ಅಜಿತ್‌ ಪವಾರ್‌ ಶಾಸಕರೊಂದಿಗೆ ಬಿಜೆಪಿ ಸೇರಿದರೆ ಸರ್ಕಾರದಿಂದ ಹೊರಕ್ಕೆ; ಬಿಜೆಪಿಗೆ ಏಕನಾಥ್ ಶಿಂಧೆ ಬಣ ಎಚ್ಚರಿಕೆ

Date:

Advertisements
  • 2019ರಲ್ಲಿ ದೇವೇಂದ್ರ ಫಡ್ನವಿಸ್ ಜೊತೆ ರಹಸ್ಯವಾಗಿ ಸರ್ಕಾರ ರಚಿಸಲು ಯತ್ನಿಸಿದ್ದಅಜಿತ್‌ ಪವಾರ್‌
  • ಎನ್ಸಿಪಿ ದ್ರೋಹ ಮಾಡುವ ಪಕ್ಷ ಎಂದ ಏಕನಾಥ್ ಶಿಂಧೆ ಬಣದ ವಕ್ತಾರ ಸಂಜಯ್ ಶಿರ್ಸಾತ್

ಅಜಿತ್ ಪವಾರ್ ಎನ್‌ಸಿಪಿ ಶಾಸಕರೊಂದಿಗೆ ಬಿಜೆಪಿ ಸೇರಿದರೆ ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸರ್ಕಾರದ ಭಾಗವಾಗುವುದಿಲ್ಲ ಎಂದು ಶಿವಸೇನೆ ವಕ್ತಾರ ಸಂಜಯ್ ಶಿರ್ಸಾತ್ ಬಿಜೆಪಿ ಮುಖಂಡರಿಗೆ ಎಚ್ಚರಿಕೆ ನೀಡಿದ್ದಾರೆ.

ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್‌ಸಿಪಿಯಲ್ಲಿ ಅಜಿತ್‌ ಪವಾರ್‌ಗೆ ಸ್ವತಂತ್ರವಿಲ್ಲ. ಹಾಗಾಗಿ ಅವರು ಎನ್‌ಸಿಪಿ ತೊರೆದರೆ ಸ್ವಾಗತಿಸುತ್ತೇವೆ. ಅವರು ಗುಂಪಿನೊಂದಿಗೆ ಬಂದರೆ, ನಾವು ಸರ್ಕಾರದಲ್ಲಿ ಇರುವುದಿಲ್ಲ. ಅವರು ಏನನ್ನೂ ಹೇಳಿಲ್ಲ ಎಂದರೆ ಅವರು ಎನ್‌ಸಿಪಿಯಲ್ಲಿ ಇರಲು ಬಯಸುತ್ತಿಲ್ಲ. ಅಜಿತ್ ಪವಾರ್ ಅಸಮಾಧಾನಕ್ಕೆ ಕಾರಣ ಅವರ ಪುತ್ರ ಪಾರ್ಥ್ ಪವಾರ್ ಈ ಹಿಂದೆ ಚುನಾವಣೆಯಲ್ಲಿ ಸೋತಿರುವುದು. ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ಶಿವಸೇನೆಯ 16 ಶಾಸಕರ ಅನರ್ಹತೆ ಅರ್ಜಿಯ ವಿಷಯಕ್ಕೂ ಅವರ ಅಸಮಾಧಾನಕ್ಕೂ ಯಾವುದೇ ಸಂಬಂಧವಿಲ್ಲ ಎಂದರು.

“ಎನ್‌ಸಿಪಿ ಬಿಜೆಪಿಯೊಂದಿಗೆ ನೇರವಾಗಿ ಹೋಗುವುದಿಲ್ಲ ಎಂದು ನಾವು ಭಾವಿಸಿದ್ದೇವೆ. ಈ ಬಗ್ಗೆ ನಮ್ಮ ನಿಲುವು ಸ್ಪಷ್ಟವಾಗಿದೆ. ಎನ್‌ಸಿಪಿ ದ್ರೋಹ ಮಾಡುವ ಪಕ್ಷ. ನಾವು ಅಧಿಕಾರದಲ್ಲಿದ್ದರೂ ಎನ್‌ಸಿಪಿ ಜೊತೆ ಇರುವುದಿಲ್ಲ. ಬಿಜೆಪಿ ತನ್ನೊಂದಿಗೆ ಎನ್‌ಸಿಪಿಯನ್ನು ಬರಮಾಡಿಕೊಂಡರೆ ಮಹಾರಾಷ್ಟ್ರ ಜನತೆಗೆ ಇಷ್ಟವಾಗುವುದಿಲ್ಲ. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ, ಕಾಂಗ್ರೆಸ್ ಮತ್ತು ಎನ್‌ಸಿಪಿ ಜೊತೆ ಹೋಗುವುದನ್ನು ಜನರು ಇಷ್ಟಪಟ್ಟಿಲ್ಲ” ಎಂದು ಸಂಜಯ್ ಶಿರ್ಸಾತ್ ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ದಲಿತ ಕ್ರಿಶ್ಚಿಯನ್ನರಿಗೆ ಪರಿಶಿಷ್ಟ ಜಾತಿ ಮೀಸಲಾತಿ; ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

“ಅಜಿತ್ ಪವಾರ್ ಅವರೊಂದಿಗೆ ಬಿಜೆಪಿ ಸಂಪರ್ಕದಲ್ಲಿ ಇಲ್ಲದಿರುವುದು ಹೊಸ ವಿಷಯವೇನಲ್ಲ, ಆದರೆ ಮಾಧ್ಯಮಗಳು ತೋರಿಸುತ್ತಿರುವ ಅವರ ಅಸಮಾಧಾನಕ್ಕೂ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಮ್ಮ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ” ಎಂದು ಶಿರ್ಸತ್ ಹೇಳಿದರು.

“2019ರ ನವೆಂಬರ್‌ನಲ್ಲಿ ಅಜಿತ್‌ ಪವಾರ್‌ ಅವರು ದೇವೇಂದ್ರ ಫಡ್ನವಿಸ್ ಅವರೊಂದಿಗೆ ರಹಸ್ಯವಾಗಿ ಸರ್ಕಾರ ರಚಿಸುವ ಯತ್ನ ಮಾಡಿದ್ದರು. ಅವರು ದೊಡ್ಡ ನಾಯಕರಾಗಿದ್ದು, ಅವರ ಮನಸ್ಸಿನಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಅಷ್ಟು ಸುಲಭವಾಗಿ ಹೇಳುವುದಿಲ್ಲ” ಎಂದು ಶಿರ್ಸತ್ ತಿಳಿಸಿದರು.

ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ವಕ್ತಾರರಾಗಿ ಶಿರ್ಸತ್ ಅವರನ್ನು ಇತ್ತೀಚೆಗೆ ನೇಮಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X