ಮುಂದಿನ ವಾರದೊಳಗೆ ಬರ ಪರಿಹಾರ ವಿತರಣೆಗೆ ಕ್ರಮಕೈಗೊಳ್ಳಲು ಸಿದ್ದರಾಮಯ್ಯ ಸೂಚನೆ

Date:

Advertisements
  • ಅಧಿವೇಶನ ನಡೆಯುವ ಸಂದರ್ಭದಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಹಾಜರ್‌ ಇರಬೇಕು
  • ನ್ಯಾಯಾಲಯ ಉಲ್ಲಂಘನೆಯ ಪ್ರಕರಣಗಳ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲು ಸೂಚನೆ

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಕಾರಣಕ್ಕೆ ಬೆಳೆ ನಾಶದಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರಿಗೆ ಈಗಾಗಲೇ ಸರ್ಕಾರ ಘೋಷಿಸಿರುವ ಎರಡು ಸಾವಿರ ರೂ. ವರೆಗಿನ ಮೊದಲ ಹಂತದ ಪರಿಹಾರವನ್ನು ಮುಂದಿನ ವಾರದೊಳಗೆ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಅವರು ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆ ನಡೆಸಿ ಎಲ್ಲರ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡಿ ಅಗತ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.

“ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಅಧಿಕಾರಿಗಳು ಮತ್ತಷ್ಟು ಯುದ್ಧೋಪಾದಿಯಲ್ಲಿ ಕೆಲಸ ಮುಂದುವರೆಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲೆಗಳಿಗೆ ಭೇಟಿ ನೀಡಿರುವ, ಪರಿಶೀಲನೆ ನಡೆಸಿರುವ ಕುರಿತಾದ ಸಮಗ್ರ ಮಾಹಿತಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ಅಂಕಿ-ಅಂಶಗಳ ಸಹಿತ ಒದಗಿಸಬೇಕು” ಎಂದು ಸೂಚನೆ ನೀಡಿದರು.

Advertisements

“ರೈತರಿಗೆ ಮೊದಲ ಹಂತದಲ್ಲಿ 2,000 ರೂ. ವರೆಗೆ ಪರಿಹಾರ ಘೋಷಿಸಲಾಗಿದ್ದು, ಈ ಪರಿಹಾರವನ್ನು ತ್ವರಿತವಾಗಿ ವಿತರಿಸಲು ಮಾರ್ಗಸೂಚಿಗಳನ್ನು ರೂಪಿಸಿ, ಡಿ.ಬಿ.ಟಿ. ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದರು.

“ಆಯವ್ಯಯ ಭಾಷಣದಲ್ಲಿ 143 ಘೋಷಣೆಗಳನ್ನು ಮಾಡಲಾಗಿದ್ದು, ಇದರಲ್ಲಿ ಈಗಾಗಲೇ 83 ಘೋಷಣೆಗಳಿಗೆ ಸರ್ಕಾರಿ ಆದೇಶ ಹೊರಡಿಸಿ, ಕಾರ್ಯಗತಗೊಳಿಸಲಾಗಿದೆ. ಉಳಿದ ಘೋಷಣೆಗಳನ್ನೂ ಶೀಘ್ರವೇ ಅನುಷ್ಠಾನಕ್ಕೆ ತರಲು ಕ್ರಮ ಕೈಗೊಳ್ಳುವಂತೆ” ಸೂಚಿಸಿದರು.

“ಗ್ಯಾರಂಟಿ ಯೋಜನೆಗಳಲ್ಲಿ ನೋಂದಾಯಿಸಿಕೊಂಡು ಇನ್ನೂ ಸೌಲಭ್ಯ ದೊರಕದ ಅರ್ಹ ಕೆಲವು ಫಲಾನುಭವಿಗಳಿಗೆ ಸೌಲಭ್ಯ ದೊರಕಲು ಇರುವ ತಾಂತ್ರಿಕ ಅಡಚಣೆಗಳನ್ನು ಶೀರ್ಘವೇ ನಿವಾರಿಸಬೇಕು” ಎಂದು ತಿಳಿಸಿದರು.

“ಇಲಾಖೆಗಳಲ್ಲಿ ಕಡತಗಳ ವಿಲೇವಾರಿ ಸಮರ್ಪಕವಾಗಿ ನಡೆಯಬೇಕು. ಸಚಿವ ಸಂಪುಟ ಸಭೆಯಲ್ಲಿಯೂ ಬಾಕಿ ಕಡತಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಲಾಗುವುದು. ವಿವಿಧ ಇಲಾಖೆಗಳಲ್ಲಿ ನ್ಯಾಯಾಲಯ ಉಲ್ಲಂಘನೆಯ ಪ್ರಕರಣಗಳನ್ನು ಅಡ್ವೊಕೇಟ್‌ ಜನರಲ್‌ ಜೊತೆ ಚರ್ಚಿಸಿ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಬೇಕು” ಎಂದರು.

“ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲಾಧಿಕಾರಿಗಳು ಜನ ಸಂಪರ್ಕ ಸಭೆ ನಡೆಸುತ್ತಿದ್ದಾರೆಯೇ ಎಂಬುದನ್ನು ಪರಿಶೀಲಿಸಬೇಕು. ನಿಮ್ಮ ಕಾರ್ಯವೈಖರಿಗೆ ಅನುಗುಣವಾಗಿ ಸರ್ಕಾರಕ್ಕೆ ಹೆಸರು ಬರುತ್ತದೆ. ಅನಿವಾರ್ಯ ಸಂದರ್ಭಗಳನ್ನು ಹೊರತು ಪಡಿಸಿ, ಕಡತಗಳಲ್ಲಿ ಕನ್ನಡದಲ್ಲಿಯೇ ಟಿಪ್ಪಣಿ ಬರೆಯಬೇಕು. ಕನ್ನಡ ನಮ್ಮ ರಾಜ್ಯ ಭಾಷೆ, ಸಾರ್ವಭೌಮ ಭಾಷೆ” ಎಂದು ತಿಳಿಸಿದರು.

“ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕುವ ಕುರಿತು ಆದ್ಯತೆ ನೀಡಲು ಸಲಹೆ ನೀಡಿದ ಮುಖ್ಯಮಂತ್ರಿಗಳು ಟೆಂಡರ್‌ ಅಂದಾಜು ಸಿದ್ಧಪಡಿಸುವಾಗಲೇ ಎಲ್ಲ ಅಂಶಗಳನ್ನೂ ಒಳಗೊಂಡಂತೆ ಸಮಗ್ರವಾಗಿ ಅಂದಾಜನ್ನು ಸಿದ್ಧಪಡಿಸಬೇಕು. ಪರಿಷ್ಕೃತ ಅಂದಾಜುಗಳನ್ನು ಸಲ್ಲಿಸುವುದರಿಂದ ಯೋಜನೆಯ ವೆಚ್ಚ ಗಣನೀಯವಾಗಿ ಹೆಚ್ಚುತ್ತಿರುವುದಲ್ಲದೆ ಅನುಷ್ಠಾನವೂ ವಿಳಂಬವಾಗುತ್ತದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದಕ್ಕೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯು ಹಿರಿಯ ಅಧಿಕಾರಿಗಳ ಸಮಿತಿ ರಚಿಸಿದ್ದು, ಈ ಸಮಿತಿಯು ಮಾರ್ಗಸೂಚಿಗಳನ್ನು ರೂಪಿಸುತ್ತಿದೆ. ಇದು ಅಂತಿಮ ಹಂತದಲ್ಲಿದ್ದು, ಶೀಘ್ರವೇ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು ಎಂದು ಆರ್ಥಿಕ ಇಲಾಖೆ ಹಾಗೂ ಮುಖ್ಯಮಂತ್ರಿಯವರ ಅಪರ ಕಾರ್ಯದರ್ಶಿ ಎಲ್.ಕೆ. ಅತೀಕ್‌ ತಿಳಿಸಿದರು.

ತೆರಿಗೆ ಸಂಗ್ರಹ ಇಲಾಖೆಗಳು ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಬೇಕು. ಜೊತೆಗೆ ತೆರಿಗೆಯೇತರ ರಾಜಸ್ವ ಸಂಗ್ರಹ ಹೆಚ್ಚಳ ಮಾಡುವ ಬಗ್ಗೆ ಆಡಳಿತ ಸುಧಾರಣಾ ಆಯೋಗ-2 ಮಾಡಿರುವ ಶಿಫಾರಸುಗಳನ್ನು ಎಲ್ಲ ಕಾರ್ಯದರ್ಶಿಗಳು ಅಧ್ಯಯನ ಮಾಡುವಂತೆ ಸೂಚಿಸಿದರು.

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜು ಹಾಗೂ ನಸೀರ್‌ ಅಹ್ಮದ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X