‘ಸಿದ್ದರಾಮಯ್ಯ, ಡಿಕೆಶಿಯನ್ನು ತುಂಡು-ತುಂಡಾಗಿ ಕತ್ತರಿಸುತ್ತೇನೆ’: ಬೆದರಿಕೆ ಇ-ಮೇಲ್

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರನ್ನು ಕೊಂದು, ತುಂಡು-ತುಂಡಾಗಿ ಕತ್ತರಿಸುತ್ತೇನೆ ಎಂದು ದುಷ್ಕರ್ಮಿಯೊಬ್ಬ ಬೆದರಿಕೆ ಹಾಕಿದ್ದು, ಆತನನ್ನು ಬಂಧಿಸಲು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಗೃಹ ಸಚಿವರು, ನಗರ ಪೊಲೀಸ್‌ ಆಯುಕ್ತರ ಅಧಿಕೃತ ಇ-ಮೇಲ್‌ಗಳಿಗೆ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಅವರನ್ನು ಕೊಲ್ಲುತ್ತೇನೆಂದು ಇ-ಮೇಲ್ ಸಂದೇಶ ಬಂದಿದೆ. ಅದರಲ್ಲಿ; “ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯನ್ನು ಕೊಲ್ಲುತ್ತೇನೆ. ತುಂಡು-ತುಂಡಾಗಿ ಕತ್ತರಿಸಿ, ಫ್ರಿಡ್ಜ್ ಮತ್ತು ಟ್ಯಾಲಿ ಬ್ಯಾಗ್‌ನಲ್ಲಿ ತುಂಬುತ್ತೇನೆ” ಎಂದು ಬೆದರಿಕೆ ಹಾಕಲಾಗಿದೆ.

ಅಲ್ಲದೆ, “ಬೆಂಗಳೂರಿನ ರಾಮಪುರದ ಪ್ರಭಾಕರ್‌ಗೆ 1 ಕೋಟಿ ರೂ. ಸಾಲ‌ ಕೊಟ್ಟಿದ್ದೆ. ಅದನ್ನು ವಾಪಸ್ ಕೊಟ್ಟಿಲ್ಲ. ತಕ್ಷಣವೇ ವಾಪಸ್ ಕೊಡಿಸಿ. ಆ ಜಣವನ್ನು ಪ್ರಭಾಕರ್‌, ತನ್ನ ನಾದಿನಿ ಮನೆಯಲ್ಲಿ ಬಚ್ಚಿಟ್ಟಿದ್ದಾನೆ” ಎಂದೂ ಬರೆದಿದ್ದಾಗಿ ತಿಳಿದುಬಂದಿದೆ.

Advertisements

ಸಿಂಧಾರ್ ರಜಪೂತ್ ಎಂಬ ಇ-ಮೇಲ್ ಐಡಿಯಿಂದ ಮೇಲ್ ಬಂದಿದೆ. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಬೆದರಿಕೆ ಸಂದೇಶ ಬಂದಿರುವ ಇ-ಮೇಲ್‌ ಟ್ರ್ಯಾಕ್‌ ಮಾಡಲಾಗುತ್ತಿದೆ. ಹಲವು ಆಯಾಮಗಳಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಶೀಘ್ರವೇ ಆರೋಪಿಯನ್ನು ಬಂಧಿಸುತ್ತೇವೆಂದು ಪೊಲೀಸರು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X