ಸಿಎಂ ಕುರ್ಚಿ ಉಳಿಸಿಕೊಳ್ಳಲು ಪ್ರಧಾನಿಯನ್ನು ನಿಂದಿಸುತ್ತಿರುವ ಸಿದ್ದರಾಮಯ್ಯ: ಆರ್ ಅಶೋಕ್ ಕಿಡಿ

Date:

ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 19 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಕಲಬುರಗಿ ಮತ್ತು ಬೆಂಗಳೂರಿಗೆ ಅವರು ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಅವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಬೆನ್ನಲ್ಲೇ, ‘ನಿದ್ದೆಯಿಂದ ಎದ್ದೇಳಿ ಮೋದಿ’ ಎಂಬ ಟ್ಯಾಗ್‌ಲೈನ್ ಜೊತೆಗೆ ಹಲವಾರು ಪೋಸ್ಟರ್‌ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿವೆ.

ಈ ಪೋಸ್ಟರ್ ಅನ್ನು ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ಸೋಷಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದರ ವಿರುದ್ಧ ಕಿಡಿಕಾರಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ್, “ಹೈಕಮಾಂಡ್ ದೊರೆಗಳನ್ನು ಮೆಚ್ಚಿಸಲು ಹಾಗೂ ಸಿಎಂ ಕುರ್ಚಿಯನ್ನು ಉಳಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿಯನ್ನು ನಿಂದಿಸುತ್ತಿದ್ದಾರೆ” ಎಂದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅಶೋಕ್, “ಸಿಎಂ ಸಿದ್ದರಾಮಯ್ಯನವರೇ, ಪ್ರಧಾನಿ ನರೇಂದ್ರ ಮೋದಿಯವರನ್ನು ನಿಂದಿಸುವ ಮೂಲಕ ನಿಮ್ಮ ಹೈಕಮಾಂಡ್ ದೊರೆಗಳನ್ನು ಮೆಚ್ಚಿಸಿ ಅಲುಗಾಡುತ್ತಿರುವ ತಮ್ಮ ಕುರ್ಚಿ ಉಳಿಸಿಕೂಳ್ಳಬಹುದು ಎಂಬ ಕನಸು ಕಾಣಬೇಡಿ. ತಾವು ಎಷ್ಟೇ ಹಾರಾಡಿದರೂ, ಚೀರಾಡಿದರೂ ಲೋಕಸಭೆ ಚುನಾವಣೆವರೆಗೆ ಮಾತ್ರ ತಮ್ಮ ಕುರ್ಚಿ ಭದ್ರ ಎಂಬುದು ಈಗ ಗುಟ್ಟಾಗಿ ಏನು ಉಳಿದಿಲ್ಲ” ಎಂದು ಟೀಕಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಇಡೀ ವಿಶ್ವವೇ ಮೆಚ್ಚಿರುವ, ಇಡೀ ದೇಶವೇ ಪ್ರೀತಿಸುವ ಅದ್ವಿತೀಯ ನಾಯಕ ಪ್ರಧಾನಿ ಮೋದಿ. ಅವರ ಶಿಸ್ತಿನ ಜೀವನ, ಪರಿಶ್ರಮದ ಸ್ವಭಾವ, ಹಿಡಿದ ಕೆಲಸ ಮಾಡಿ ಮುಗಿಸುವ ಬದ್ಧತೆ ಇವೆಲ್ಲವೂ ಈ ದೇಶದ ಸಣ್ಣ ಮಕ್ಕಳಿಗೂ ಗೊತ್ತಿದೆ” ಎಂದು ಪ್ರಧಾನಿಯನ್ನು ಹೊಗಳಿದ್ದಾರೆ.

ಇದೇ ವೇಳೆ ಆರ್ ಅಶೋಕ್,
“ನುಡಿದರೆ ಮುತ್ತಿನ ಹಾರದಂತಿರಬೇಕು,
ನುಡಿದರೆ ಮಾಣಿಕ್ಯದ ದೀಪ್ತಿಯಂತಿರಬೇಕು,
ನುಡಿದರೆ ಸ್ಫಟಿಕದ ಶಲಾಕೆಯಂತಿರಬೇಕು,
ನುಡಿದರೆ ಲಿಂಗ ಮೆಚ್ಚಿ ಅಹುದೇನಬೇಕು!
ನುಡಿಯೊಳಗಾಗಿ ನಡೆಯದಿದ್ದರೆ ಕೂಡಲಸಂಗಮದೇವನೆಂತೊಲಿವನಯ್ಯ?” ಎಂಬ ವಚನವೊಂದನ್ನು ತಮ್ಮ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಕುಡಿಯುವ ನೀರಿಗಾಗಿ ಬಂಗಾರಪ್ಪನಗರ ನಿವಾಸಿಗಳ ಪರದಾಟ

ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ನೀರಿಗೆ ಹಾಹಾಕಾರ ಶುರುವಾಗಿದೆ. ಇದೀಗ, ರಾಜರಾಜೇಶ್ವರಿ...

ಗದಗ | ಬಡವರ, ಸಣ್ಣ ರೈತರ ಪ್ರಕರಣಗಳ ಪರಿಹಾರಕ್ಕಾಗಿ ಹೊಸ ಕಾನೂನು ಜಾರಿ: ಸಚಿವ ಎಚ್‌.ಕೆ ಪಾಟೀಲ್

ಬಡವರ, ಸಣ್ಣ ರೈತರ ಪ್ರಕರಣಗಳ ಪರಿಹಾರಕ್ಕಾಗಿ ಮಾರ್ಚ್ 4ರಂದು ರಾಜ್ಯಾದ್ಯಂತ ನೂತನ...

ಬೆಂಗಳೂರು | ಪ್ರಿಯಕರನೊಂದಿಗೆ ಸೇರಿ ಎರಡು ವರ್ಷದ ಮಗುವಿಗೆ ಚಿತ್ರಹಿಂಸೆ ನೀಡಿದ ತಾಯಿ

ಹೆತ್ತ ತಾಯಿಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿಕೊಂಡು ಎರಡು ವರ್ಷದ ಮಗುವನ್ನು ಮನೆಯಲ್ಲಿ...

ರೈತ ಹೋರಾಟ | ಸರ್ಕಾರದ ದಮನಕ್ಕೆ ಬಗ್ಗದ ‘ದೆಹಲಿ ಚಲೋ’; ಈವರೆಗೆ 6 ರೈತರು ಸಾವು

ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಮತ್ತು ರೈತ ಸಾಲ ಮನ್ನಾಕ್ಕಾಗಿ ಆಗ್ರಹಿಸಿದ...