ಕಲಬುರಗಿ | ಮೋದಿ ಗ್ಯಾರಂಟಿ ಟಿವಿಯಲ್ಲಿದೆ, ನಮ್ಮ ಗ್ಯಾರಂಟಿ ಜನರ ಕೈಯಲ್ಲಿದೆ: ಸಚಿವ ಪ್ರಿಯಾಂಕ್‌ ಖರ್ಗೆ

Date:

Advertisements

ಮೋದಿ ಕರ್ನಾಟಕಕ್ಕೆ ಬಂದಾಗೆಲ್ಲಾ ಶ್ಯಾಡೋ ಸಿಎಂ ಎಂದು ಹೇಳಿಕೆ ನೀಡುವುದನ್ನು ರೂಢಿಸಿಕೊಂಡಿದ್ದಾರೆ. ಆದರೆ ವಾಸ್ತವದಲ್ಲಿ ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಂತ ಇದ್ದಾರೆ ಅನ್ನೋದನ್ನು ಏಕೆ ಮರೆಯುತ್ತಿದ್ದಾರೆ. ಚುನಾವಣೆಯಲ್ಲಿ ಹೇಳಿಕೊಳ್ಳಲು ಬಿಜೆಪಿ ಸರ್ಕಾರ ಯಾವುದೇ ಸಾಧನೆ ಮಾಡಿಲ್ಲ. ಮೋದಿ ಗ್ಯಾರಂಟಿ ಟಿವಿಯಲ್ಲಿದೆ, ನಮ್ಮ ಗ್ಯಾರಂಟಿ ಜನರ ಕೈಯಲ್ಲಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಟೀಕಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅಧಿಕಾರಕ್ಕೆ ಬಂದು ಹತ್ತು ವರ್ಷಗಳು ಕಳೆದರೂ ದೇವರು, ಧರ್ಮದ ಹೆಸರಿನಲ್ಲಿ ಚುನಾವಣೆ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಹೇಳಿಕೊಳ್ಳುವಂತಹ ಸ್ವಂತ ಸಾಧನೆಯೇ ಅವರ ಬಳಿ ಇಲ್ಲ. ಆದರೆ, ನಾವು ‘ಗ್ಯಾಂರಟಿ’ ಯೋಜನೆಗಳ ದೀಪ ಇರಿಸಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಜೋಡಿತ್ತಿನ ಮುಂದಾಳುತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ. ಮೋದಿ ಗ್ಯಾರಂಟಿ ಟಿವಿಯಲ್ಲಿದೆ, ನಮ್ಮ ಗ್ಯಾರಂಟಿ ಕೈಯಲ್ಲಿದೆ” ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

“ದಕ್ಷಿಣ ಭಾರತದಲ್ಲಿ ಮೋದಿ ಸುನಾಮಿ, ಬಿಜೆಪಿ ಪರವಾದ ಗಾಳಿ ಇದ್ದಿದ್ದರೇ ಬಿಜೆಪಿಯವರು ಕರ್ನಾಟಕ, ತೆಲಂಗಾಣ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿನ ಪ್ರಾದೇಶಿಕ ಪಕ್ಷಗಳ ಜತೆಗೆ ಮೈತ್ರಿ ಮಾಡಿಕೊಂಡಿದ್ದು ಏಕೆ? ಶಕ್ತಿಯುತವಾದ ಪಕ್ಷಕ್ಕೆ ಸ್ವಂತ ಬಲದ ಮೇಲೆ ಗೆಲ್ಲುವ ವಿಶ್ವಾಸ ಇಲ್ಲವೇ? ಮೋದಿ ಸುನಾಮಿ ಇದೆ ಎನ್ನುವವರು ದಕ್ಷಿಣ ಭಾರತದಲ್ಲಿ ಎಲ್ಲಿದೆ ತೋರಿಸಲಿ” ಎಂದು ಸವಾಲು ಹಾಕಿದರು.

Advertisements

“ಬಿ.ವೈ.ವಿಜಯೇಂದ್ರ ನಾಯಕತ್ವ ಅವರ ಪಕ್ಷದವರೇ ಒಪ್ಪಿಕೊಳ್ಳತ್ತಿಲ್ಲ.ಅವರೆಲ್ಲರೂ ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎಂಬಂತೆ ಆಗಿದೆ. ಮತ್ತೊಂದು ಕಡೆ ಬಿಎಲ್‌ ಸಂತೋಷ ಹಾಗೂ ಬಿಎಸ್‌ ಯಡಿಯೂರಪ್ಪ ಅವರ ಬಡಿದಾಟ ನಡೆಯುತ್ತಿದೆ. ಡಾ.ಸುಧಾಕರ್‌, ಶೋಭಾ ಕರಂದ್ಲಾಜೆ ವಿರುದ್ಧ ‘ಗೋಬ್ಯಾಕ್‌’ ಅಭಿಯಾನ ಬಿಜೆಪಿ ಕಾರ್ಯಕರ್ತರೇ ಮಾಡುತ್ತಿದ್ದಾರೆ. ಬಿಜೆಪಿಗರು ಕಾಂಗ್ರೆಸ್‌ನತ್ತ ಗಮನಕೊಡುವುದು ಬಿಟ್ಟು ಮೊದಲು ತಮ್ಮ ಪಕ್ಷದ ಒಳಗಿನ ಬೆಂಕಿಯನ್ನು ಆರಿಸಿಕೊಳ್ಳಲಿ” ಎಂದು ತಿರುಗೇಟು ನೀಡಿದರು.

“ಬಿಜೆಪಿಯವರು ಒಂದೇ ಕುಟುಂಬ ಎನ್ನುತ್ತಿದ್ದಾರೆ. ವಾಟ್ಸಪ್‌ ಯೂನಿವರ್ಸಿಟಿ ಅವರು ಮೋದಿಗೆ ಅವರಿಗೆ ಭಾಷಣ ಬರೆದುಕೊಡುತ್ತಾರೆ. ಅತಿ ಹೆಚ್ಚು ಭ್ರಷ್ಟಾಚಾರ ಆಗಿರೋದು ಬಿಜೆಪಿ ಅವಧಿಯಲ್ಲಿ ಎಂಬುದನ್ನು ಬಿಜೆಪಿಯವರು ಮರೆತಿದ್ದಾರೆ. ಇವರದ್ದು 40 ಪರ್ಸೆಂಟ್ ಸರ್ಕಾರ ಎನ್ನುವ ಕಾರಣಕ್ಕಾಗಿಯೇ ರಾಜ್ಯದ ಜನತೆ ಬಿಜೆಪಿಯವರನ್ನು ಕಿತ್ತೊಗೆದಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಸಿಎಂ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಅರ್ನಬ್ ಗೋಸ್ವಾಮಿ, ಆರ್.‌ಕನ್ನಡ ಸಂಪಾದಕರ ವಿರುದ್ಧ ಎಫ್‌ಐಆರ್

“ಅವರವರ ಅಸ್ತಿತ್ವಕ್ಕಾಗಿ ಚುನಾವಣೆ ಮೈತ್ರಿ ಮಾಡಿಕೊಂಡಿದ್ದಾರೆ. ಬಿಜೆಪಿ– ಜೆಡಿಎಸ್ ಹೊಂದಾಣಿಕೆಯ ಮೂಲಕ ಇಬ್ಬರೂ ಹರಕೆಯ ಕುರಿಗಳಾಗಿದ್ದಾರೆ. ಕೇಳಿದಷ್ಟು ಸೀಟು ಸಿಗಲಿಲ್ಲವೆಂದು ಬಿಜೆಪಿಯ ಪಾಲುದಾರ ಎಚ್‌.ಡಿ.ಕುಮಾರಸ್ವಾಮಿ ಅವರು ಅತೃಪ್ತರಾಗಿದ್ದಾರೆ. ಕುಟುಂಬ ರಾಜಕಾರಣದ ಬಗ್ಗೆ ಕುರಿತು ಕೇಳಿದ ಉತ್ತರಿಸಿದ ಖರ್ಗೆ, “ಕಾಂಗ್ರೆಸ್‌ಗಿಂತ ಹೆಚ್ಚಿನ ಕುಟುಂಬ ರಾಜಕಾರಣ ಬಿಜೆಪಿಯಲ್ಲಿದೆ. ಡಿಎನ್ಎ ಟೆಸ್ಟ್ ಮಾಡಿಸಿದರೆ ಯಾರ್‍ಯಾರು ಯಾರ ಕುಟಂಬದವರು ಅನ್ನೋದು ಗೊತ್ತಾಗುತ್ತದೆ. ಹಾಗಾಗಿ, ಡಿಎನ್ಎ ಕಿಟ್ ಇಟ್ಟು ಚರ್ಚೆ ಮಾಡೋಣ ಬನ್ನಿ” ಎಂದು ಸವಾಲು ಹಾಕಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

ಕಲಬುರಗಿ | ಶಾಲೆಗೆ ಫಲಕ, ಮೈದಾನಕ್ಕೆ 25 ಟ್ರ್ಯಾಕ್ಟರ್ ಮಣ್ಣು ತುಂಬಿಸಿದ ದಾನಿ: ಶಿಕ್ಷಕರಿಂದ ಮೆಚ್ಚುಗೆ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಮತೀರ್ಥ...

ಕಲಬುರಗಿ | ಸಾಲದ ಭಾದೆ ತಾಳಲಾರದೆ ರೈತ ಆತ್ಮಹತ್ಯೆ

ಸಾಲದ ಭಾದೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ...

Download Eedina App Android / iOS

X