ಶಿಕ್ಷಣ ಸಚಿವರ ಜಿಲ್ಲೆಯಲ್ಲೇ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಅಮಾನವೀಯ ಘಟನೆ

Date:

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆಯಲ್ಲೇ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

- Advertisement -

ಇತ್ತೀಚೆಗೆ ಬೆಂಗಳೂರಿನ ಪೀಣ್ಯ ಬಳಿಯಿರುವ ಆಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಅಮಾನವೀಯ ಘಟನೆ ನಡೆದ ಪ್ರಕರಣ ರಾಜ್ಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬೆನ್ನಲ್ಲೇ ಇದೇ ರೀತಿಯ ಮತ್ತೊಂದು ಘಟನೆ ಈಗ ಮರುಕಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಭದ್ರಾವತಿ ತಾಲೂಕಿನ ಕೋಮಾರನಹಳ್ಳಿ ಗ್ರಾಂ ಪಂಚಾಯಿತಿಯ ಗುಡ್ಡದ ನೇರಲೆಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಶಂಕರಪ್ಪ ಹಾಗೂ ಇತರೆ ಶಿಕ್ಷಕರು ವಿದ್ಯಾರ್ಥಿಗಳ ಕೈಯಿಂದ ಶೌಚಾಲಯ ಸ್ವಚ್ಛಗೊಳಿಸಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್: ಮುಖ್ಯ ಶಿಕ್ಷಕಿ ಬಂಧನ

ಮಕ್ಕಳು ಶೌಚಾಲಯ ಸ್ವಚ್ಛಗೊಳಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ದಲಿತ ಸಂಘರ್ಷ ಸಮಿತಿ ಶಿವಮೊಗ್ಗ ಎಸಿ ಸತ್ಯನಾರಾಯಣ ಅವರಿಗೆ ದೂರು ಸಲ್ಲಿಸಿದೆ. ಮಕ್ಕಳನ್ನು ದುರ್ಬಳಕೆ ಮಾಡಿದ ಶಿಕ್ಷಕರ ವಿರುದ್ಧ ಕ್ರಮಕ್ಕೆ ಸಂಘಟನೆ ಮತ್ತು ಪೋಷಕರು ಆಗ್ರಹಿಸಿದ್ದಾರೆ.

ಈ ಹಿಂದೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲುವಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಕ್ಲೀನ್ ಮಾಡಿಸಿದ್ದ ಅಮಾನವೀಯ ಘಟನೆ ನಡೆದಿತ್ತು. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ರಾಜ್ಯದೆಲ್ಲೆಡೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದನ್ನು ಇಲ್ಲಿ ನೆನೆಯಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿಕಾರಿಪುರದಿಂದಲೇ ರಾಜಕೀಯ ‘ಶಿಕಾರಿ’ ಆರಂಭ: ಸಚಿವ ಮಧು ಬಂಗಾರಪ್ಪ

ಶಿಕಾರಿಪುರದಿಂದ ರಾಜಕೀಯ ‘ಶಿಕಾರಿ’ ಇಂದಿನಿಂದಲೇ ಆರಂಭವಾಗಿದೆ. ಶಿಕಾರಿಯಾಡುವ ಜವಾಬ್ದಾರಿಯನ್ನು ಇಲ್ಲಿನ ಜನತೆ...

ಶಿವಮೊಗ್ಗ | ಸೂಡಾ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ನೇಮಕ

ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಸಿ.ಜಿ. ಮಧುಸೂದನ್...

ಶಿವಮೊಗ್ಗದಲ್ಲಿ ಗುತ್ತಿಗೆದಾರರಿಂದ ಪ್ರತಿಭಟನೆ

ಶಿವಮೊಗ್ಗ ಜಿಲ್ಲೆಯೊಂದರಲ್ಲೇ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಿರುವ ಗುತ್ತಿಗೆದಾರರಿಗೆ ಸರ್ಕಾರದಿಂದ...

ಶಿವಮೊಗ್ಗ | ಕಾರ್ಗಲ್ ಬಳಿ ಬಸ್ ಪಲ್ಟಿ: ಹಲವರಿಗೆ ಗಾಯ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಗಲ್...