ಜೈ ಬಾಪು-ಜೈ ಭೀಮ್-ಜೈ ಸಂವಿಧಾನದ ಅಭಿಯಾನ ಯಶಸ್ವಿಗೊಳಿಸೋಣ: ಸಿದ್ದರಾಮಯ್ಯ

Date:

Advertisements

ಜೈ ಬಾಪು-ಜೈ ಭೀಮ್-ಜೈ ಸಂವಿಧಾನದ ಐತಿಹಾಸಿಕ ಅಭಿಯಾನವನ್ನು ಅತ್ಯಂತ ಯಶಸ್ವಿಗೊಳಿಸೋಣ. ಜ 21ರ ಬೆಳಗಾವಿಯ ಚಾರಿತ್ರಿಕ ಸಮಾವೇಶಕ್ಕೆ ಮುನ್ನಡೆಯಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡಿನ ಜನತೆಗೆ ಮತ್ತು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.

ಕೆಪಿಸಿಸಿ ಕಚೇರಿಯಲ್ಲಿ, ಬೆಳಗಾವಿಯಲ್ಲಿ ಇದೇ ಜನವರಿ 21 ರಂದು ನಡೆಯಲಿರುವ ಗಾಂಧಿ ಭಾರತ ಕಾರ್ಯಕ್ರಮ ಮತ್ತು ಜೈ ಬಾಪು-ಜೈ ಭೀಮ್ – ಜೈ ಸಂವಿಧಾನ ಅಭಿಯಾನದ ಬೃಹತ್ ಸಮಾವೇಶದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದರು.

ದೇಶದ ಸ್ವಾತಂತ್ರ್ಯ ಹೋರಾಟ, ದೇಶದ ಸ್ವಾತಂತ್ರ್ಯ ಮತ್ತು ಸಂವಿಧಾನದ ಬಗ್ಗೆ ಗೌರವ ಇರುವ ಎಲ್ಲರಿಗೂ ಸಮಾವೇಶಕ್ಕೆ ಸ್ವಾಗತ ಎಂದ ಮುಖ್ಯಮಂತ್ರಿಗಳು ಆರ್‌ಎಸ್‌ಎಸ್‌ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದೆ ದೇಶಕ್ಕೆ ದ್ರೋಹ ಬಗೆದ ಚರಿತ್ರೆಯನ್ನು ಸಭೆಯಲ್ಲಿ ಸ್ಮರಿಸಿದರು.

Advertisements

ಕಾಂಗ್ರೆಸ್ ಪಕ್ಷ ಹೋರಾಟ, ತ್ಯಾಗ, ಬಲಿದಾನಗಳಿಂದ ಕಟ್ಟಿದ್ದಾಗಿದೆ. ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ದೇಶಕ್ಕಾಗಿ ಹುತಾತ್ಮರಾದರು. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ತಮ್ಮ ಪಾಲಿಗೆ ಒದಗಿ ಬಂದಿದ್ದ ಪ್ರಧಾನಿ ಹುದ್ದೆಯನ್ನು ತ್ಯಾಗ ಮಾಡಿ ಮನಮೋಹನ್ ಸಿಂಗ್ ಅವರನ್ನು ಪ್ರಧಾನಿ ಮಾಡಿದರು. ಈ ಆದರ್ಶಗಳ ಮಾರ್ಗದಲ್ಲಿ ನಾವು ಮುನ್ನಡೆಯೋಣ ಎಂದರು.

ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಬಗ್ಗೆ ಗೌರವ ಇಲ್ಲದೆ, ವಿಗ್ರಹ ಮಾಡಿಟ್ಟುಕೊಂಡಿರುವ ಬಿಜೆಪಿಯವರು, ಗಾಂಧಿ ಬಗ್ಗೆ ಗೌರವ ಇಲ್ಲದ ಬಿಜೆಪಿಯವರು, ಸ್ವಾತಂತ್ರ್ಯ ಹೋರಾಟದ ಬಗ್ಗೆ ಗೌರವ ಇಲ್ಲದ ಇವರಿಗೆ, ಅಂಬೇಡ್ಕರ್, ನೆಹರೂ ಯಾರ ಬಗ್ಗೆಯೂ ಗೌರವ ಇಲ್ಲದ ಬಿಜೆಪಿಯವರಿಗೆ ದೇಶದ ಸಂವಿಧಾನ ಮತ್ತು ಚರಿತ್ರೆಯ ಬಗ್ಗೆಯೂ ಗೌರವ ಇಲ್ಲ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕುಸಿತ ಕಂಡ ‘ಬಾಲಿವುಡ್’, ಭಿನ್ನ ಜಾಡು ಹಿಡಿದ ದಕ್ಷಿಣ ಭಾರತದ ಚಿತ್ರೋದ್ಯಮ

ಅಂಬೇಡ್ಕರ್, ಗಾಂಧಿ, ನೆಹರೂ ಮತ್ತು ಕಾಂಗ್ರೆಸ್ಸಿನ ಹೋರಾಟದ ಚರಿತ್ರೆಯನ್ನು ನಾವು ಮುಂದಿನ ಪೀಳಿಗೆಗೆ ಅರ್ಥ ಮಾಡಿಸಬೇಕಿದೆ. ನಾವು ಗಾಂಧಿ ವಂಶಸ್ಥರು ಅವರು ಗೋಡ್ಸೆ ವಂಶಸ್ಥರು. ಬಿಜೆಪಿ ಮತ್ತು ಕಾಂಗ್ರೆಸ್ಸಿನ ಈ ಸೈದ್ಧಾಂತಿಕ ವ್ಯತ್ಯಾಸವನ್ನು ಇವತ್ತಿನ ಯುವ ಪೀಳಿಗೆಗೆ ಅರ್ಥೈಸಬೇಕಿದೆ. ಇದಕ್ಕಾಗಿ ಜ.21ರ ಗಾಂಧಿ ಭಾರತ ಸಮಾವೇಶವನ್ನು ಅತ್ಯಂತ ಯಶಸ್ವಿಗೊಳಿಸೋಣ ಎಂದು ಕರೆ ನೀಡಿದರು.

ದೇಶದ ಸ್ವಾತಂತ್ರ್ಯ ಮತ್ತು ಸಂವಿಧಾನದ ಬಗ್ಗೆ ಗೌರವ ಇರುವ ಎಲ್ಲರಿಗೂ, ಎಲ್ಲ ಪಕ್ಷದವರಿಗೂ ಸಮಾವೇಶಕ್ಕೆ ಸ್ವಾಗತ ಎಂದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಎಚ್ ಕೆ ಪಾಟೀಲ್, ಈಶ್ವರ್ ಖಂಡ್ರೆ, ಕೆ ಜೆ ಜಾರ್ಜ್, ಕೆ ಎಚ್ ಮುನಿಯಪ್ಪ, ಎಚ್ ಸಿ ಮಹದೇವಪ್ಪ, ಚಲುವರಾಯಸ್ವಾಮಿ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಲಕ್ಷ್ಮೀ ಹೆಬ್ಬಾಳ್ಕರ್, ಶಿವರಾಜ್ ತಂಗಡಗಿ, ಶಿವಾನಂದ ಪಾಟೀಲ್, ಸಂತೋಷ್ ಲಾಡ್, ಆರ್ ಬಿ ತಿಮ್ಮಾಪುರ, ವೆಂಕಟೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ ಸಿ ಚಂದ್ರಶೇಖರ್, ವಸಂತ ಕುಮಾರ್ ಮತ್ತಿತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X