ಬೈಕ್‌ನಲ್ಲಿ ಬೆನ್ನತ್ತಿ ಶಿವಸೇನೆ ನಾಯಕನಿಗೆ ಗುಂಡಿಕ್ಕಿ ಹತ್ಯೆ

Date:

ಬೈಕ್‌ನಲ್ಲಿ ಬೆನ್ನತ್ತಿ ಶಿವಸೇನೆ ನಾಯಕನಿಗೆ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಂಜಾಬ್‌ನ ಮೋಗಾದಲ್ಲಿ ನಡೆದಿದೆ. ದಾಳಿಯಲ್ಲಿ ಮೃತಪಟ್ಟವರು ಶಿವಸೇನೆಯ ಮೋಗಾ ಜಿಲ್ಲೆಯ ಜಿಲ್ಲಾಧ್ಯಕ್ಷರು ಎನ್ನಲಾಗಿದೆ. ಈ ದಾಳಿಯಲ್ಲಿ ಓರ್ವ ಬಾಲಕನಿಗೂ ಗಾಯವಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

- Advertisement -

ಗುರುವಾರ ರಾತ್ರಿ ಶಿವಸೇನೆಯ ಮೋಗಾ ಜಿಲ್ಲಾ ಘಟಕದ ಅಧ್ಯಕ್ಷ ಮಂಗತ್ ರೈ ಮಂಘ ಹಾಲು ಖರೀದಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ರಾತ್ರಿ 10 ಗಂಟೆ ಸುಮಾರಿಗೆ ಮೂವರು ಅಪರಿಚಿತರು ಮಂಗತ್ ರೈ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಇದನ್ನು ಓದಿದ್ದೀರಾ? ಬೆಳಗಾವಿ | ಶಿವಸೇನೆ, ಎಂಇಎಸ್, ಮರಾಠಿಗರ ದೌರ್ಜನ್ಯ ಖಂಡಿಸಿ ಕನ್ನಡಿಗರ ಮೌನ ಪ್ರತಿಭಟನೆ

ಮಂಗತ್ ರೈ ಅವರು ಗುಂಡಿನ ದಾಳಿಯಿಂದ ತಪ್ಪಿಸಿಕೊಳ್ಳುವ ಯತ್ನ ಮಾಡಿದಾಗ 12 ವರ್ಷದ ಬಾಲಕನಿಗೆ ಗುಂಡು ತಗುಲಿದೆ. ಮಂಗತ್ ರೈ ಅವರು ಕೂಡಲೇ ಬೈಕ್‌ನಲ್ಲಿ ಆ ಸ್ಥಳದಿಂದ ಹೊರಟಿದ್ದು, ಅಪರಿಚಿತ ದಾಳಿಕೋರರು ಬೆನ್ನಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಬೆನ್ನಟ್ಟಿದ ದುಷ್ಕರ್ಮಿಗಳು ಮಂಗತ್ ರೈ ಅವರ ಮೇಲೆ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಪೊಲೀಸರು ಮಂಗತ್ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ವೈದ್ಯರು ಮಂಗತ್ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಗಾಯಾಳು ಬಾಲಕನನ್ನು ಆರಂಭದಲ್ಲಿ ಮೋಗಾ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಉತ್ತಮ ಚಿಕಿತ್ಸೆಗಾಗಿ ಮತ್ತೊಂದು ಆಸ್ಪತ್ರೆಗೆ ಕಳುಹಿಸಲಾಗಿದೆ. ಶಿವಸೇನೆ ಇಬ್ಭಾಗವಾಗಿರುವ ಕಾರಣ ಸದ್ಯ ಮಂಗತ್ ಯಾವ ಶಿವಸೇನೆ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಕಾಂಗ್ರೆಸ್ ಅಥವಾ ಎಎಪಿ ಪರ ಶಿವಸೇನೆ ಪ್ರಚಾರ ಮಾಡಲ್ಲ: ಸಂಜಯ್ ರಾವತ್

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಬಲಪಂಥೀಯ ಗುಂಪು ವಿಶ್ವ ಹಿಂದೂ ಶಕ್ತಿಯ ರಾಷ್ಟ್ರೀಯ ಅಧ್ಯಕ್ಷ ಜೋಗಿಂದರ್ ಶರ್ಮಾ, “ಕೆಲವು ದುಷ್ಕರ್ಮಿಗಳು ಮಂಗೇಶ್ ಅವರನ್ನು ಗುಂಡಿಕ್ಕಿ ಕೊಂದಿದ್ದಾರೆಂದು ನಮಗೆ ತಿಳಿಯಿತು. ಮಾಹಿತಿ ಬಂದ ತಕ್ಷಣ ನಾವು ಆಸ್ಪತ್ರೆಗೆ ತಲುಪಿದೆವು. ನಮಗೆ ನ್ಯಾಯ ಬೇಕು ಮತ್ತು ಅದಕ್ಕಾಗಿ ನಾವು ಏನು ಬೇಕಾದರೂ ಮಾಡುತ್ತೇವೆ” ಎಂದರು.

ಪಂಜಾಬ್‌ನಲ್ಲಿ ಗುರುವಾರ ರಾತ್ರಿ ಎರಡು ಸ್ಥಳಗಳಲ್ಲಿ ಗುಂಡು ಹಾರಿಸಲಾಗಿದೆ. ಮೂವರು ಮೋಟಾರ್ ಸೈಕಲ್ ಸವಾರರು ರಾತ್ರಿ 9 ಗಂಟೆ ಸುಮಾರಿಗೆ ಬಗಿಯಾನಾ ಬಸ್ತಿಯಲ್ಲಿರುವ ಸಲೂನ್‌ಗೆ ಕ್ಷೌರ ಮಾಡಿಸಲು ಬಂದು ಮಾಲೀಕ ದೇವೇಂದರ್ ಕುಮಾರ್ ಮೇಲೆ ಎರಡು ಬಾರಿ ಗುಂಡು ಹಾರಿಸಿದರು. ಒಂದು ಗುಂಡು ಕುಮಾರ್ ಕಾಲಿಗೆ ತಗುಲಿದ್ದು, ಅವರನ್ನು ಚಿಕಿತ್ಸೆಗಾಗಿ ಮೋಗಾ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲಿಂದ ಬೇರೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಡಿಎಸ್‌ಪಿ ಸಿಟಿ ರವೀಂದರ್ ಸಿಂಗ್ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ಯಾಬ್‌ಗಳಲ್ಲಿ ಮಹಿಳಾ ಸುರಕ್ಷತೆ | ಓಲಾ, ಉಬರ್, ರ‍್ಯಾಪಿಡೊಗೆ ದೆಹಲಿ ಹೈಕೋರ್ಟ್ ನೋಟಿಸ್

ಆ್ಯಪ್ ಆಧಾರಿತ ಕ್ಯಾಬ್‌ ಸೇವೆಗಳಲ್ಲಿ ಮಹಿಳೆಯರ ಸುರಕ್ಷತೆ ಖಚಿತಪಡಿಸಲು ಸಮಗ್ರ ಕ್ರಮ...

ಬಂಗಾಳವನ್ನು BJPಗೆ ಕೊಟ್ಟ ಗ್ಯಾನೇಶ್‌ ಕುಮಾರ್‌ಗೆ ‘ಭಾರತ ರತ್ನ’ ಕೊಡಿ: ಜೆಕೆ ಸಿಎಂ ಒಮರ್ ಅಬ್ದುಲ್ಲಾ

ಇಡೀ ಪಶ್ಚಿಮ ಬಂಗಾಳವನ್ನೇ ಬಿಜೆಪಿಗೆ ಒಪ್ಪಿಸಿರುವ ಕೇಂದ್ರ ಚುನಾವಣಾ ಆಯೋಗದ (ECI)...

ನಾವು ‘ಇಂಡಿಯಾ’ ಒಕ್ಕೂಟದ ಭಾಗವಲ್ಲ, ಸಭೆಗೆ ಹಾಜರಾಗಲ್ಲ: ಎಎಪಿ ನಾಯಕ ಸಂಜಯ್ ಸಿಂಗ್

ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಸಭೆಯಿಂದ ಆಮ್ ಆದ್ಮಿ ಪಾರ್ಟಿ (ಎಎಪಿ)...

SIR | ಫಾರ್ಮ್-6 ಹೆಚ್ಚುವರಿ ನಿಯಮ ಹಿಂಪಡೆದ ಚುನಾವಣಾ ಆಯೋಗ; ಆದರೆ, ಪೂರ್ಣ ವಿನಾಯಿತಿಯಲ್ಲ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಹೊಸ ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ಸಂಕೀರ್ಣ ಕಾಗದಪತ್ರಗಳ ಕಟ್ಟುನಿಟ್ಟಿನ...