ಜಗದೀಶ್ ಶೆಟ್ಟರ್ ನಮ್ಮ ವಿಶ್ವಾಸಕ್ಕೆ ದ್ರೋಹವೆಸಗಿದ್ದಾರೆ: ಡಿ ಕೆ ಶಿವಕುಮಾರ್

Date:

ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಸೇರಿಕೊಂಡ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, “ಜಗದೀಶ್ ಶೆಟ್ಟರ್ ಅವರನ್ನು ಗೌರವದಿಂದ ನಡೆಸಿಕೊಳ್ಳಲಾಗಿದ್ದರೂ ನಮ್ಮ ವಿಶ್ವಾಸಕ್ಕೆ ದ್ರೋಹ ಬಗೆದಿದ್ದಾರೆ” ಎಂದು ಬೇಸರದಿಂದ ನುಡಿದಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕಳೆದ ವಿಧಾನಸಭಾ ಚುನಾವಣೆಯ ವೇಳೆ ಬಿಜೆಪಿಯಿಂದ ಅವಮಾನ ಆಯಿತು ಎಂದು ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದರು. ಬಳಿಕ ಟಿಕೆಟ್ ನೀಡಲಾಯಿತಾದರೂ 35 ಸಾವಿರ ಮತಗಳಿಂದ ಸೋತಿದ್ದರು. ಆದರೂ ಕೂಡ ಕಾಂಗ್ರೆಸ್ ಪಕ್ಷ ಅವರಿಗೆ ಎಂಎಲ್‌ಸಿ ಸ್ಥಾನ ನೀಡಿ ಗೌರವದಿಂದ ನಡೆಸಿಕೊಂಡಿದೆ. ಶೆಟ್ಟರ್ ಅವರನ್ನು ಒತ್ತಡದಿಂದ ಬಿಜೆಪಿಗೆ ಕರೆಸಿಕೊಂಡಿದ್ದಾರೋ ಏನೋ ಗೊತ್ತಿಲ್ಲ” ಎಂದು ತಿಳಿಸಿದರು.

“ಜಗದೀಶ್ ಶೆಟ್ಟರ್ ಅವರೊಂದಿಗೆ ನಿನ್ನೆ ಬೆಳಗ್ಗೆ ಕೂಡ ಇದೇ ವಿಚಾರವನ್ನು ಮಾತನಾಡಿದ್ದೆ. ಆಗ ನಾನು ಮತ್ತೆ ಬಿಜೆಪಿಗೆ ಹೋಗುವ ಕೆಲಸ ಮಾಡುವುದಿಲ್ಲ. ಕಾಂಗ್ರೆಸ್‌ಗೆ ದ್ರೋಹ ಬಗೆಯಲ್ಲ. ಯಾಕೆಂದರೆ ರಾಜಕಾರಣದಲ್ಲಿ ಸ್ಥಾನ ನೀಡುವ ಮೂಲಕ ನನಗೆ ಮರುಜೀವ ಕೊಟ್ಟಿದೆ. ಬಿಜೆಪಿಗೆ ಸೇರುವ ಕೆಲಸ ಮಾಡಲ್ಲ ಎಂದಿದ್ದರು. ಅದನ್ನೇ ನಿನ್ನೆ ಮೈಸೂರಿನಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದೆ. ಇವತ್ತು ನೋಡಿದರೆ ದೆಹಲಿಗೆ ಹೋಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿರುವ ವಿಚಾರ ಕೆಪಿಸಿಸಿ ಕಚೇರಿಯ ಮೂಲಕ ತಿಳಿಯಿತು” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಟಿಕೆಟ್ ತಪ್ಪಿಸಿದಾಗ ದೇಶದ ಹಿತ ಗೊತ್ತಿರಲಿಲ್ವಾ? ಡಿಕೆಶಿ ಪ್ರಶ್ನೆ

ದೇಶದ ಹಿತದೃಷ್ಟಿಯಿಂದ ಮತ್ತೆ ಬಿಜೆಪಿಗೆ ಸೇರ್ಪಡೆಗೊಂಡಿದ್ದೇನೆ ಎಂದು ಜಗದೀಶ್ ಶೆಟ್ಟರ್ ದೆಹಲಿಯಲ್ಲಿ ನೀಡಿರುವ ಹೇಳಿಕೆಯ ಬಗ್ಗೆ ಪತ್ರಕರ್ತರು ಕೇಳಿದಾಗ, “ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ತಪ್ಪಿಸಿದಾಗ ದೇಶದ ಹಿತ ಗೊತ್ತಿರಲಿಲ್ವಾ?” ಎಂದು ಡಿಕೆ ಶಿವಕುಮಾರ್ ಮರು ಪ್ರಶ್ನೆ ಹಾಕಿದರು.

ಇದನ್ನು ಓದಿದ್ದೀರಾ? ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕು; ಮರಳಿ ಪಕ್ಷ ಸೇರಿದ್ದೇನೆ: ಜಗದೀಶ್‌ ಶೆಟ್ಟರ್

ಕಾಂಗ್ರೆಸ್ ಪಕ್ಷದಲ್ಲಿ ಶೆಟ್ಟರ್​ಗೆ​​​​ ಯಾವುದೇ ಅನ್ಯಾಯ ಆಗಿಲ್ಲ: ಸಿಎಂ ಸಿದ್ದರಾಮಯ್ಯ

ಮತ್ತೊಂದೆಡೆ ಸದ್ಯದ ರಾಜಕೀಯ ಬೆಳವಣಿಗೆಯ ವಿಚಾರದಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ‌ ಸಿದ್ದರಾಮಯ್ಯ, “ಕಾಂಗ್ರೆಸ್ ಪಕ್ಷದಲ್ಲಿ ಶೆಟ್ಟರ್​ಗೆ​​​​ ಯಾವುದೇ ಅನ್ಯಾಯ ಆಗಿಲ್ಲ” ಎಂದು ತಿಳಿಸಿದ್ದಾರೆ.

“ನಾವು ಅವರಿಗೆ ಟಿಕೆಟ್ ಕೊಟ್ಟಿದ್ದೆವು. ಚುನಾವಣೆಯಲ್ಲಿ ಸೋತರೂ ಶೆಟ್ಟರನ್ನು ಎಂಎಲ್​ಸಿ ಮಾಡಿದ್ದೆವು. ಕಾಂಗ್ರೆಸ್ ಪಕ್ಷದಲ್ಲಿ ಅವರಿಗೆ ಯಾವುದೇ ಅನ್ಯಾಯ ಆಗಿಲ್ಲ. ಒಮ್ಮೆ ಅವರು ನನಗೆ ಬಿಜೆಪಿಯಲ್ಲಿ ಅವಮಾನ ಆಗಿದೆ ಮತ್ತೆ ಹೋಗಲ್ಲ ಎಂದಿದ್ದರು. ಈಗ ಹೋಗಿದ್ದಾರೆ” ಎಂದು ಸಿದ್ದರಾಮಯ್ಯ ತಿಳಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. ಇದೇನು ಅನಿರೀಕ್ಷಿತ ಅಲ್ಲ, ಕೆಟ್ಟ ಮೇಲಾದರೂ
    ನಿಮಗೆ ಬುದ್ಧಿ ಬರಲಿ.

  2. ಧಾರವಾಡದ ಕೇಂದ್ರ ಸಚಿವರನ್ನು ಮತ್ತೊಮ್ಮೆ ಗೆಲ್ಲಿಸಲು ಜಗದೀಶ್ ಶೆಟ್ಟರ್ ಎರಡನೇ ಹಂತದ ಬಲಿ,,,ಪಕ್ಷ ಬಿಡುವಾಗ ಬೈದಾಡಿಕೊಂಡು ಈಗ ಹೋಗಿ ಮತ್ತೆ ಅವರು ಎದುರಿಗೇ ಅದ್ಹೇಗೆ ಕೂಡುವರೋ,,, ಕಾರ್ಯಕರ್ತರಿಗೆ ಕೆಟ್ಟ ಅನುಭವ,,, ಏನೋ ಭಯ ಇರಬಹುದು ಅಷ್ಟು ಅವಮಾನ ಅನುಭವಿಸಿಯೂ ಮತ್ತೆ ವಾಪಸ್ ಹೋಗುವುದೆಂದರೆ,,,

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಬಿಎಂಪಿ | ನೀರಿನ ಟ್ಯಾಂಕರ್ ಸ್ವಯಂ ನೋಂದಣಿಗೆ ಮಾರ್ಚ್‌ 7 ಕೊನೆ ದಿನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನೀರು ಪೂರೈಕೆ ಮಾಡುವ...

ರಾಮೇಶ್ವರಂ ಕೆಫೆ | ಎನ್‌ಐಎ, ಐಬಿಗೆ ಸ್ಪೋಟದ ಬಗ್ಗೆ ಮಾಹಿತಿ: ಅಲೋಕ್​ ಮೋಹನ್

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಒಟ್ಟು 9 ಮಂದಿ ಗಂಭೀರವಾಗಿ...

ಬೆಂಗಳೂರು | ರಾಮೇಶ್ವರಂ ಕೆಫೆ ಸ್ಪೋಟ; ಎಲ್ಲ ಆಯಾಮಗಳಲ್ಲಿ ತನಿಖೆಗೆ ಮುಂದಾದ ಪೊಲೀಸರು

ಶುಕ್ರವಾರ ನಡೆದ ಘಟನೆ ರಾಜ್ಯ ರಾಜಧಾನಿ ಬೆಂಗಳೂರು ಜನತೆಯನ್ನು ಬೆಚ್ಚಿ ಬೀಳಿಸಿದೆ. ವೈಟ್...

ದಿ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆ: ಸಿದ್ದರಾಮಯ್ಯ

ಬೆಂಗಳೂರಿನ ದಿ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿರುವ ಸ್ಫೋಟದ ಬಗ್ಗೆ ತನಿಖೆ ನಡೆಯುತ್ತಿದೆ....