ಲೋಕಸಭೆ ಚುನಾವಣೆ | ಜಮ್ಮುವಿನಲ್ಲಿ ಕಾಂಗ್ರೆಸ್‌ಗೆ ಶಿವಸೇನೆ ಸಾಥ್

Date:

ಶಿವಸೇನೆ (ಯುಬಿಟಿ) ಜಮ್ಮು ಮತ್ತು ಕಾಶ್ಮೀರ ಘಟಕವು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಉಧಮ್‌ಪುರ ಮತ್ತು ಜಮ್ಮು ಕ್ಷೇತ್ರದಿಂದ ಕಣಕ್ಕಿಳಿದ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಬೆಂಬೆಲ ವ್ಯಕ್ತಪಡಿಸಿದೆ. ಉಧಮ್‌ಪುರದಲ್ಲಿ ಏಪ್ರಿಲ್ 19ರಂದು, ಜಮ್ಮುವಿನಲ್ಲಿ ಏಪ್ರಿಲ್ 26ರಂದು ಚುನಾವಣೆ ನಡೆಯಲಿದೆ.

ಶಿವಸೇನೆ (ಉದ್ಧವ್ ಬಾಲ್‌ಸಾಬ್ ಟಾಕ್ರೆ) ಜಮ್ಮು ಮತ್ತು ಕಾಶ್ಮೀರ ಘಟಕದ ಅಧ್ಯಕ್ಷ ಮನೀಶ್ ಸಹಾನಿ, “ಕೇಂದ್ರಾಡಳಿತ ಪ್ರದೇಶದಲ್ಲಿ ಪಕ್ಷದ ನಾಯಕರಿಗೆ ಉತ್ತಮ ಕಾರ್ಯತಂತ್ರದಡಿಯಲ್ಲಿ ಭದ್ರತೆಯನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ. ನಮ್ಮ ನಾಯಕರುಗಳ ರಕ್ಷಣೆಯನ್ನು ಗಮನದಲ್ಲಿಟ್ಟುಕೊಂಡು ನಮ್ಮ ಹೈಕಮಾಂಡ್ ಈ ಪ್ರದೇಶದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸದಂತೆ ತಿಳಿಸಿದೆ. ನಾವು ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡುತ್ತೇವೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಬಿಜೆಪಿ ಟಿಕೆಟ್ ಕೈತಪ್ಪುತ್ತಿದ್ದಂತೆ ಕಾಂಗ್ರೆಸ್ ಸೇರಲು ವರುಣ್ ಗಾಂಧಿಗೆ ಆಹ್ವಾನ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಉಧಮ್‌ಪುರ ಮತ್ತು ಜಮ್ಮು ಕ್ಷೇತ್ರದಿಂದ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲು ಮತ್ತು ಅವರಿಗೆ ಮತ ಹಾಕಲು ನಾವು ನಮ್ಮ ಕಾರ್ಯಕರ್ತರಿಗೆ, ಬೆಂಬಲಿಗರಿಗೆ, ಜಿಲ್ಲಾ ಘಟಕಕ್ಕೆ ತಿಳಿಸಿದ್ದೇವೆ” ಎಂದರು.

“ಜಮ್ಮು ಮತ್ತು ಕಾಶ್ಮೀರದ ಜನರ ಹಕ್ಕುಗಳನ್ನು ಮತ್ತೆ ಪಡೆಯಲು ನಮ್ಮ ಪಕ್ಷವು ಧ್ವನಿ ಎತ್ತುವುದನ್ನು ಮುಂದುವರಿಸುತ್ತದೆ. ರಾಜ್ಯತ್ವದ ಮರುಸ್ಥಾಪನೆ, ಕಾಶ್ಮೀರಿ ಪಂಡಿತರ ಸುರಕ್ಷಿತ ವಾಪಸಾತಿ ಮತ್ತು ಶಾಂತಿಯುತ ವಾತಾವರಣದ ಭರವಸೆಗಳನ್ನು ಬಿಜೆಪಿ ನೇತೃತ್ವದ ಕೇಂದ್ರಕ್ಕೆ ನೆನಪಿಸುತ್ತಲೇ ಇರುತ್ತದೆ” ಎಂದು ಮನೀಶ್ ಸಹಾನಿ ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ | ಸಚಿವ ಬಿ.ನಾಗೇಂದ್ರ ವಜಾಗೊಳಿಸಿ: ಪ್ರಲ್ಹಾದ್‌ ಜೋಶಿ ಆಗ್ರಹ

ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ...

ಪಪುವಾ ನ್ಯೂಗಿನಿಗೆ 1 ಮಿಲಿಯನ್ ಡಾಲರ್ ನೆರವು ಘೋಷಿಸಿದ ಭಾರತ

ಬೃಹತ್‌ ಪ್ರಮಾಣದ ಭೂಕುಸಿತದಿಂದ ಅಪಾರ ಪ್ರಮಾಣದ ಸಾವು ನೋವಿನ ನಷ್ಟ ಅನುಭವಿಸಿರುವ...

ಪಠ್ಯಪುಸ್ತಕ ಪರಿಷ್ಕರಣೆ | ಕೆಲವು ಪದ ಮತ್ತು ವಾಕ್ಯಗಳಲ್ಲಷ್ಟೇ ಬದಲಾವಣೆ: ಸಚಿವ ಮಧು ಬಂಗಾರಪ್ಪ

"ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳಲ್ಲಿ ಮಕ್ಕಳು ಯಾವುದೇ ತೊಂದರೆ ಇಲ್ಲದಂತೆ ತೊಡಗಿಸಿಕೊಳ್ಳಲು...