ಶ್ರೀರಾಮನವಮಿ | ನನ್ನ ʼರಾಮʼ ಅಂತಃಕರಣ ಸ್ವರೂಪಿ, ನಿಮಗೆ ಚುನಾವಣಾ ಸರಕು; ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು

Date:

  • ಶ್ರೀರಾಮನವಮಿ ಬಗ್ಗೆ ಸಿದ್ದರಾಮಯ್ಯ ಶುಭ ಹಾರೈಸಿದ್ದನ್ನು ಅಣಕಿಸಿದ ಬಿಜೆಪಿ
  • ಮನಸುಗಳನ್ನು ಒಡೆದು ಚುನಾವಣೆಯಲ್ಲಿ ಲಾಭ ಪಡೆಯುವವರು ನೀವು: ಟೀಕೆ

ಶ್ರೀರಾಮನವಮಿ ಬಗ್ಗೆ ಸಿದ್ದರಾಮಯ್ಯ ಶುಭ ಹಾರೈಸಿದ್ದನ್ನು ಅಣಕಿಸಿರುವ ಬಿಜೆಪಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡಲೇ ತಿರುಗೇಟು ನೀಡಿದ್ದಾರೆ.

“ಮಹಾತ್ಮ ಗಾಂಧಿಯವರು ನಂಬಿದ್ದ ಮಾನವೀಯ ಗುಣಗಳ, ಮಾತೃಹೃದಯದ, ಸರ್ವವನ್ನೂ ಪ್ರೀತಿಸುವ ರಾಮನ ಅನುಯಾಯಿ ನಾನು. ರಾಮನ ಹೆಸರಿನಲ್ಲಿ ದ್ವೇಷಬಿತ್ತಿ, ಮನಸುಗಳನ್ನು ಒಡೆದು ಚುನಾವಣೆಯಲ್ಲಿ ಲಾಭ ಪಡೆಯುವವರು ನೀವು. ನನ್ನ ರಾಮ ಅಂತಃಕರಣ ಸ್ವರೂಪಿ, ನಿಮಗೆ ರಾಮ ಚುನಾವಣಾ ಸರಕು. ಶ್ರೀರಾಮನೇ ನಿಮಗೆ ಸದ್ಬುದ್ಧಿ ನೀಡಲಿ” ಎಂದು ಸಿದ್ದರಾಮಯ್ಯ ಟ್ವೀಟ್‌ ಮೂಲಕ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಶ್ರೀರಾಮನವಮಿ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು “ಆದರ್ಶ ಪುರುಷ ಶ್ರೀರಾಮನು ಹಾಕಿಕೊಟ್ಟ ಪ್ರೀತಿ, ಸಹಾನುಭೂತಿ, ಅಂತಃಕರಣ, ನ್ಯಾಯಪರಿಪಾಲನೆಯ ಹಾದಿಯಲ್ಲಿ ಮುನ್ನಡೆಯೋಣ. ಪಾನಕ, ಕೋಸಂಬರಿಯ ಜೊತೆ ಸ್ನೇಹ, ಸೌಹಾರ್ದತೆ ಮಿಳಿತಗೊಳ್ಳಲಿ, ಮನುಷ್ಯಪ್ರೇಮದ ಬೆಳಕು ಜಗದಗಲ ಬೆಳಗಲಿ. ನಾಡಿನ ಸಮಸ್ತ ಜನತೆಗೆ ರಾಮನವಮಿಯ ಶುಭಹಾರೈಕೆಗಳು” ಗುರುವಾರ ಬೆಳಗ್ಗೆ ಟ್ವೀಟ್‌ ಮಾಡಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ರಾಜಕೀಯ ಸತ್ ಪರಂಪರೆಯ ರಾಜ್ಯದಲ್ಲಿ ನಡೆಯಬೇಕಿದೆ ಮುಕ್ತ, ನ್ಯಾಯಸಮ್ಮತ ಚುನಾವಣೆ

ಸಿದ್ದರಾಮಯ್ಯ  ಅವರ ಈ ಟ್ವೀಟ್‌ಗೆ ಬಿಜೆಪಿ ಪ್ರತಿಕ್ರಿಯಿಸಿ, “ಪ್ರಭು ಶ್ರೀರಾಮಚಂದ್ರನ ಅಸ್ತಿತ್ವವನ್ನೇ ಪ್ರಶ್ನಿಸುವ, ರಾಮಚಂದ್ರನ ಭವ್ಯ ಮಂದಿರದ ವಿರುದ್ ವೇ ಸಮರ ಸಾರಿದ, ರಾಮಚಂದ್ರನ ರಾಮರಾಜ್ಯವನ್ನು ಟೀಕಿಸುವ ಅಲ್ಪರ ಗುಂಪಿನ ʼಪೋಸ್ಟರ್‌ ಬಾಯ್‌ʼ ಸಿದ್ದರಾಮಯ್ಯನವರು ಇಂದು ‘ರಾಮಭಕ್ತನ’ ವೇಷ ತೊಟ್ಟು, ‘ಚುನಾವಣಾ ನಿಮಿತ್ತ ಬಹುಕೃತವೇಷ’ವೆಂಬ ನುಡಿಯ ಗೌರವ ಹೆಚ್ಚಿಸಿದ್ದಾರೆ” ಎಂದು ಟ್ವೀಟ್‌ ಮಾಡಿ ಟೀಕಿಸಿತ್ತು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಈಗ ಟ್ವೀಟ್‌ ಮೂಲಕವೇ ಉತ್ತರ ಕೊಟ್ಟಿದ್ದಾರೆ.

ಬಿಜೆಪಿ ವಿರುದ್ಧ ವಾಗ್ದಾಳಿ ಮುಂದುವರಿಸಿದ ಸಿದ್ದರಾಮಯ್ಯ, ಜನ ಬದಲಾವಣೆ ಬಯಸುತ್ತಿದ್ದಾರೆ. ಹೀಗಾಗಿ ರಾಜಕೀಯದ ದಿಕ್ಕು ಬದಲಾಗುತ್ತಿದೆ” ಎಂದು ಸುದ್ದಿಗಾರರಿಗೆ ಬೆಂಗಳೂರಿನಲ್ಲಿ ತಿಳಿಸಿದರು.

“ಮತದಾರರ ಮನಸಿನ ಯೋಚನೆಯಂತೆಯೇ ಕೆಲಸ ಮಾಡುತ್ತಿರುವ ನಮ್ಮ ಪಕ್ಷವನ್ನು ಜನತೆ ಬೆಂಬಲಿಸಲಿದೆ. ಬಿಜೆಪಿಯ ದುರಾಡಳಿತದಿಂದ ಜನ ಬೇಸತ್ತಿದ್ದಾರೆ. ಬೆಲೆ ಏರಿಕೆ, ಆರ್ಥಿಕ ಹಣದುಬ್ಬರದ ಕಾರಣದಿಂದ ರೋಸಿ ಹೋಗಿದ್ದಾರೆ” ಎಂದರು.

ತಮ್ಮದೇ ಜನಾದೇಶ ಧಿಕ್ಕರಿಸಿ ಆಡಳಿತ ಚುಕ್ಕಾಣಿ ಹಿಡಿದ ಕೇಸರಿ ಪಕ್ಷದ ತಿರುಗಿ ಬೀಳಲಿದ್ದಾರೆ. ಜೊತೆಗೆ ಅವರೇ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವದಿಸಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಬಿಜೆಪಿ ಗೆಲುವಿಗೆ 13 ರಾಜ್ಯಗಳ ಸವಾಲು! ಆಕ್ಸಿಸ್ ಎಂಡಿ ಗುಪ್ತಾ ಹೇಳುವುದೇನು? 

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂಬ...

ಲೋಕಸಭಾ ಚುನಾವಣೆ | ಬೆಂಗಳೂರಲ್ಲಿ ಏ.24 ರಿಂದ 26 ರವರೆಗೆ ಸೆಕ್ಷನ್ 144 ಜಾರಿ

ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 24ರ ಸಂಜೆ 6ರಿಂದ ಏಪ್ರಿಲ್ 26ರವರ...

ರಾಹುಲ್ V/s ಪಿಣರಾಯಿ; ಕೇರಳದಲ್ಲಿ ಲೋಕಸಭಾ ಚುನಾವಣಾ ಅಬ್ಬರ

ಕೇರಳದಲ್ಲಿ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಮತದಾನಕ್ಕೆ ಒಂದು ವಾರವಷ್ಟೇ ಬಾಕಿ...

ಕಲಬುರಗಿಯಲ್ಲಿ ಬಿಜೆಪಿಗೆ ಹಿನ್ನಡೆ; ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್‌ ಸೇರ್ಪಡೆ

ಲೋಕಸಭೆ ಚುನಾವಣೆಯ ವೇಳೆ ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾಗಿದೆ. ಮಾಜಿ...