ಬಿಜೆಪಿಯ ಒಬ್ಬ ದೇಶಕ್ಕಾಗಿ ಹುತಾತ್ಮರಾಗಿದ್ದರೆ ತೋರಿಸಿ; ನಾನು ರಾಜಕೀಯ ಬಿಡ್ತೀನಿ: ಸಿದ್ದರಾಮಯ್ಯ ಸವಾಲು

Date:

Advertisements

ಮಹಾತ್ಮ ಗಾಂಧಿಯವರ ನೇತೃತ್ವದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ನಮ್ಮ ಕಾಂಗ್ರೆಸ್ ಪಕ್ಷ. ಬ್ರಿಟೀಷರ ವಿರುದ್ಧ ಹೋರಾಟ ಮಾಡಿ ಹುತಾತ್ಮರಾದ ಸಂಘ ಪರಿವಾರದ ಒಬ್ಬೇ ಒಬ್ಬನನ್ನು, ಬಿಜೆಪಿಯ ಒಬ್ಬ ದೇಶಕ್ಕಾಗಿ ಹುತಾತ್ಮರಾಗಿದ್ದಿದ್ದರೆ ತೋರಿಸಿ. ನಾನು ರಾಜಕೀಯ ಬಿಟ್ಟು ಬಿಡ್ತೀನಿ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿಯವರಿಗೆ ನೇರ ಸವಾಲು ಹಾಕಿದ್ದಾರೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದ ನಂಜನಗೂಡಿನಲ್ಲಿ ನಡೆದ ಬೃಹತ್ ಸಾರ್ವಜನಿಕ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ದೇಶಕ್ಕಾಗಿ ಏನೇನೂ ಮಾಡದವರಿಂದ ನಾವು ದೇಶಭಕ್ತಿ ಪಾಠ ಕಲಿಯಬೇಕಾ ಎಂದು ಪ್ರಶ್ನಿಸಿದ ಸಿಎಂ, “ನೀವು ದೇಶಭಕ್ತರಾಗಿದ್ದರೆ, ಭಾರತ ಮಾತೆ ಬಗ್ಗೆ ಪ್ರೀತಿ ಇದ್ದಿದ್ದಿದ್ದರೆ ನೀವೇಕೆ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲಿಲ್ಲ? ನೀವು ದೇಶ ಭಕ್ತರಾ? ಮುಖ ನೋಡಿಕೊಳ್ಳಿ” ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.

Advertisements

ತಮ್ಮ ಭಾಷಣದಲ್ಲಿ ಪ್ರಧಾನಿ ಮೋದಿಯವರನ್ನೂ ಟೀಕಿಸಿದ ಸಿಎಂ, “ಬಾಂಡ್ ಮೂಲಕ ನೀವು ಸಂಗ್ರಹಿಸಿದ 7600 ಕೋಟಿ ಹಣಕ್ಕೆ ತೆರಿಗೆ ಕಟ್ಟಿದ್ದೀರಾ? ಈಗ ಯಾರನ್ನು ಜೈಲಿಗೆ ಕಳುಹಿಸಬೇಕು ಹೇಳಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು.

“ಭ್ರಷ್ಟರನ್ನು ಜೈಲಿಗೆ ಕಳುಹಿಸುತ್ತೇವೆ ಎಂದು ಮೋದಿಯವರು ನಿನ್ನೆ ಭಾಷಣ ಮಾಡಿದ್ದಾರೆ. ಆದರೆ ದೇಶದಲ್ಲಿದ್ದ ಭ್ರಷ್ಟರೆಲ್ಲಾ ಈಗ ಯಾವ ಪಕ್ಷದಲ್ಲಿದ್ದಾರೆ ಮೋದಿಯವರೇ” ಎಂದು ಮರು ಪ್ರಶ್ನೆ ಹಾಕಿದರು.

“ಐಟಿ, ಸಿಬಿಐ ದುರುಪಯೋಗ ಪಡೆಸಿಕೊಂಡು ಇಬ್ಬರು ಮುಖ್ಯಮಂತ್ರಿಗಳಾದ ಕೇಜ್ರಿವಾಲ್ ಮತ್ತು ಹೇಮಂತ್ ಸೊರೇನ್ ಅವರನ್ನು ಜೈಲಿಗೆ ಕಳುಹಿಸಿದ ಮೋದಿಯವರೇ, ಬಜೆಪಿ ಸಂಗ್ರಹಿಸಿದ 7600 ಕೋಟಿ ಹಣಕ್ಕೆ ಒಂದು ಪೈಸೆ ತೆರಿಗೆ ಕಟ್ಟಿಲ್ಲವಲ್ಲಾ. ಈ ಹಗರಣಕ್ಕಾಗಿ ಯಾರನ್ನು ಜೈಲಿಗೆ ಕಳುಹಿಸಬೇಕು ಹೇಳಿ” ಎಂದು ಪ್ರಧಾನಿಯನ್ನು ಪ್ರಶ್ನಿಸಿದರು.

“ಮೋದಿಯವರಾಗಲೀ, ಬಿಜೆಪಿಯವರಾಗಲೀ ಇವತ್ತಿನವರೆಗೂ ಯುವಕರು, ಉದ್ಯೋಗ, ಮಹಿಳೆಯರು, ಶೂದ್ರರು, ದಲಿತರು, ಶ್ರಮಿಕರು, ದುಡಿಯುವವರ ಪರವಾಗಿ ಇವತ್ತಿನವರೆಗೂ ಒಂದೂ ಸರಿಯಾದ ಕಾರ್ಯಕ್ರಮ ಮಾಡಿಲ್ಲ. ಡೀಸೆಲ್, ಪೆಟ್ರೋಲ್, ಗ್ಯಾಸ್, ರಸಗೊಬ್ಬರ, ಬೇಳೆ ಕಾಳು, ಅಡುಗೆ ಎಣ್ಣೆ ಬೆಲೆ ಮೋದಿಯವರು ಆಕಾಶಕ್ಕೆ ಏರಿಸಿದ್ದಾರೆ. ಇದೇನಾ ನಿಮ್ಮ ಅಚ್ಛೆ ದಿನ್? ಎಂದು ಕೇಳಿದರು.

ಬಿಜೆಪಿ-ಜೆಡಿಎಸ್ ಇಬ್ಬರಿಗೂ ಜನಪರವಾದ ಸಿದ್ಧಾಂತ ಮತ್ತು ಬದ್ಧತೆ ಇಲ್ಲದಿರುವುದರಿಂದ ನಾಡಿನ ಜನತೆ ಎರಡೂ ಪಕ್ಷಗಳನ್ನು ತಿರಸ್ಕರಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇದನ್ನು ಓದಿದ್ದೀರಾ? ಮಂಗಳೂರು | ಎಳನೀರು ಸೇವಿಸಿ 137 ಮಂದಿ ಅಸ್ವಸ್ಥ ಹಿನ್ನೆಲೆ; ‘ಬೊಂಡ ಫ್ಯಾಕ್ಟರಿ’ ಬಂದ್‌ ಮಾಡಲು ಆದೇಶ

ಸಚಿವರಾದ ಹೆಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ, ಕೆ.ವೆಂಕಟೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್, ಜಿಲ್ಲೆಯ ಶಾಸಕರುಗಳಾದ ದರ್ಶನ್ ಧ್ರುವನಾರಾಯಣ್, ಗಣೇಶ್ ಮಹದೇವ್ ಪ್ರಸಾದ್, ಕೃಷ್ಣಮೂರ್ತಿ, ಪುಟ್ಟರಂಗಶೆಟ್ಟಿ, ಮಾಜಿ ಶಾಸಕರಾದ ಕೇಶವಮೂರ್ತಿ, ಡಿಸಿಸಿ ಅಧ್ಯಕ್ಷ ವಿಜಯ್ ಕುಮಾರ್ ಸೇರಿ ಹಲವು ಮಂದಿ ಜಿಲ್ಲಾ, ತಾಲೂಕು, ಬ್ಲಾಕ್ ಮುಖಂಡರುಗಳು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X