಳ್ಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...