- ಚಾಮುಂಡೇಶ್ವರಿಗೆ ಗೃಹಲಕ್ಷ್ಮೀ ಯೋಜನೆಯ 2000 ರೂ. ಕಾಣಿಕೆ
- ನಾಳೆ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮಕ್ಕೆ ಮೈಸೂರಿನಲ್ಲಿ ಚಾಲನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಸೇರಿ ಮೈಸೂರಿನ ಚಾಮುಂಡೇಶ್ವರಿ ದೇವಿಗೆ ಮಂಗಳವಾರ ಹಸಿರು ಮತ್ತು ಕೆಂಪು ಸೀರೆ, ಕನಕಾಂಬರ, ಮಲ್ಲಿಗೆ, ಗುಲಾಬಿ ಹೂವಿನ ಹಾರ ಹಾಗೂ ಫಲ ಸಮರ್ಪಣೆ ಮಾಡುವ ಮೂಲಕ ಹೊತ್ತುಕೊಂಡಿದ್ದ ಹರಕೆ ತೀರಿಸಿದ್ದಾರೆ.
ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಸರ್ಕಾರ ಅಧಿಕಾರಿಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮಾಡುವುದಾಗಿ ಮೇ 9ರಂದು ಚಾಮುಂಡೇಶ್ವರಿ ಎದುರು ಇಬ್ಬರು ನಾಯಕರು ವಾಗ್ದಾನ ಮಾಡಿದ್ದರು. ಇದೀಗ ಆ ಬೇಡಿಕೆ ಈಡೇರಿದ್ದರಿಂದ ಹರಕೆ ತೀರಿಸಿದ್ದಾರೆ.
ಚಾಮುಂಡೇಶ್ವರಿಗೆ ಮೊದಲ ಗೃಹಲಕ್ಷ್ಮೀ ಯೋಜನೆಯ 2000 ರೂಪಾಯಿಯನ್ನು ಕಾಣಿಕೆ ಸಂದಾಯ ಮಾಡಿದರು. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ತಲಾ 2 ಸಾವಿರ ರೂ. ಕಾಣಿಕೆ ನೀಡಿದರು.
ಚಾಮುಂಡೇಶ್ವರಿ ದರ್ಶನ ಬಳಿಕೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಮೇ 9ರಂದು ನಾನು ಮತ್ತು ಡಿಕೆ ಶಿವಕುಮಾರ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದೆವು. 5 ಗ್ಯಾರಂಟಿ ಜಾರಿಗೊಳಿಸುವುದಾಗಿ ಹರಕೆ ಹೊತ್ತಿದ್ದೆವು. ಅದರಂತೆ ಇದೀಗ ಇಂದು ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಹರಕೆ ತೀರಿಸಿದ್ದೇವೆ. ನಾಳೆ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದೇವೆ” ಎಂದರು.
ಈ ಸುದ್ದಿ ಓದಿದ್ದೀರಾ? ಸಂಗೀತ ನಿರ್ದೇಶಕ ಹಂಸಲೇಖರಿಂದ ಈ ಬಾರಿ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ
“ಚಾಮುಂಡೇಶ್ವರಿ ದೇವಿ ಮುಂದೆ ಗ್ಯಾರಂಟಿ ಕಾರ್ಡ್ ಇಟ್ಟು ಬೇಡಿಕೊಂಡಿದ್ದೆವು. ಗೃಹಲಕ್ಷ್ಮೀ ಯೋಜನೆ ಅನುಷ್ಠಾನಕ್ಕೆ ಶಕ್ತಿ ಕೊಡುವಂತೆ ಬೇಡಿಕೊಂಡಿದ್ದೆವು. ಈಗ ಗೃಹಲಕ್ಷ್ಮೀ ಯೋಜನೆ ಜಾರಿಯಾಗುತ್ತಿದೆ. ಹೀಗಾಗಿ ಇಂದು ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದೇವೆ” ಎಂದು ಡಿಕೆ ಶಿವಕುಮಾರ್ ತಿಳಿಸಿದರು.
“ಬೆಳಗಾವಿಯಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಚಾಮುಂಡೇಶ್ವರಿಯ ನೆಲದಲ್ಲೇ ಕಾರ್ಯಕ್ರಮ ಮಾಡುತ್ತಿದ್ದೇವೆ. ವಿಶೇಷ ರೀತಿಯಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ ನಡೆಯುತ್ತಿದ್ದು, 12,600 ಕಡೆ ನೇರ ಪ್ರಸಾರದ ಮೂಲಕ ಕಾರ್ಯಕ್ರಮ ನಡೆಯಲಿದೆ” ಎಂದು ವಿವರಿಸಿದರು.
ದೇವರಿಂದ ಪವರ್ ಸಿಕ್ಕಿತೇ?