ಕ್ರಿಮಿನಲ್ ವ್ಯಕ್ತಿ ‘ರಾಮಭಕ್ತ’ನ ಸೋಗು ಹಾಕಿಕೊಂಡರೆ ಕಾನೂನು ಕ್ರಮ ತೆಗೆದುಕೊಳ್ಳಬಾರದೇ? ಸಚಿವ ಗುಂಡೂರಾವ್

Date:

ಅಕ್ರಮ ಸಾರಾಯಿ ಮಾರಾಟ, ದೊಂಬಿ, ಮಟ್ಕಾ, ಜೂಜಾಟ ಮುಂತಾದ 16 ಸಮಾಜಘಾತುಕ ಕೃತ್ಯಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಶ್ರೀಕಾಂತ್ ಪೂಜಾರಿ ಎಂಬಾತನ ಬಂಧನವನ್ನು ಬಿಜೆಪಿಯು ರಾಮಭಕ್ತ, ಕರಸೇವಕ ಎಂದು ಬಿಜೆಪಿ ಬಿಂಬಿಸುತ್ತಿದ್ದು, ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ.

- Advertisement -

ಈ ವಿಚಾರವಾಗಿ ಟ್ವೀಟ್ ಮಾಡಿರುವ ಸಚಿವ ದಿನೇಶ್ ಗುಂಡೂರಾವ್, “ರಾಮಭಕ್ತ ಎಂಬ ಸೋಗು ಹಾಕಿಕೊಂಡರೆ ಕಾನೂನು ಕ್ರಮ ತೆಗೆದುಕೊಳ್ಳಬಾರದೆ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಶ್ರೀಕಾಂತ್ ಪೂಜಾರಿ ವಿರುದ್ಧ 1992ರಿಂದ 2014ರವರೆಗೆ ಹುಬ್ಬಳ್ಳಿಯ ವಿವಿಧ ಠಾಣೆಗಳಲ್ಲಿ ಸುಮಾರು 16 ಕ್ರಿಮಿನಲ್ ಪ್ರಕರಣ ದಾಖಲಾಗಿವೆ‌. ಇಂತಹ ಕ್ರಿಮಿನಲ್ ಹಿನ್ನೆಲೆಯಿರುವ ವ್ಯಕ್ತಿ ರಾಮಭಕ್ತ ಎಂಬ ಸೋಗು ಹಾಕಿಕೊಂಡರೆ ಕಾನೂನು ಕ್ರಮ ತೆಗೆದುಕೊಳ್ಳಬಾರದೆ?” ಎಂದು ಕೇಳಿದ್ದಾರೆ.

“ಹಳೆಯ ಪ್ರಕರಣವೊಂದರಲ್ಲಿ ಹುಬ್ಬಳ್ಳಿ ಪೊಲೀಸರು ಬಂಧಿಸಿರುವ ಶ್ರೀಕಾಂತ್ ಪೂಜಾರಿ ಶ್ರೀರಾಮನಂತೆ ಆದರ್ಶ ಪುರುಷನೂ ಅಲ್ಲ, ಶ್ರೀಕೃಷ್ಣನಂತೆ ಅವತಾರ ಪುರುಷನೂ ಅಲ್ಲ. ಆತ ವೃತ್ತಿಪರ ಕ್ರಿಮಿನಲ್ ಅಷ್ಟೆ” ಎಂದು ತಿಳಿಸಿದ್ದಾರೆ.

“ಶ್ರೀಕಾಂತ್ ಪೂಜಾರಿ ವಿರುದ್ಧ 1992 ರಿಂದ 2014ರವರೆಗೆ ಹುಬ್ಬಳ್ಳಿಯ ವಿವಿಧ ಠಾಣೆಗಳಲ್ಲಿ ಸುಮಾರು 16 ಕ್ರಿಮಿನಲ್ ಪ್ರಕರಣ ದಾಖಲಾಗಿವೆ‌. ರಾಜಕೀಯ ಕಾರಣಗಳಿಗಾಗಿ ಕ್ರಿಮಿನಲ್ ಹಿನ್ನೆಲೆ ಹೊಂದಿರುವ ವ್ಯಕ್ತಿಯ ಬೆಂಬಲಕ್ಕೆ ನಿಂತಿರುವ ರಾಜ್ಯದ ಬಿಜೆಪಿ ನಾಯಕರಿಗೆ ಮಾನ, ಮರ್ಯಾದೆ ಮತ್ತು ಸಂಸ್ಕಾರವೇ ಇಲ್ಲದಂತಾಗಿದೆ” ಎಂದು ಸಚಿವ ಗುಂಡೂರಾವ್ ಟೀಕಿಸಿದ್ದಾರೆ.

ಇದನ್ನು ಓದಿದ್ದೀರಾ? ‘ನಾನೊಬ್ಬ ಕರಸೇವಕ, ನನ್ನನ್ನೂ ಬಂಧಿಸಿ..’ ಬಿಜೆಪಿಯಿಂದ ಅಭಿಯಾನ; ವಿ.ಸುನಿಲ್ ಕುಮಾರ್ ಪೊಲೀಸ್‌ ವಶಕ್ಕೆ

“ದೀರ್ಘಾವಧಿಯಿಂದ ಬಾಕಿ ಉಳಿದಿರುವ ಪ್ರಕರಣಗಳ‌ ವಿಚಾರಣಾ ಪ್ರಮಾಣಪತ್ರವನ್ನು ನ್ಯಾಯಾಲಯ ಕೇಳಿದೆ. ಅದರಂತೆ‌ ಪೊಲೀಸರು ಇತ್ಯರ್ಥವಾಗದ ಹಳೆಯ ಪ್ರಕರಣ ಸಂಬಂಧ ಶ್ರೀಕಾಂತ್ ಪೂಜಾರಿ ಹೆಸರಿದ್ದುದರಿಂದ ಬಂಧಿಸಿದ್ದಾರೆ. ನ್ಯಾಯಾಲಯದ ಸೂಚನೆಯ ಅನುಸಾರ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ಈ ವಿಚಾರ ತಿಳಿದಿದ್ದರೂ ಬಿಜೆಪಿ ನಾಯಕರು ಕ್ರಿಮಿನಲ್ ಪರ ಪ್ರತಿಭಟನೆ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....