ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ಕೊಡಬೇಕಿತ್ತು: ಡಿಸಿಎಂ ಡಿ ಕೆ ಶಿವಕುಮಾರ್‌

Date:

Advertisements

ಶತಾಯುಷಿ, ಸಿದ್ಧಗಂಗಾ ಮಠಾಧೀಶರಾಗಿದ್ದ ಡಾ. ಶಿವಕುಮಾರ ಸ್ವಾಮೀಜಿ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಕೊಡಬೇಕಿತ್ತು ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

ಭಾರತದ ಮಾಜಿ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್​​ ಕೆ ಅಡ್ವಾಣಿ ಅವರಿಗೆ ಭಾರತ ರತ್ನ ಘೋಷಿಸಿರುವ ವಿಚಾರವಾಗಿ ವಿಜಯಪುರ ಜಿಲ್ಲೆ ಬಸವನಬಾಗೇವಾಡಿಯಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿ, “ಅಡ್ವಾಣಿಯವರು ದೇಶದ ಹಿರಿಯ ರಾಜಕಾರಣಿ. ಅವರಿಗೆ ಭಾರತ ರತ್ನ ನೀಡಿದ್ದಕ್ಕೆ ನಮ್ಮ ತಕರಾರೇನೂ ಇಲ್ಲ. ಆದರೆ, ಡಾ. ಶಿವಕುಮಾರ ಸ್ವಾಮೀಜಿ ಅವರಿಗೆ ಕೊಡಬೇಕಿತ್ತು” ಎಂದರು.

“ಕೇಂದ್ರ ಸರ್ಕಾರದ ತೀರ್ಮಾನಕ್ಕೆ ನಮ್ಮದೇನು ತಕರಾರು ಇಲ್ಲ. ಆದರೆ ನಮ್ಮ ರಾಜ್ಯದಲ್ಲಿ ಅನ್ನದಾಸೋಹಕ್ಕೆ ಶ್ರೀಗಳು ಹೆಸರಾಗಿದ್ದವರು. ನಡೆದಾಡುವ ದೇವರೆಂದೇ ಖ್ಯಾತರಾದ ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಲು ಈ ಹಿಂದೆಯೇ ನಮ್ಮ ಸರ್ಕಾರ ಮನವಿ ಮಾಡಿದೆ. ಅವರಿಗೆ ಗೌರವ ಸಲ್ಲಿಸಬೇಕು ಎಂಬುದು ಬಹುತೇಕ ಕನ್ನಡಿಗರ ಒತ್ತಾಸೆ” ಎಂದು ಹೇಳಿದರು.‌

ಈ ಸುದ್ದಿ ಓದಿದ್ದೀರಾ? ಪಟ್ಟಭದ್ರರನ್ನು ಗುರುತಿಸಿ ಮಟ್ಟ ಹಾಕುವ ನಿಷ್ಠುರತೆ ಪತ್ರಕರ್ತರಿಗೆ ಬೇಕು: ಸಿಎಂ ಸಿದ್ದರಾಮಯ್ಯ

Advertisements
Bose Military School

ಪತ್ರ ಬರೆದಿದ್ದೆ: ಸಿದ್ದರಾಮಯ್ಯ

ದಾವಣಗೆರೆಯಲ್ಲಿ ಸಿಎಂ ಸಿದ್ದರಾಮಯ್ಯ ಅಡ್ವಾಣಿಯವರಿಗೆ ಭಾರತ ರತ್ನ ದೊರೆತಿರುವ ಬಗ್ಗೆ ಮಾತನಾಡಿ, “ಅಡ್ವಾಣಿ ಅವರಿಗೆ ಕೊಡಲಿ, ಬೇಡ ಎಂದು ನಾವು ಹೇಳಿಲ್ಲ. ಆದರೆ, ನಾನು ತುಮಕೂರು ಸಿದ್ಧಗಂಗ ಸ್ವಾಮಿಗಳಿಗೆ ಕೊಡಬೇಕು ಎಂದು ತಿಳಿಸಿ ಪತ್ರ ಬರೆದಿದ್ದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements
Advertisements
Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುಸ್ಲಿಮರೇ ಇಲ್ಲದ ಊರಲ್ಲಿ ಮೊಹರಂ ಸಂಭ್ರಮ!

ಹಿಂದೂ- ಮುಸ್ಲಿಂ ಸಾಮರಸ್ಯ ಸಾರುವ ಹಬ್ಬ 'ಮೊಹರಂ'. ಆದರೆ ಮುಸ್ಲಿಮರೇ ಇಲ್ಲದ...

Fake shaadi | ‘ಇದು ಮದುವೆಯ ಥರ, ಆದರೆ ಮದುವೆಯಲ್ಲ’; ಬೆಂಗಳೂರಿಗೆ ಕಾಲಿಟ್ಟ ಹೊಸ ಟ್ರೆಂಡ್!

ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಚಾರ ಪಡೆಯುವ ಇಂತಹ ಪಾರ್ಟಿಗಳು ಮೊದಲು ಶುರುವಾಗಿದ್ದು...

‌ರವಿಕುಮಾರ್‌ ಯಾವ ಅಶ್ಲೀಲ ಹೇಳಿಕೆ ನೀಡಿದ್ದಾರೆಂದು ಕಾಂಗ್ರೆಸ್‌ ಸ್ಪಷ್ಟಪಡಿಸಲಿ: ಆರ್‌ ಅಶೋಕ್

ಸಿಎಂ ಸಿದ್ದರಾಮಯ್ಯ ಹಲವಾರು ಬಾರಿ ಅಧಿಕಾರಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತಾಡಿದ್ದಾರೆ. ಅವರ...

Download Eedina App Android / iOS

X