ಧಾರವಾಡ | ಶೆಟ್ಟರ್ ಕಾಂಗ್ರೆಸ್ ಸೇರಿದ್ದು ಆನೆಬಲ ಬಂದಂತಾಗಿದೆ: ಕೆಪಿಸಿಸಿ ರಾಜ್ಯ ವಕ್ತಾರ ನೀರಲಕೇರಿ

Date:

  • ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಆನೆಬಲ
  • 40% ಕಮಿಷನ್ ಸರ್ಕಾರದಿಂದ ಜಗದೀಶ್ ಶೆಟ್ಟರ್ ತುಳಿತ

ಉತ್ತರ ಕರ್ನಾಟಕದ ಪ್ರಭಾವಿ ರಾಜಕಾರಣಿ ಹಾಗೂ ಸಜ್ಜನ, ಜನಾನುರಾಗಿಯಾದ ಜಗದೀಶ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಆನೆಬಲ ಬಂದಂತಾಗಿದೆ ಎಂದು ಕೆಪಿಸಿಸಿ ರಾಜ್ಯ ವಕ್ತಾರ ಪಿ.ಎಚ್ ನೀರಲಕೇರಿ ಹೇಳಿದ್ದಾರೆ.

ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಜಗದೀಶ್ ಶೆಟ್ಟರ್‌ರನ್ನು ಹುಬ್ಬಳ್ಳಿಯಲ್ಲಿ ಭೇಟಿಯಾಗಿ ಅವರು ಅಭಿನಂದಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿ, “ಶೆಟ್ಟರ್ ಅವರಿಂದ ಉತ್ತರ ಕರ್ನಾಟಕ ಭಾಗದಲ್ಲಿ ಈ ಸಾರಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದ್ದು, ವಿಶೇಷವಾಗಿ ಧಾರವಾಡ ಜಿಲ್ಲೆಯಲ್ಲಿ ಪಕ್ಷಕ್ಕೆ ಶಕ್ತಿ ಸಿಗಲಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? : ರಾಮದಾಸ್‌ಗೆ ಕೈತಪ್ಪಿದ ಟಿಕೆಟ್; ಮಾತುಕತೆಗೆ ಬಂದಿದ್ದ ಪ್ರತಾಪ್ ಸಿಂಹ ಬರಿಗೈಲಿ ವಾಪಸ್‌

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“40% ಕಮಿಷನ್ ಸರ್ಕಾರವಾಗಿರುವ ಬಿಜೆಪಿಯಲ್ಲಿ ಶೆಟ್ಟರ್ ಅವರು ತುಳಿತಕ್ಕೆ ಒಳಗಾಗಿದ್ದರು. ಅವರ ಸ್ವಾಭಿಮಾನಕ್ಕೆ ತೀವ್ರ ದಕ್ಕೆಯಾಗಿತ್ತು. ಭವಿಷ್ಯದಲ್ಲಿ ಕಾಂಗ್ರೆಸ್ ಹಾಗೂ ಧಾರವಾಡ ಜಿಲ್ಲೆಗೆ ಶೆಟ್ಟರ್ ಅವರಿಂದ ಉತ್ತಮ ಕೆಲಸಗಳು ಆಗಲಿವೆ” ಎಂದು ಹೇಳಿದ್ದಾರೆ.

ಇದೇ ವೇಳೆ ಸಿದ್ದಣ್ಣ ಕಂಬಾರ, ಪ್ರೊ. ಗಲಗಲಿ ಸೇರಿದಂತೆ ಅವಳಿ ಜಿಲ್ಲೆಯ ಹಲವು ನಾಯಕರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಜೆಡಿಎಸ್ ಸಂಸದ ಹಾಗೂ ಹಾಸನ...

‘ಬರ ಪರಿಹಾರ ಸಾಕು’ ಎಂದಿರುವ ಕುಮಾರಸ್ವಾಮಿ ನಾಡದ್ರೋಹಿ: ಡಿಸಿಎಂ ಡಿಕೆಶಿ ವಾಗ್ದಾಳಿ

"ಕೇಂದ್ರ ಸರ್ಕಾರ ಕರ್ನಾಟಕದ ಬರಕ್ಕೆ ಅಲ್ಪ ಪರಿಹಾರ ಮೊತ್ತ ಘೋಷಿಸಿದ್ದು, ನಾವು...

ಹಿಂದುಳಿದ ಸಮುದಾಯಗಳೇ ಎಚ್ಚರ, ಮೋದಿ ನಿಮ್ಮ ಹಾದಿ ತಪ್ಪಿಸುತ್ತಿದ್ದಾರೆ: ಘರ್ಜಿಸಿದ ಸಿದ್ದರಾಮಯ್ಯ

ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ. ಮೋದಿ ನಿಮ್ಮ ಹಾದಿ ತಪ್ಪಿಸಿ ಮುಸ್ಲಿಮರ...