ಸರ್ಕಾರದ ಓಲೈಕೆ ರಾಜಕಾರಣದ ಫಲವೇ ಶಿವಮೊಗ್ಗ ಗಲಭೆ: ಮಾಜಿ ಸಿಎಂ ಬೊಮ್ಮಾಯಿ

Date:

Advertisements
  • ಸರ್ಕಾರದ ತುಷ್ಟೀಕರಣ ನೀತಿಯಿಂದ ಸಮಾಜಘಾತಕ ಶಕ್ತಿಗಳು ಹೆಚ್ಚಾಗುತ್ತಿವೆ
  • ಹುಬ್ಬಳ್ಳಿ ಗಲಭೆಯ ಪ್ರಕರಣ ವಾಪಸ್ ಪಡೆಯಲು ಪತ್ರ ಬರೆದಿರುವುದು ಏನರ್ಥ?

ರಾಜ್ಯ ಸರ್ಕಾರ ಒಂದು ಸಮುದಾಯದ ಓಲೈಕೆ ರಾಜಕಾರಣ ಮಾಡುತ್ತಿರುವುದರಿಂದ ಶಿವಮೊಗ್ಗದ ಗಲಭೆಗೆ ಪ್ರೇರಣೆಯಾಗಿದ್ದು, ತಪ್ಪಿತಸ್ಥರು ಯಾರೆ ಇರಲಿ ಅವರನ್ನು ಹಿಡಿದು ಒಳಗೆ ಹಾಕುವ ಬದಲು ಸಚಿವರು ಅವರಿಗೆ ಕ್ಲೀನ್ ಚಿಟ್ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಬಿಜೆಪಿಯವರು ಗಲಭೆ ಮಾಡಿಸುತ್ತಿದ್ದಾರೆಂದು ಸಚಿವರೇ ದಾರಿ ತಪ್ಪಿಸುತ್ತಿದ್ದಾರೆ‌.‌ ಯಾರು ಕ್ರಮ ಕೈಗೊಳ್ಳಬೇಕೊ ಅವರೇ ಹೀಗೆ ಹೇಳಿದರೆ ಸರ್ಕಾರದ ಮೇಲೆ ಜನ ಭರವಸೆ ಇಡುವುದು ಹೇಗೆ? ಗೃಹ ಸಚಿವರು ಇದು ಸಣ್ಣ ಘಟನೆ ಅಂತ ಹೇಳಿದ್ದಾರೆ. ಈ ಸರ್ಕಾರದ ತುಷ್ಟೀಕರಣದ ನೀತಿಯೇ ಸಮಾಜಘಾತಕ ಶಕ್ತಿಗಳು ಹೆಚ್ಚಾಗಲು ಕಾರಣವಾಗಿದೆ. ಗಡಿ ಜಿಲ್ಲೆಗಳಲ್ಲಿ ಸಮಾಜಘಾತಕ‌ಶಕ್ತಿಗಳು ಜಾಲ ವ್ಯಾಪಿಸಿಕೊಳ್ಳಲು ಕಾರಣವಾಗಿದೆ‌” ಎಂದರು.

“ಇಷ್ಟೇ ಅಲ್ಲದೇ ಈ ತರಹದ ಕೇಸ್‌ಗಳಲ್ಲಿ ಅರೆಸ್ಟ್ ಆದವರನ್ನು ಬಿಡುಗಡೆ ಮಾಡುವಂತೆ ಸಚಿವರು, ಶಾಸಕರು ಒತ್ತಾಯ ಮಾಡುವುದನ್ನು ನೋಡಿದರೆ ಈ ಸರ್ಕಾರ ಏನು ಮಾಡಲು ಹೊರಟಿದೆ ಅಂತ ತಿಳಿಯುತ್ತಿಲ್ಲ. ಹಿಂದೆ ಪಿಎಫ್‌ಐನಲ್ಲಿ ಇದ್ದವರೆ ಹುಬ್ಬಳ್ಳಿ ಗಲಭೆಯಲ್ಲಿ ಇದ್ದರು. ಡಿಸಿಎಂ ಶಿವಕುಮಾರ್ ಅವರೇ ಹುಬ್ಬಳ್ಳಿ ಗಲಭೆಯಲ್ಲಿ ಪಾಲ್ಗೊಂಡವರ ಪ್ರಕರಣ ವಾಪಸ್ ಪಡೆಯಲು ಪತ್ರ ಬರೆದಿದ್ದಾರೆ ಎಂದರೆ ಏನರ್ಥ” ಎಂದು ಪ್ರಶ್ನಿಸಿದರು.

Advertisements

“ಗೃಹ ಸಚಿವರು ಶಿವಮೊಗ್ಗ ಘಟನೆ ಸಣ್ಣ ಘಟನೆ ಅಂತ ಗೃಹ ಸಚಿವರು ಹೇಳಿದ್ದಾರೆ. ಈಗ ತಪ್ಪಿನ ಅರಿವಾಗಿ ತಾವು ಹೇಳಿಲ್ಲ ಅಂತ ತಿರುಗಿಸುತ್ತಿದ್ದಾರೆ. ಉಡುಪಿಯಲ್ಲಿ ಹಿಂದೂ ಸಂಘಟನೆಗಳು ಕಾರ್ಯಕ್ರಮಕ್ಕೆ ಹಾಕಿರುವ ಬ್ಯಾನರ್‌ಗಳನ್ನು ತೆರವುಗೊಳಿಸುವುದು ಓಲೈಕೆ ರಾಜಕಾರಣಕ್ಕೆ ಸ್ಪಷ್ಟ ಉದಾಹರಣೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಹಾರದ ಜಾತಿ ಜನಗಣತಿ- ಕಮಂಡಲ ರಾಜಕಾರಣ ಕಕ್ಕಾಬಿಕ್ಕಿ

ಜಾತಿ ಸಮೀಕ್ಷೆ ಬರಲಿ ನೋಡೋಣ

“ನಾವು ಜಾತಿ ಸಮೀಕ್ಷೆ ವಿರೋಧ ಮಾಡಿಲ್ಲ. ರಾಜ್ಯ ಸರ್ಕಾರ ಸಾಮಾಜಿಕ ಆರ್ಥಿಕ ಸಮೀಕ್ಷೆ ಮಾಡಿಸಿದ್ದು, ಅದು ಜಾತಿ ಗಣತಿ ಅಲ್ಲ ಅಂತ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ‌. ಉತ್ತರ ಭಾರತದ ಜಾತಿ ಸಮೀಕರಣಕ್ಕೂ ದಕ್ಷಿಣ ಭಾರತದ ಜಾತಿ ಸಮಿಕರಣಕ್ಕೂ ವ್ಯತ್ಯಾಸ ಇದೆ. ಈ ವರದಿಯಿಂದ ತುಳಿತಕ್ಕೊಳಗಾದವರಿಗೆ ನ್ಯಾಯ ಒದಗಿಸುವ ಜವಾಬ್ದಾರಿ ಸರ್ಕಾರಕ್ಕೆ ಇದೆ” ಎಂದರು.

“ಈ ವರದಿಯಲ್ಲಿ ಏನಿದೆ ಅಂತ ಗೊತ್ತಿಲ್ಲ. ಈಗಾಗಲೇ ವರದಿ ಸೋರಿಕೆ ಆಗಿದೆ ಅಂತ ಆರೋಪ ಇದೆ. ಹೀಗಾಗಿ ಈ ವರದಿಯಲ್ಲಿ ಏನಿದೆಯೊ ಗೊತ್ತಿಲ್ಲ‌‌. ವರದಿ ಬಂದ ಮೇಲೆ ನೋಡೊಣ. ಸಿದ್ದರಾಮಯ್ಯ ಅವರು ಹಿಂದೆ ಸಿಎಂ ಆಗಿದ್ದಾಗಲೇ ವರದಿ ಸ್ವೀಕಾರ ಮಾಡಬಹುದಿತ್ತು. ಆದರೆ ಆಗ ಚುನಾವಣೆ ಬಂತು ಅಂತ ಜಾರಿ ಮಾಡಿಲ್ಲ. ಈಗ ಏನು ಮಾಡುತ್ತಾರೊ ನೋಡೊಣ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X