ಸಿದ್ದರಾಮಯ್ಯ ಒಬ್ಬ ಜನನಾಯಕ, ಅವರನ್ನು ಸಿಎಂ ಮಾಡುವ ಶಕ್ತಿ ನನಗಿಲ್ಲ: ಬಿ ಆರ್‌ ಪಾಟೀಲ್‌ ಸ್ಪಷ್ಟನೆ

Date:

‘ಸಿದ್ದರಾಮಯ್ಯ ಲಕ್ಕಿ, ಸಿಎಂ ಲಾಟರಿ ಹೊಡೆದುಬಿಟ್ಟರು’ ಎಂಬ ಹೇಳಿಕೆಗೆ ಆಳಂದ ಶಾಸಕ ಬಿ ಆರ್ ಪಾಟೀಲ್ ಸ್ಪಷ್ಟನೆ ನೀಡಿದ್ದು, “ನನ್ನ ಮಾತನ್ನು ತಪ್ಪಾಗಿ ಬಿಂಬಿಸಲಾಗಿದೆ. ಇದು ನನ್ನ ಹಾಗೂ ಸಿದ್ದರಾಮಯ್ಯರ ನಡುವಿನ ಸಂಬಂಧ ಹಾಳು ಮಾಡಲು ಮಾಡಿರುವ ಕೆಲಸ” ಎಂದು ಆರೋಪಿಸಿದ್ದಾರೆ.

- Advertisement -

“ನಾನು ಕೆಆರ್ ಪೇಟೆಯಲ್ಲಿ ಆತ್ಮೀಯರ ಜೊತೆ ಮಾತನಾಡುವಾಗ ಸಿದ್ದರಾಮಯ್ಯ ಅವರ ವಿಷಯ ಪ್ರಸ್ತಾಪ ಆಯ್ತು. ಆ ವೇಳೆ ಕೆಲವು ವಿಷಯ ಬಗ್ಗೆ ಮಾತನಾಡುತ್ತ, ಸಿದ್ದರಾಮಯ್ಯ ಅವರಿಗೆ ಲಕ್ಕಿ ಲಾಟರಿ ಇತ್ತು ಸಿಎಂ ಆದರು ಎಂದಿದ್ದೆ. ಆದರೆ, ನಾನು ಸೋನಿಯಾ ಗಾಂಧಿಯನ್ನು ಭೇಟಿ ಮಾಡಿಸಿದ್ದೇನೆ ಎಂಬುದು ಸಂಪೂರ್ಣ ಸುಳ್ಳು” ಎಂದು ಸ್ಪಷ್ಟನೆ ನೀಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಸೋನಿಯಾ ಗಾಂಧಿಯನ್ನು ಭೇಟಿ ಮಾಡುವಾಗ ನಾನು ಸಿದ್ದರಾಮಯ್ಯ ಅವರ ಜೊತೆಗಿದ್ದೆ. ಈ ಸರಿ ಭೇಟಿ ಬೇಡ ಅಂತ ಸಿದ್ದರಾಮಯ್ಯ ಅವರು ಹೇಳಿದಾಗ ನಾನೇ ಒತ್ತಾಯ ಮಾಡಿ, ಸ‌ರ್‌ ಭೇಟಿ ಮಾಡಿ ಎಂದು ಹೇಳಿದ್ದೆ. ಆಗ ಅವರು ಹೋಗಿ ಭೇಟಿ ಮಾಡಿದರು” ಎಂದು ತಿಳಿಸಿದ್ದಾರೆ.

“ಸಿದ್ದರಾಮಯ್ಯ ಒಬ್ಬ ಜನನಾಯಕ. ಅವರನ್ನು ಮುಖ್ಯಮಂತ್ರಿ ಮಾಡುವ ಶಕ್ತಿ ನನಗಿಲ್ಲ. ಅವರು ಮತ್ತು ನನ್ನ ನಡುವಿನ ಆತ್ಮೀಯ ಸಂಬಂಧ ಹಾಳು ಮಾಡುವುದಕ್ಕೆ ಕೆಲವರು ಉದ್ದೇಶ ಪೂರ್ವಕ ಪ್ರಯತ್ನ ಮಾಡುತ್ತಿದ್ದಾರೆ. ನಾವು 9 ಜನ ಶಾಸಕರು ಜೆಡಿಎಸ್‌ ಬಿಟ್ಟು ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಸೇರಿದ್ದೆವು. ಕಾಂಗ್ರೆಸ್ ಕೂಡಾ ಅವರ ಜನಬೆಂಬಲ ನೋಡಿ ಅವರನ್ನು ಮುಖ್ಯಮಂತ್ರಿ ಮಾಡಿದ್ದು” ಎಂದು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...