2ನೇ ಬಾರಿ ಸಿಎಂ ಆದ ಸಿದ್ದರಾಮಯ್ಯ; ರಾಜ್ಯದಲ್ಲಿನ್ನು “ಎಸ್‌ಡಿಕೆ” ಸರ್ಕಾರ

Date:

  • ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ನೂತನ ಕಾಂಗ್ರೆಸ್ ಸರ್ಕಾರ
  • 8 ಮಂದಿ ಸಚಿವರೊಂದಿಗೆ ಪ್ರಮಾಣ ಸ್ವೀಕರಿಸಿದ ಸಿಎಂ

ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಹೊಸಯುಗ ಆರಂಭವಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಂದಿನಿಂದ ಕಾರ್ಯಾರಂಭಕ್ಕೆ ಅಣಿಯಾಗಿದೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಾಡಿನ ಗಣ್ಯಮಾನ್ಯರ ಜೊತೆ ಆಹ್ವಾನಿತರಾಗಿದ್ದ ಅತಿಥಿಗಳ ಸಮ್ಮುಖದೊಂದಿಗೆ ಅಪಾರ ಅಭಿಮಾನಿಗಳ ಎದುರಲ್ಲಿ ಸಿದ್ದರಾಮಯ್ಯ ಎರಡನೇ ಬಾರಿ ಮುಖುಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಎಂದಿನಂತೆ ತಮ್ಮ ರೇಷ್ಮೆ ಪಂಚೆ, ಷರ್ಟ್ ನಲ್ಲಿ ಮಿರಿಮಿರಿ ಮಿಂಚುತ್ತಿದ್ದ ಸಿದ್ದರಾಮಯ್ಯ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರು. ಇವರಿಗೆ ಜೊತೆಯಾದ ಡಿಸಿಎಂ ಶಿವಕುಮಾರ್ ಕೂಡ ಅದೇ ವಸ್ತ್ರಸಂಹಿತೆ ಪಾಲಿಸಿ, ತಾವೂ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇವರೊಂದಿಗೆ ಸಂಪುಟ ಸೇರ್ಪಡೆಗೊಂಡ ಡಾ ಜಿ ಪರಮೇಶ್ವರ್ ಸಂವಿಧಾನದ ಹೆಸರಿನಲ್ಲೂ, ಎಂ ಬಿ ಪಾಟೀಲ್ ದೇವರ ಹೆಸರಿನಲ್ಲೂ, ಕೆ ಎಚ್ ಮುನಿಯಪ್ಪ ದೇವರ ಹೆಸರಿನಲ್ಲೂ, ಕೆ.ಜೆ ಜಾರ್ಜ್ ದೇವರ ಹೆಸರಿನಲ್ಲೂ, ಸತೀಶ್ ಜಾರಕಿಹೊಳಿ ಬುದ್ದ,ಬಸವ,ಅಂಬೇಡ್ಕರ್‌ ಹೆಸರಿನಲ್ಲಿ, ಪ್ರಿಯಾಂಕ್ ಖರ್ಗೆ ದೇವರ ಹೆಸರಿನಲ್ಲೂ, ಜಮೀರ್ ಅಹ್ಮದ್‌ ಅಲ್ಲಾ ಮತ್ತು ತಾಯಿಯ ಹೆಸರಿನಲ್ಲಿ ಮತ್ತು ರಾಮಲಿಂಗಾರೆಡ್ಡಿ ದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರು.ಸಿದ್ದರಾಮಯ್ಯ ಸಂಪುಟ

ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಇವರಿಗೆ ಗೌಪ್ಯತಾ ಪ್ರಮಾಣವಚನ ಬೋಧಿಸಿದರು. ಜಮೀರ್‌ ಅಹ್ಮದ್‌ ಹೊರತು ಪಡಿಸಿ ಉಳಿದೆಲ್ಲ ಸಚಿವರು ಕನ್ನಡದಲ್ಲಿ ಪ್ರಮಾಣ ಸ್ವೀಕರಿಸಿದರು. ಜಮೀರ್‌ ಇಂಗ್ಲೀಷ್‌ ನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಇಂದು ಸಂಪುಟ ಸಚಿವರಾಗಿ ಪ್ರಮಾಣ ಸ್ವೀಕರಿಸಿದ ನಾಲ್ಕು ಮಂದಿ ಹಿರಿಯ ಸಚಿವರು ಈ ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಗೃಹ ಸಚಿವರಾಗಿದ್ದವರೆನ್ನುವುದು ಗಮನಾರ್ಹ.

ಈ ಸುದ್ದಿ ಓದಿದ್ದೀರಾ?:ಶನಿವಾರವೇ ಮೊದಲ ಸಂಪುಟ ಸಭೆ; ಜಾರಿಗೆ ಬರುತ್ತವಾ ಐದು ಗ್ಯಾರಂಟಿಗಳು?

ತೃತೀಯ ರಂಗದ ಬಲಪ್ರದರ್ಶನ

ಎಸ್‌ಡಿಕೆ ಜೋಡಿ ಪ್ರಮಾಣವಚನದ ವೇಳೆ ಅಭಿಮಾನಿಗಳ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಇಂತಹ ಸಂಭ್ರಮದ ಕ್ಷಣಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವರಿಷ್ಠ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್, ತಮಿಳುನಾಡಿನ ಮುಖ್ಯಮಂತ್ರಿ ಸ್ಟ್ಯಾಲಿನ್, ರಾಜಸ್ಥಾನ ಮುಖ್ಯಮಂತ್ರಿ ಗೆಹ್ಲೋಟ್, ಎನ್ಸಿಪಿಯ ಶರದ್ ಪವಾರ್, ನ್ಯಾಷನಲ್ ಕಾನ್ಫರೆನ್ಸ್‌ನ ಫರೂಕ್ ಅಬ್ದುಲ್ಲಾ, ಮುಫ್ತಿ ಮಹಮ್ಮದ್ ಸಯ್ಯದ್, ನಟ ಕಮಲಹಾಸನ್, ಶಿವರಾಜ್ ಕುಮಾರ್, ನಟಿ ರಮ್ಯ ಸೇರಿದಂತೆ ಇತರರು ಸಾಕ್ಷಿಯಾದರು.

ಒಂದುವರೆ ಘಂಟೆಗಳ ಕಾಲ ನಡೆದ ಸಮಾರಂಭದ ಬಳಿಕ ಸಿಎಂ ಸಿದ್ದರಾಮಯ್ಯ ಡಿಸಿಎಂ ಶಿವಕುಮಾರ್ ಸೇರಿದಂತೆ ಸಂಪುಟ ಸಿಚಿವರು ವಿಧಾನಸೌಧಕ್ಕೆ ತೆರಳಿ ಮೊದಲ ಸಂಪುಟ ಸಭೆಯಲ್ಲಿ ಭಾಗಿಯಾದರು

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಕೊಲೆ ಪ್ರಕರಣ: ನಟ ದರ್ಶನ್ ವಿರುದ್ಧ ಪ್ರತಿಭಟನೆ

ನಟ ದರ್ಶನ್‌ ಮತ್ತು ಆತನ ಗ್ಯಾಂಗ್‌ನಿಂದ ಹತ್ಯೆಯಾದ ರೇಣುಕಾಸ್ವಾಮಿ ಸಾವಿಗೆ ನ್ಯಾಯ...

ಉಡುಪಿ‌-ಕಾಸರಗೋಡು 400 KV ವಿದ್ಯುತ್ ಲೈನ್ ಅಳವಡಿಕೆಗೆ ಗ್ರಾಮಸ್ಥರ ವಿರೋಧ

ಉಡುಪಿ ಮತ್ತು ಕಾಸರಗೋಡು ನಡುವೆ 400 KV ವಿದ್ಯುತ್‌ ಲೈನ್ ಅಳವಡಿಕೆ...

ದಾವಣಗೆರೆ | ಪಾರ್ಕ್‌ನಲ್ಲಿ ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ಪಾಲಿಕೆ ಚಿಂತನೆ; ನಿವಾಸಿಗಳ ಪ್ರತಿಭಟನೆ

ದಾವಣಗೆರೆ ಮಹಾನಗರ ಪಾಲಿಕೆಯು 41ನೇ ವಾರ್ಡ್‌ನಲ್ಲಿರುವ ಉದ್ಯಾನವನದಲ್ಲಿ ಕಸ ವಿಲೇವಾರಿ ಘಟಕ...

ನೀಟ್ ಹಗರಣ ಖಂಡಿಸಿ ಎಐಡಿಎಸ್‌ಓ ಪ್ರತಿಭಟನೆ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮವನ್ನು ಖಂಡಿಸಿ ಎಐಡಿಎಸ್‌ಓ ನೇತೃತ್ವದಲ್ಲಿ ವಿದ್ಯಾರ್ಥಿ-ಯುವಜನರು...