ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಶಿವಸೇನೆ ಠಾಕ್ರೆ ಬಣ ಏಕಾಂಗಿ ಸ್ಪರ್ಧೆ: ಸಂಜಯ್ ರಾವತ್

Date:

ಮುಂಬರುವ ಚುನಾವಣೆಯಲ್ಲಿ ಪಕ್ಷವು ವಿವಿಧ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಶಿವಸೇನೆ (ಉದ್ಧವ್ ಠಾಕ್ರೆ ಬಣ) ನಾಯಕ ಸಂಜಯ್ ರಾವತ್ ಶನಿವಾರ ತಿಳಿಸಿದ್ದಾರೆ.

- Advertisement -

ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌, ಎನ್‌ಸಿಪಿ (ಶರದ್‌ ಪವಾರ್ ಬಣ) ಮತ್ತು ಶಿವಸೇನೆ (ಯುಬಿಟಿ) ಮೈತ್ರಿ ಮಾಡಿಕೊಂಡಿತ್ತು. ಲೋಕಸಭೆಯಲ್ಲಿ ಇಂಡಿಯಾ ಒಕ್ಕೂಟ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ ಮೈತ್ರಿ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಮಾಜಿ ಪ್ರಧಾನಿ ವಾಜಪೇಯಿ ಎರಡನೇ ನೆಹರೂ:‌ ಸಂಸದ ಸಂಜಯ್ ರಾವತ್

ಮುಂದಿನ ಸ್ಥಳೀಯ ಚುನಾವಣೆಗಳಲ್ಲಿ ಮೈತ್ರಿಯ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಂಜಯ್ ರಾವತ್, “ಇಂಡಿಯಾ ಒಕ್ಕೂಟ ಮತ್ತು ಮಹಾ ವಿಕಾಸ್ ಅಘಾಡಿ ಮೈತ್ರಿಗಳು ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಿಗಾಗಿ ಮಾಡಲಾದ ಮೈತ್ರಿಗಳಾಗಿವೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಮೈತ್ರಿಯಲ್ಲಿ, ಪ್ರತ್ಯೇಕ ಪಕ್ಷಗಳ ಕಾರ್ಯಕರ್ತರಿಗೆ ಅವಕಾಶ ಸಿಗಲಾರದು. ಇದು ಸಾಂಸ್ಥಿಕ ಬೆಳವಣಿಗೆಗೆ ಅಡ್ಡಿಯಾಗುತ್ತದೆ. ನಾವು ಮುಂಬೈ, ಥಾಣೆ, ನಾಗ್ಪುರ ಮತ್ತು ಇತರ ಪುರಸಭೆಗಳು, ಜಿಲ್ಲಾ ಪರಿಷತ್‌ಗಳು ಮತ್ತು ಪಂಚಾಯತ್‌ ಚುನಾವಣೆಗಳಿಗೆ ಪ್ರತ್ಯೇಕವಾಗಿ ಸ್ವಬಲದಿಂದ ಸ್ಪರ್ಧಿಸುತ್ತೇವೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ದೆಹಲಿ ವಿಧಾನಸಭೆ ಚುನಾವಣೆ | ಕಾಂಗ್ರೆಸ್ ಬದಲು ಎಎಪಿ ಬೆಂಬಲಕ್ಕೆ ನಿಂತ ‘ಇಂಡಿಯಾ’ ಮಿತ್ರಪಕ್ಷಗಳು

ಇನ್ನು ವಿಧಾನಸಭೆ ಚುನಾವಣೆಯಲ್ಲಿ ಎಂವಿಎ ಮೈತ್ರಿ ಸೋಲಿಗೆ ಶಿವಸೇನೆ ಕಾರಣ ಎಂದು ಆರೋಪ ಮಾಡಿರುವ ಕಾಂಗ್ರೆಸ್ ನಾಯಕ ವಿಜಯ್ ವಡೆಟ್ಟಿವಾರ್ ವಿರುದ್ಧ ರಾವತ್ ವಾಗ್ದಾಳಿ ನಡೆಸಿದರು. “ಒಮ್ಮತ ಮತ್ತು ರಾಜಿಯಲ್ಲಿ ನಂಬಿಕೆಯಿಲ್ಲದವರಿಗೆ ಮೈತ್ರಿಕೂಟದಲ್ಲಿರಲು ಹಕ್ಕಿಲ್ಲ” ಎಂದು ಹೇಳಿದರು.

“ಲೋಕಸಭೆ ಚುನಾವಣೆಯ ಬಳಿಕ ಇಂಡಿಯಾ ಒಕ್ಕೂಟ ಒಂದೇ ಒಂದು ಸಭೆಯನ್ನು ನಡೆಸಿಲ್ಲ. ನಾವು ಇಂಡಿಯಾ ಒಕ್ಕೂಟಕ್ಕೆ ಸಂಚಾಲಕರನ್ನು ನೇಮಿಸಲು ಸಾಧ್ಯವಾಗಲಿಲ್ಲ. ಮೈತ್ರಿಕೂಟದ ಅತಿದೊಡ್ಡ ಪಕ್ಷವಾಗಿ ಸಭೆ ಕರೆಯುವುದು ಕಾಂಗ್ರೆಸ್‌ನ ಜವಾಬ್ದಾರಿಯಾಗಿದೆ” ಎಂದು ಶಿವಸೇನೆ ತಿಳಿಸಿದೆ.

ಇನ್ನು ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟದ ಮಿತ್ರ ಪಕ್ಷಗಳ ಎಎಪಿ, ಕಾಂಗ್ರೆಸ್ ಪ್ರತ್ಯೇಕವಾಗಿ ಸ್ಪರ್ಧಿಸುತ್ತಿದೆ. ಎಸ್‌ಪಿ, ಟಿಎಂಸಿ ಸೇರಿದಂತೆ ಇಂಡಿಯಾ ಒಕ್ಕೂಟದ ಮಿತ್ರ ಪಕ್ಷಗಳು ಎಎಪಿ ಬೆಂಬಲಕ್ಕೆ ನಿಂತಿದೆ. ಇದಾದ ಬೆನ್ನಲ್ಲೇ ಹಲವು ನಾಯಕರು ಇಂಡಿಯಾ ಒಕ್ಕೂಟದ ಸಭೆ ನಡೆಸುವುದು ಅಗತ್ಯ ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...