ಶಶಿ ತರೂರ್‌ ಕಾರು ಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿದ ಗುಂಪು

Date:

ಶಶಿ ತರೂರ್‌ ಬೆಂಗಾವಲು ಪಡೆಯನ್ನು ರಸ್ತೆಯಲ್ಲಿ ತಡೆದು ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ವರದಿಯಾಗಿದೆ, ಕೇರಳದ ವಂಡೂರಿನಲ್ಲಿ ಐದು ಜನರಿದ್ದ ಗುಂಪೊಂದು ತರೂರ್‌ರ ಗನ್‌ಮ್ಯಾನ್‌ ಮತ್ತು ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ.

- Advertisement -

ಗನ್‌ಮ್ಯಾನ್‌ ನೀಡಿದ ದೂರಿನ ಆಧಾರದ ಮೇಲೆ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆ ಮಾಡಿದವರ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮಲಪುರಂ ಜಿಲ್ಲೆಯ ವಂಡೂರಿನಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ಘಟನೆ ನಡೆದಿದೆ. ಸಂಚಾರ ದಟ್ಟಣೆಯಲ್ಲಿ ಶಶಿ ತರೂರ್‌ ವಾಹನ ಚಾಲಕ ಕಾರು ಹಾರ್ನ್‌ ಮಾಡಿದ್ದಾರೆ. ಇದರಿಂದ ಕಿರಿಕಿರಿಗೊಳಗಾದ ಗುಂಪು ಚಾಲಕನ ಮೇಲೆ ಹಲ್ಲೆ ನಡೆಸಿದೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದು ಬಂದಿದೆ.

ಇದನ್ನು ಓದಿ>>ಕೇರಳ ಚುನಾವಣೆ | ಪ್ರಗತಿಪರ ರಾಜ್ಯದಲ್ಲಿ ಮಹಿಳೆಯರಿಗಿಲ್ಲ ಟಿಕೆಟ್: ಪರಂಪರಾಗತ ಅನ್ಯಾಯ ಮುಂದುವರಿಕೆ

ವಂಡೂರಿನ ಚಿಲಿತೋಡಿಯಲ್ಲಿ ಘಟನೆ ನಡೆದಿದ್ದು, ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಶುಕ್ರವಾರ ರಾತ್ರಿ 7:30 ರ ಸುಮಾರಿಗೆ ತಿರುವಳಿ ಸಮೀಪದ ಚಿಲಿತೋಡಿ ಸೇತುವೆಯ ಮೇಲೆ ತಮ್ಮ ಕಾರಿನಲ್ಲಿ ಸಂಚರಿಸುತ್ತಿದ್ದರು. ಕಾರು ಅಡ್ಡಗಟ್ಟಿದ ಐವರ ಗುಂಪು ಚಾಲಕನಿಗೆ ಥಳಿಸಿದಾಗ ತಡೆಯಲು ಬಂದ ಗನ್‌ಮ್ಯಾನ್‌ನ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಪೊಲೀಸರ ಹೇಳಿಕೆಯ ಪ್ರಕಾರ ಸೇತುವೆ ಕಿರಿದಾಗಿದ್ದು, ಕಿಕ್ಕಿರಿದ ವಾಹನ ದಟ್ಟಣೆಯ ನಡುವೆ ಸಿಲುಕಿದ್ದ ಸಂಸದರ ಕಾರು ಚಾಲಕ ಮುಂದೆ ಇದ್ದ ವಾಹನಗಳನ್ನು ದಾರಿ ಬಿಡುವಂತೆ ಕೇಳಿಕೊಂಡ ಸಂದರ್ಭದಲ್ಲಿ ಘಟನೆ ನಡೆದಿದೆ. ಪೊಲೀಸರು ಒಬ್ಬ ಆರೋಪಿಯನ್ನು ವಶಕ್ಕೆ ಪಡೆದಿದ್ದು ಉಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದಿದ್ದಾರೆ. ಬಂಧಿತ ಆರೋಪಿಯ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಶಶಿ ತರೂರ್‌ ವಂಡೂರಿನಲ್ಲಿ ಎ ಪಿ ಅನಿಲ್‌ ಕುಮಾರ್‌ ಪರ ಪ್ರಚಾರಕ್ಕೆ ತೆರಳಿದ್ದರು. ಪ್ರಚಾರ ಮುಗಿಸಿ ಹಿಂತಿರುಗುವಾಗ ವಾಹನ ದಟ್ಟಣೆಯ ನಡುವೆ ಸಂಸದರ ಕಾರು ಸಿಲುಕಿದೆ. ಕಾರು ಹಾರ್ನ್‌ ಮಾಡಿದ ಚಾಲಕನ ಮೇಲೆ ಎರಗಿದ ಗುಂಪನ್ನು ತಡೆಯಲು ಸಂಸದರ ಭದ್ರತಾ ಸಿಬ್ಬಂದಿ ಕಾರಿನಿಂದ ಕೆಳಗಿಳಿದಾಗ ಅವರನ್ನು ಮನಸ್ಸಿಗೆ ಬಂದಂತೆ ಥಳಿಸಿದ ಗುಂಪು ತರೂರ್‌ ಮೇಲೆ ಹಲ್ಲೆಗೆ ಪ್ರಯತ್ನಿಸಿದರು. ಸದ್ಯ ಭದ್ರತಾ ಸಿಬ್ಬಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಉಳಿದಂತೆ ಎಲ್ಲರೂ ಸುರಕ್ಷಿತರಾಗಿದ್ದಾರೆ ಎಂದು ಸಂಸದ ಶಶಿ ತರೂರ್‌ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....