ಕಡು ಭ್ರಷ್ಟತೆಗೆ ಹೊಸ ಇತಿಹಾಸ ಬರೆಯಲು ಹೊರಟ ಸಿದ್ದರಾಮಯ್ಯ ಸರ್ಕಾರ: ಬಿ ವೈ ವಿಜಯೇಂದ್ರ ಕಿಡಿ

Date:

ಈ ಹಿಂದೆ ಬಿಜೆಪಿ ಮೇಲೆ ಕಾಂಗ್ರೆಸ್‌ ಆಧಾರ ರಹಿತ ಶೇ.40 ಕಮಿಷನ್‌ ಆರೋಪ ಮಾಡಿತ್ತು. ಈಗ ಅದೇ ಕಾಂಗ್ರೆಸ್‌ ಸರ್ಕಾರದಲ್ಲಿ ಅದಕ್ಕೂ ಮೀರಿಸಿದಂತೆ ಕಮಿಷನ್‌ ದಂಧೆ ನಡೆಯುತ್ತಿದೆ ಎನ್ನುವುದನ್ನು ಕಾಂಗ್ರೆಸ್ ಮುಖಂಡ ಬಿ. ಶಿವರಾಂ ಬಯಲು ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದ್ದಾರೆ.

- Advertisement -

ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಕಾಂಗ್ರೆಸ್ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ಬಾಗಿಲು ತೆರೆದು ಹಾಸನ ಜಿಲ್ಲೆಯಲ್ಲಿ ನಡೆಯುತ್ತಿರುವ ಪರ್ಸೆಂಟೇಜ್ ವ್ಯವಹಾರವನ್ನು ಮಾಜಿ ಸಚಿವರೂ ಆದ ಕಾಂಗ್ರೆಸ್ ಮುಖಂಡ ಬಿ. ಶಿವರಾಂ ಬಯಲು ಮಾಡಿದ್ದಾರೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರು ಕಮಿಷನ್‌ ದಂಧೆ ಬಗ್ಗೆ ಸ್ವತಃ ಕಾಂಗ್ರೆಸ್ಸಿಗರೇ ಈ ಮಟ್ಟದಲ್ಲಿ ರೋಸಿ ಹೋಗಿದ್ದಾರೆಂದರೆ ಸಿದ್ದರಾಮಯ್ಯ ಅವರ ಸರ್ಕಾರ ಕಡು ಭ್ರಷ್ಟತೆಗೆ ಹೊಸ ಇತಿಹಾಸ ಬರೆಯಲು ಹೊರಟಂತಿದೆ” ಎಂದು ಟೀಕಿಸಿದ್ದಾರೆ.

“ಅಭಿವೃದ್ಧಿ, ಜನಕಲ್ಯಾಣ ಕಾರ್ಯಗಳನ್ನು ಸಂಪೂರ್ಣವಾಗಿ ಮರೆತಿರುವ ಕಾಂಗ್ರೆಸ್ ಸರ್ಕಾರ ಎಲ್ಲೆಂದರಲ್ಲಿ ಭ್ರಷ್ಟಾಚಾರದ ಅಂಗಡಿಗಳನ್ನು ತೆರೆಯುವುದರ ಜತೆಗೇ ಹೆಜ್ಜೆ ಹೆಜ್ಜೆಗೂ ಎಟಿಎಂ ಮಾದರಿ ಕಮೀಷನ್ ಕೌಂಟರ್ ಗಳನ್ನೂ ತೆರೆದು ಕುಳಿತಿದೆ. ಈ ಸರ್ಕಾರವನ್ನು ಕಿತ್ತೊಗೆಯುವುದೊಂದೇ ಜನರಿಗಿರುವ ಮಾರ್ಗವಾಗಿದೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...