ಶಿಗ್ಗಾಂವಿ | ಮನೆಗಳ ಹಕ್ಕುಪತ್ರ ನೀಡದ್ದಕ್ಕೆ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ

Date:

ಮನೆಗಳಿಗೆ ಹಕ್ಕುಪತ್ರವನ್ನೇ ನೀಡಿಲ್ಲ ಎಂದು ಆರೋಪಿಸಿ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಸವಣೂರಿನ ದಂಡಿನಪೇಟೆಯ 500ಕ್ಕೂ ಹೆಚ್ಚು ಮತದಾರರು, ಮತದಾನ ಬಹಿಷ್ಕಾರ ಮಾಡಿದ್ದಾರೆ.

- Advertisement -

‘ಚುನಾವಣಾ ಬಹಿಷ್ಕಾರ ಪ್ರದೇಶ’ ಎಂದು ಫಲಕ ಹಾಕಿರುವ ಮತದಾರರು, “ನಮಗೆ ಮನೆಯ ಹಕ್ಕುಪತ್ರ ನೀಡಿಲ್ಲ” ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಉಳುವವನೇ ಭೂಮಿ ಒಡೆಯ ದಲಿತನ ಜಮೀನನ್ನು ಬೇರೊಬ್ಬ ವ್ಯಕ್ತಿಗೆ ಮಾಡಿಕೊಂಡ ಕಂದಾಯ ಇಲಾಖೆ. ಮೂಲ ನಿವಾಸಿಗಳಿಗೆ ಹಕ್ಕು ಪತ್ರ ನೀಡುತ್ತೇವೆ ಎಂದು ಉಪ ವಿಭಾಗಾಧಿಕಾರಿಗಳ ಸುಳ್ಳು ಭರವಸೆ” ಎಂದು ಫಲಕದಲ್ಲಿ ಬರೆದಿದ್ದಾರೆ.

“80 ವರ್ಷದಿಂದ ನಾವು ಇಲ್ಲಿ ವಾಸವಿದ್ದೇವೆ. ನಮಗೆ ಮನೆ ಪಟ್ಟಾ ನೀಡಿಲ್ಲ. ದಾಖಲೆಗಳನ್ನು ಎಲ್ಲವನ್ನೂ ಅಕ್ರಮವಾಗಿ ತಿದ್ದುಪಡಿ ಮಾಡಿದ್ದಾರೆ. ನಮಗೆ ಆಗಿರುವ ಅನ್ಯಾಯವನ್ನು ಖಂಡಿಸಿ ಮತದಾನ ಬಹಿಷ್ಕಾರ ಮಾಡಿದ್ದೇವೆ” ಎಂದು ಗ್ರಾಮಸ್ಥ ಮಾಲತೇಶ ಕುಂದಗೋಳ ಅಳಲು ತೋಡಿಕೊಂಡಿದ್ದಾರೆ.

“ಮಾಜಿ ಸಿಎಂ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿ ಕ್ಷೇತ್ರದಲ್ಲಿ ಒಂದೇ ಒಂದು ಮನೆ ಹಂಚಿಕೆ ಮಾಡಿದ್ದಾರೆ ತೋರಿಸಲಿ” ಎಂದು ಸಿಎಂ ಸಿದ್ದರಾಮಯ್ಯ ಮತ್ತು ವಸತಿ ಸಚಿವ ಜಮೀರ್‌ ಚುನಾವಣೆ ಪ್ರಚಾರದ ವೇಳೆ ಸವಾಲು ಹಾಕಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...