ಪ್ರಧಾನಿ ಬಗ್ಗೆ ಆಕ್ಷೇಪಾರ್ಹ ಲೇಖನ ಆರೋಪ: ಸಂಸದ ಸಂಜಯ್‌ ರಾವತ್‌ ವಿರುದ್ಧ ದೇಶದ್ರೋಹ ಪ್ರಕರಣ!

Date:

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಲೇಖನ ಪ್ರಕಟಿಸಿದ್ದಕ್ಕೆ ಶಿವಸೇನೆಯ ಉದ್ದವ್‌ ಠಾಕ್ರೆ ಬಣದ ನಾಯಕ, ಸಂಸದ ಸಂಜಯ್‌ ರಾವತ್‌ ವಿರುದ್ಧ ಮಹಾರಾಷ್ಟ್ರದಲ್ಲಿ ದೇಶದ್ರೋಹದ ಪ್ರಕರಣ ದಾಖಲಾಗಿದೆ.

- Advertisement -

ಪಕ್ಷದ ಮುಖವಾಣಿ ‘ಸಾಮ್ನಾ’ದಲ್ಲಿ ಡಿ.11ರಂದು ಪ್ರಕಟವಾದ ಲೇಖನವು ದೂರುದ್ದೇಶದಿಂದ ಕೂಡಿದೆ. ಹಾಗಾಗಿ ಸಂಸದ ಹಾಗೂ ‘ಸಾಮ್ನಾ’ದ ಕಾರ್ಯನಿರ್ವಾಹಕ ಸಂಪಾದಕರಾದ ಸಂಜಯ್‌ ರಾವತ್‌ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿ ಬಿಜೆಪಿ ಯವತ್ಮಾಲ್ ಸಂಚಾಲಕ ನಿತಿನ್ ಭೂತಾಡ್ ಪೊಲೀಸರಿಗೆ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಉಮರಖೇಡ್ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದ್ದು, ದೂರಿನ ಪ್ರಕಾರ ನಾವು ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ ಮತ್ತು ಅದರ ಬಗ್ಗೆ ತನಿಖೆ ನಡೆಸುತ್ತೇವೆ” ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾವತ್‌ ಅವರು ಮೋದಿ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಆಗಾಗ್ಗೆ ಸಾಮ್ನಾದಲ್ಲಿ ಟೀಕೆ ಮಾಡುತ್ತಲೇ ಇರುತ್ತಾರೆ. ಆದರೆ ಡಿ.11 ರಂದು ಮಧ್ಯಪ್ರದೇಶ ಫಲಿತಾಂಶಕ್ಕೆ ಸಂಬಂಧಿಸಿದಂತೆ ಲೇಖನ ಪ್ರಕಟವಾಗಿತ್ತು.

ತಮ್ಮ ‘ರೋಖ್‌ಥೋಕ್’ ಅಂಕಣದಲ್ಲಿ, “ತವರು ರಾಜ್ಯವಾದ ಮಧ್ಯಪ್ರದೇಶದಲ್ಲಿ ಶಿವರಾಜ್‌ ಸಿಂಗ್‌ ಅವರನ್ನು ಬಿಜೆಪಿ ಹೈಕಮಾಂಡ್‌ ಅವಮಾನಿಸಿದೆ. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಗುರಿ ಕಾಂಗ್ರೆಸ್ ಅನ್ನು ಸೋಲಿಸುವುದು ಅಲ್ಲ, ಬದಲಾಗಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರನ್ನು ಸಂಪೂರ್ಣವಾಗಿ ತೊಡೆದು ಹಾಕುವುದು” ಎಂದು ಬರೆದಿದ್ದರು.

ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಲೇಖನವನ್ನು ಬರೆದಿದ್ದಾರೆ ಎಂದು ಭೂತಾಡ್ ಅವರು ದೂರಿನಲ್ಲಿ ಆರೋಪಿಸಿದ್ದಾರೆ. ರಾವತ್ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 153 (ಎ), 505 (2) ಮತ್ತು 124 (ಎ) ಅಡಿಯಲ್ಲಿ ಉಮರಖೇಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸೆಕ್ಷನ್​ಗಳು ವಿವಿಧ ಗುಂಪುಗಳು ಮತ್ತು ಇತರ ಅಪರಾಧಗಳ ನಡುವೆ ದ್ವೇಷವನ್ನು ಉತ್ತೇಜಿಸುತ್ತದೆ ಎಂಬುದನ್ನು ಹೇಳುತ್ತವೆ.

ತನ್ನ ವಿರುದ್ಧ ದಾಖಲಾಗಿರುವ ದೇಶದ್ರೋಹ ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಸಂಸದ ರಾವತ್, “ನಮಗೆ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಗೌರವವಿದೆ. ಕೆಲವು ದಿನಗಳ ಹಿಂದೆ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ವಿರುದ್ಧ ಅಮಿತ್ ಶಾ ಹೇಳಿಕೆ ನೀಡಿದ್ದರು. ಅವರ ವಿರುದ್ಧ ಪ್ರಕರಣ ದಾಖಲಾಗುತ್ತದೆಯೇ? ಈ ದೇಶದಲ್ಲಿ ಪ್ರಜಾಪ್ರಭುತ್ವವಿದೆ ಮತ್ತು ಅನೇಕ ರಾಜಕಾರಣಿಗಳು ಹೇಳಿಕೆಗಳನ್ನು ನೀಡುತ್ತಾರೆ. ಜನರು ಬಯಸಿದ್ದರೆ ಅದರ ವಿರುದ್ಧವೂ ಪ್ರಕರಣಗಳನ್ನು ದಾಖಲಿಸಬಹುದಿತ್ತು. ಆದರೆ, ನಾವು ಮಾಡಿಲ್ಲ. ಈಗಿನ ಬೆಳವಣಿಗೆ ಗಮನಿಸುವಾಗ ತುರ್ತು ಪರಿಸ್ಥಿತಿಯ ವಿರುದ್ಧ ಹೋರಾಡಿದ್ದೇವೆ ಎಂದು ಹೇಳುವ ಹಕ್ಕು ಬಿಜೆಪಿಯವರಿಗಿಲ್ಲ ಎಂದು ನನಗಿಸುತ್ತಿದೆ” ಎಂದು ಬಿಜೆಪಿಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...

ಹೌತಿಗಳ ವಿರುದ್ಧ ಮಿಲಿಟರಿ ದಾಳಿಗೆ ಸೌದಿ ಅರೇಬಿಯಾ ಮನವಿ: ಬೆಂಬಲಿಸಿಲ್ಲ ಎಂದ ಟ್ರಂಪ್

ಕೆಂಪು ಸಮುದ್ರದ ಆಯಕಟ್ಟಿನ ಪ್ರದೇಶಗಳಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರ ದಾಳಿ...