ಶನಿವಾರ ನವದೆಹಲಿಯಲ್ಲಿ ನಡೆದ ನೀತಿ ಆಯೋಗದ ಸಭೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ಕೇಂದ್ರ ಸರ್ಕಾರದ ಈ ನಡೆಯನ್ನು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಖಂಡಿಸಿದ್ದಾರೆ. ಹಾಗೆಯೇ ಈ ರೀತಿ ಅವಮಾನ ಮಾಡುವುದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ನೀತಿ ಆಯೋಗ ಸಭೆಯನ್ನು ವಿಪಕ್ಷದ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಬಹಿಷ್ಕರಿಸಿದ್ದರು. ಆದರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತ್ರ ಈ ಸಭೆಗೆ ಹಾಜರಾಗಿದ್ದರು. ಆದರೆ “ಸಭೆಯಲ್ಲಿ ಮೈಕ್ ಆಫ್ ಮಾಡಲಾಗಿದೆ, ಮಾತನಾಡಲು ಅವಕಾಶ ನೀಡಿಲ್ಲ, ಅವಮಾನಿಸಲಾಗಿದೆ” ಎಂದು ಮಮತಾ ಬ್ಯಾನರ್ಜಿ ಸಭೆಯಿಂದ ಹೊರನಡೆದಿದ್ದರು.
“ಆಂಧ್ರಪ್ರದೇಶ, ಗೋವಾ, ಅಸ್ಸಾಂ ಮತ್ತು ಛತ್ತೀಸ್‌ಗಢ ಸೇರಿದಂತೆ ಇತರ ಮುಖ್ಯಮಂತ್ರಿಗಳಿಗೆ ಹೆಚ್ಚು ಕಾಲ ಮಾತನಾಡಲು ಅವಕಾಶ ನೀಡಿದ್ದಾರೆ. ಆದರೆ ನನ್ನ ಭಾಷಣಕ್ಕೆ ಐದು ನಿಮಿಷವಾಗುತ್ತಿದ್ದಂತೆ ಮೈಕ್ ಅನ್ನು ಸ್ವಿಚ್ ಆಫ್ ಮಾಡಲಾಗಿದೆ” ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದರು.
ಇದನ್ನು ಓದಿದ್ದೀರಾ? ಮಾತನಾಡಲು ಅವಕಾಶ ನೀಡದ ಆರೋಪ; ನೀತಿ ಆಯೋಗ ಸಭೆಯಿಂದ ಹೊರನಡೆದ ಮಮತಾ ಬ್ಯಾನರ್ಜಿ
ಮಾತನಾಡಲು ಅವಕಾಶ ನೀಡದೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿಗೆ ಅವಮಾನ ಮಾಡಿರುವುದನ್ನು ಸಂಜಯ್ ರಾವತ್ ಖಂಡಿಸಿದ್ದಾರೆ. “ರಾಜ್ಯಗಳು ಹಲವಾರು ಸಮಸ್ಯೆಗಳನ್ನು ಪರಿಹರಿಸಬೇಕಾಗಿದೆ. ಹೀಗಿರುವಾಗ ಮುಖ್ಯಮಂತ್ರಿಯ ಮೈಕ್ರೊಫೋನ್ ಅನ್ನು ಮ್ಯೂಟ್ ಮಾಡುವುದು ಪ್ರಜಾಪ್ರಭುತ್ವದ ಮಾನದಂಡಗಳಿಗೆ ಸರಿಹೊಂದುವುದಿಲ್ಲ” ಎಂದು ಸಂಜಯ್ ರಾವತ್ ಹೇಳಿದ್ದಾರೆ.
ಇನ್ನು ಮಹಾರಾಷ್ಟ್ರದ ಏಕನಾಥ್ ಶಿಂಧೆ ನೇತೃತ್ವದ ಮೈತ್ರಿಕೂಟದ ವಿರುದ್ಧವೂ ಈ ಸಂದರ್ಭದಲ್ಲೇ ಸಂಜಯ್ ರಾವತ್ ವಾಗ್ದಾಳಿ ನಡೆಸಿದರು. “ಕೇಂದ್ರವು ವಿತರಿಸುವ ಹಣವು ಭಾರತದ ಜನರಿಗೆ ಸೇರಿದೆ. ಅದನ್ನು ವಿವಿಧ ತೆರಿಗೆ ರೂಪದಲ್ಲಿ ಸಂಗ್ರಹಿಸಲಾಗುತ್ತದೆ. ಮಹಾರಾಷ್ಟ್ರಕ್ಕೆ ಏನು ಸಿಕ್ಕಿದೆ? ನಮ್ಮ ಮುಖ್ಯಮಂತ್ರಿ ಬರಿಗೈಯಲ್ಲಿ ಹಿಂತಿರುಗಿದರು” ಎಂದು ಟೀಕಿಸಿದರು.
VIDEO | “I have come out boycotting the meeting. Chandrababu Naidu was given 20 minutes to speak, CMs of Assam, Goa, Chhattisgarh spoke for 10-12 minutes. I was stopped from speaking after just five minutes. This is unfair. From the opposition side, only I am representing here,… pic.twitter.com/ur9hN1RsUA
— Press Trust of India (@PTI_News) July 27, 2024