ಚೈತ್ರಾ ಕುಂದಾಪುರ ಪ್ರಕರಣ | ನಾನು ಆಶ್ರಯ ನೀಡಿಲ್ಲ, ನೋಟಿಸ್ ಬಂದಿಲ್ಲ: ಕಾಂಗ್ರೆಸ್‌ನ ಸುರಯ್ಯಾ ಅಂಜುಮ್‌

Date:

Advertisements
  • ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ವಂಚನೆ ಮಾಡಿದ್ದ ಚೈತ್ರಾ ಕುಂದಾಪುರ
  • ಮನೆಯಲ್ಲಿ ಆಶ್ರಯ ನೀಡಿದ್ದಕ್ಕೆ ಸುರಯ್ಯಾ ಅಂಜುಮ್‌ಗೆ ಸಿಸಿಬಿಯಿಂದ ನೋಟಿಸ್ ಎಂಬ ಸುದ್ದಿ

ವಂಚನೆ ಪ್ರಕರಣದ ಆರೋಪಿ, ಸಂಘಪರಿವಾರದಲ್ಲಿ ಗುರುತಿಸಿಕೊಂಡಿದ್ದ ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ್ದಕ್ಕೆ ನೋಟಿಸ್ ಕಳುಹಿಸಲಾಗಿದೆ ಎಂಬ ಸುದ್ದಿಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ನ ಮಾಧ್ಯಮ ವಕ್ತಾರೆ ಸುರಯ್ಯಾ ಅಂಜುಮ್, ”ನನಗೆ ಯಾವುದೇ ನೋಟಿಸ್ ಬಂದಿಲ್ಲ. ಎಲ್ಲವೂ ಸುಳ್ಳು ಸುದ್ದಿ” ಎಂದು ತಿಳಿಸಿದ್ದಾರೆ.

ಘಟನೆಯ ಸಂಬಂಧ ಈ ದಿನ.ಕಾಮ್ ಸುರಯ್ಯಾ ಅಂಜುಮ್ ಅವರನ್ನು ಕರೆ ಮಾಡಿ ಮಾತನಾಡಿಸಿದಾಗ, ”ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ವಂಚನೆ ಮಾಡಿರುವ ಆರೋಪದಲ್ಲಿ ಚೈತ್ರಾ ಕುಂದಾಪುರಗೆ ನಾನು ಆಶ್ರಯ ನೀಡಿದ್ದೇನೆ. ಹಾಗಾಗಿ ನೋಟಿಸ್ ಬಂದಿದೆ ಎಂಬುದು ಸುಳ್ಳು. ಆಕೆಯನ್ನು ನಿನ್ನೆ ರಾತ್ರಿ ಉಡುಪಿಯ ಕೃಷ್ಣಮಠದ ರಾಜಾಂಗಣದ ಬಳಿ ಪೊಲೀಸರು ಬಂಧಿಸಿದ್ದಾರೆ. ಒಂದು ವೇಳೆ ನನ್ನ ಬಳಿಯಲ್ಲಿದ್ದಾಗ ಬಂಧಿಸಿದ್ದಿದ್ದರೆ ಪೊಲೀಸರು ನನ್ನನ್ನು ಕೂಡ ಬಂಧಿಸಬೇಕಿತ್ತಲ್ಲವೇ?” ಎಂದು ಕೇಳಿದರು.

ಚೈತ್ರಾ

“ನನ್ನ ಬಗ್ಗೆ ದ್ವೇಷ ಇರುವವರು ಸೋಷಿಯಲ್ ಮೀಡಿಯಾಗಳಲ್ಲಿ ಸುಳ್ಳು ಸುದ್ದಿ ಹರಿಯಬಿಡುತ್ತಿದ್ದಾರೆ. ಒಂದು ವೇಳೆ ಸಿಸಿಬಿ ಪೊಲೀಸರು ಏನಾದರೂ ನೋಟಿಸ್ ಕಳುಹಿಸಿದರೆ ನಾನು ಉತ್ತರಿಸುವೆ. ನಾನು ಆಶ್ರಯ ನೀಡಿದ್ದೇನೆ ಎಂಬುದು ಸುಳ್ಳು. ಸರಿಯಾದ ಮಾಹಿತಿ ಇಲ್ಲದೆ ನನ್ನ ತೇಜೋವಧೆ ಮಾಡಲಾಗುತ್ತಿದೆ. ಈ ಬಗ್ಗೆ ಮಾನನಷ್ಟ ಮೊಕದ್ದಮೆ ಹೂಡುವ ಬಗ್ಗೆ ಚಿಂತಿಸುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

Advertisements

ಹಿಂದೂಪರ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಚೈತ್ರಾ ಕುಂದಾಪುರ ಹಾಗೂ ಕಾಂಗ್ರೆಸ್‌ನ ಸುರಯ್ಯಾ ಅಂಜುಮ್, ಉಡುಪಿಯ ಖಾಸಗಿ ಮಾಧ್ಯಮವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಸಹೋದ್ಯೋಗಿಗಳಾಗಿದ್ದರು ಎಂದು ತಿಳಿದುಬಂದಿದೆ.

ಏನಿದು ಪ್ರಕರಣ?
ಹಿಂದುತ್ವದ ಕುರಿತು ಉಗ್ರ ಭಾಷಣದ ಮೂಲಕ ಸಾಮಾಜಿಕ ಸಾಮರಸ್ಯ ಹಾಳು ಮಾಡುತ್ತಿದ್ದ ಚೈತ್ರಾ ಕುಂದಾಪುರ ಉದ್ಯಮಿಯೊಬ್ಬರಿಗೆ ಎಂಎಲ್‌ಎ ಟಿಕೆಟ್ ಕೊಡಿಸೋದಾಗಿ 5 ಕೋಟಿ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದಾರೆ.

ಕಳೆದ ಏಳು ದಿನಗಳಿಂದ ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರಳನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ನಿನ್ನೆ ಉಡುಪಿಯಲ್ಲಿ ಬಂಧಿಸಿದ್ದರು.

ಕಾಂಗ್ರೆಸ್ ಮಾಧ್ಯಮ ವಕ್ತಾರೆ ಸುರಯ್ಯಾ ಅಂಜುಮ್ ಮನೆಯಲ್ಲಿ ಅವಿತು ಕುಳಿತಿದ್ದಳು. ಹಾಗಾಗಿ, ಅಂಜುಂಗೆ ಸಿಸಿಬಿ ಪೊಲೀಸರು ನೋಟಿಸ್ ಕಳುಹಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದರು ಎಂದು ವರದಿಯಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X