ಡಿಕೆಶಿ ತವರು ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಶಾಕ್‌; ಜೆಡಿಎಸ್ ಸೇರಿದ ಚನ್ನಪಟ್ಟಣ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿ ಪ್ರಸನ್ನ ಗೌಡ

Date:

  • ಪಂಚರತ್ನ ಸಮಾರೋಪ ಸಮಾರಂಭದಲ್ಲಿ ಜೆಡಿಎಸ್‌ ಸೇರಲಿರುವ ಪ್ರಸನ್ನ ಗೌಡ
  • ʼಕಾಂಗ್ರೆಸ್​ ನಾಯಕತ್ವದಿಂದ ಬೇಸತ್ತು ಕುಮಾರಸ್ವಾಮಿ ನಾಯಕತ್ವ ಒಪ್ಪಿರುವೆʼ

ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಸನ್ನ ಗೌಡ ಅವರು ಜೆಡಿಎಸ್ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ.

ಮೈಸೂರಿನಲ್ಲಿ ನಡೆಯುತ್ತಿರುವ ಪಂಚರತ್ನ ಯಾತ್ರೆ ಸಮಾರೋಪಕ್ಕೂ‌ ಮುನ್ನ ಕುಮಾರಸ್ವಾಮಿ ಎದುರು ಅವರು ಈ ಘೋಷಣೆ ಮಾಡಿದ್ದಾರೆ.

ಈ ವೇಳೆ ಮಾಧ್ಯಮಗಳಿಗೆ ಮಾತನಾಡಿದ ಪ್ರಸನ್ನ ಗೌಡ, “ನಾನು ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಬೇಕಿತ್ತು. ಆದರೆ, ಕಾಂಗ್ರೆಸ್​ ನಾಯಕತ್ವದಿಂದ ಬೇಸತ್ತಿರುವೆ. ಆ ಪಕ್ಷದಲ್ಲಿ ಸ್ಪಷ್ಟ ನಿಲುವು ಇಲ್ಲ. ಸುಳ್ಳು ಘೋಷಣೆ ಮಾಡಿ ಜನರ ದಾರಿ ತಪ್ಪಿಸುತ್ತಿದ್ದಾರೆ. ಹೀಗಾಗಿ ಕುಮಾರಸ್ವಾಮಿ ನಾಯಕತ್ವ ಮೆಚ್ಚಿಕೊಂಡು ಜೆಡಿಎಸ್ ಸೇರುತ್ತಿದ್ದೇನೆ” ಎಂದರು.

“ಚನ್ನಪಟ್ಟಣ ಟಿಕೆಟ್ ಸಿಗುವುದು ಅನುಮಾನ ಎನ್ನುವ ಸುಳಿವು ಸಿಗುತ್ತಿದ್ದಂತೆಯೇ ಪ್ರಸನ್ನ ಗೌಡ ಕಾಂಗ್ರೆಸ್ ತೊರೆದು ಜೆಡಿಎಸ್​ನತ್ತ ಮುಖ ಮಾಡಿದ್ದಾರೆ ಎನ್ನಲಾಗಿದೆ. ಇಂದು (ಮಾರ್ಚ್​ 26) ಸಂಜೆ ಮೈಸೂರಿನಲ್ಲಿ ನಡೆಯಲಿರುವ ಜೆಡಿಎಸ್​ ಪಂಚರತ್ನ ಸಮಾರೋಪ ಸಮಾರಂಭದಲ್ಲಿ ಅಧಿಕೃತವಾಗಿ ಜೆಡಿಎಸ್‌ ಸೇರಲಿದ್ದಾರೆ.

ಕಾಂಗ್ರೆಸ್​ಗೆ ಶಾಕ್‌

ಚುನಾವಣೆ ಹೊಸ್ತಿಲಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತವರು ಜಿಲ್ಲೆಯಲ್ಲೇ ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಸಂಭಾವ್ಯ ಅಭ್ಯರ್ಥಿ ಎಂದೇ ಬಿಂಬಿಸಲ್ಪಟ್ಟಿದ್ದ ಪ್ರಸನ್ನ ಗೌಡ ಜೆಡಿಎಸ್ ಸೇರುತ್ತಿರುವುದು ಕಾಂಗ್ರೆಸ್​ಗೆ ಶಾಕ್‌ ನೀಡಿದೆ.

ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ರಾಮನಗರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದ ಪೈಕಿ ಮೂರು ಕ್ಷೇತ್ರಕ್ಕೆ ಟಿಕೆಟ್ ಘೋಷಿಸಲಾಗಿದೆ. ಆದರೆ, ಚನ್ನಪಟ್ಟಣ ಕ್ಷೇತ್ರಕ್ಕೆ ಟಿಕೆಟ್ ಫೈನಲ್ ಆಗದ ಕಾರಣ ಮಾಜಿ ಸಚಿವ ಸಿ ಪಿ ಯೋಗೇಶ್ವರ್‌ ಅವರಿಗೆ ಕೈ ನಾಯಕರು ಬಲೆ ಬಿಸಿದ್ದಾರೆ ಎನ್ನುವ ಮಾತುಗಳು ಕೂಡ ಕ್ಷೇತ್ರದಲ್ಲಿ ಕೇಳಿಬಂದಿವೆ. ಹಾಗೆಯೇ ನಟಿ ರಮ್ಯಾ ಕೂಡ ಚನ್ನಪಟ್ಟಣದಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ. ಹೀಗಾಗಿ ಈ ಎಲ್ಲ ಬೆಳವಣಿಗೆ ಪ್ರಸನ್ನ ಗೌಡ ಜೆಡಿಎಸ್ ಸೇರುತ್ತಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೆಣ್ಣು ಭ್ರೂಣ ಹತ್ಯೆ ಪ್ರಕರಣ | ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಚಲುವರಾಯಸ್ವಾಮಿ

ಒಂದು ಜಿಲ್ಲೆಗೆ ಸೀಮಿತವಾಗಿಲ್ಲ, ಎರಡು ಮೂರು ಜಿಲ್ಲೆಗೆ ಸೇರಿದೆ ಸಿ.ಐ.ಡಿಗೆ...

ಶಾಸಕರ ಮತ್ತು ಸಚಿವರ ಸಮಸ್ಯೆಗಳಿಗೆ ಕೊನೆ ಇಲ್ಲ: ಸತೀಶ ಜಾರಕಿಹೊಳಿ

ಸಮಸ್ಯೆಗಳು ಒಮ್ಮೆಗೆ ಬಗೆಹರಿಯಲೂ ಸಾಧ್ಯವಿಲ್ಲ ಬಿ ಆರ್ ಪಾಟೀಲ್‌ಗೆ ಏನೋ...

ಟೆಕ್‌ ಸಮ್ಮಿಟ್‌ | ಕೌಶಲ್ಯಾಧಾರಿತ ಪಠ್ಯಕ್ರಮ ಇಂದಿನ ಅಗತ್ಯ: ಸಚಿವ ಎಂ.ಸಿ. ಸುಧಾಕರ್

ಬೋಧನಾಧಾರಿತ ಕಲಿಕೆಗಿಂತ ಕೌಶಲ್ಯಾಧಾರಿತ ಪಠ್ಯಕ್ರಮ ಇಂದಿನ ಅಗತ್ಯ. ಹಾಗಾಗಿ, ಅದಕ್ಕೆ ಪೂರಕವಾದ...