ಲೀಡ್ ಕೊಟ್ಟು ಕುರ್ಚಿ ಉಳಿಸುವಂತೆ ಜನರ ಬಳಿ ಅಂಗಲಾಚುತ್ತಿರುವ ಸಿದ್ದರಾಮಯ್ಯ: ಆರ್‌ ಅಶೋಕ್‌ ಟೀಕೆ

Date:

ಸಿಎಂ ಸಿದ್ದರಾಮಯ್ಯನವರಿಗೆ ಮತ್ತೊಮ್ಮೆ ಸ್ವಕ್ಷೇತ್ರದ ಜನರಿಂದ ತಿರಸ್ಕಾರದ ಭಯ ಕಾಡುತ್ತಿದೆ. ಹೀಗಾಗಿ ವರುಣಾದಲ್ಲಿ ಹೆಚ್ಚಿನ ಲೀಡ್ ಕೊಟ್ಟು ಕುರ್ಚಿ ಉಳಿಸುವಂತೆ ಜನರ ಬಳಿ ಅಂಗಲಾಚುತ್ತಿದ್ದಾರೆ ಎಂದು ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಟೀಕಿಸಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಕುರಿತು ಪೋಸ್ಟ್‌ ಮಾಡಿರುವ ಅವರು, “2018ರಲ್ಲಿ ಸೋಲಿನ ಭಯದಿಂದ ತಮ್ಮ ಸ್ವಕ್ಷೇತ್ರ ವರುಣಾದಿಂದ ಬಾದಾಮಿಗೆ ಪಲಾಯನ ಮಾಡಿದ್ದ ಸಿಎಂ ಸಿದ್ದರಾಮಯ್ಯನವರಿಗೆ ಈಗ ಮತ್ತೊಮ್ಮೆ ಸ್ವಕ್ಷೇತ್ರದ ಜನರಿಂದ ತಿರಸ್ಕಾರದ ಭಯ ಕಾಡುತ್ತಿದೆ” ಎಂದಿದ್ದಾರೆ.

“ಗ್ಯಾರಂಟಿಗಳು ಜನರಿಗೆ ತೃಪ್ತಿ ತಂದಿಲ್ಲ, ಬಿಟ್ಟಿ ಭಾಗ್ಯಗಳು ತಮ್ಮ ಕೈ ಹಿಡಿಯುವುದಿಲ್ಲ ಎಂದು ಗ್ಯಾರಂಟಿ ಆಗುತ್ತಿದ್ದಂತೆ ಸಿದ್ದರಾಮಯ್ಯನವರು ವರುಣಾದಲ್ಲಿ ಹೆಚ್ಚಿನ ಲೀಡ್ ಕೊಟ್ಟು ಕುರ್ಚಿ ಉಳಿಸುವಂತೆ ಜನರ ಬಳಿ ಅಂಗಲಾಚುತ್ತಿದ್ದಾರೆ. ತವರು ಕ್ಷೇತ್ರ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಹೀನಾಯ ಸೋಲಾದರೆ ಕುರ್ಚಿ ಬಿಟ್ಟು ಇಳಿಯಬೇಕಾತ್ತದೆ ಎಂದು ಸಿಕ್ಕಸಿಕ್ಕ ಸಣ್ಣ ಪುಟ್ಟ ವಿಪಕ್ಷಗಳ ಮುಖಂಡರನ್ನೆಲ್ಲ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡು ಕನಿಷ್ಠ ಪಕ್ಷ ಠೇವಣಿ ಉಳಿಸಿಕೊಳ್ಳಬೇಕು, ಸೋಲಿನ ಅಂತರವಾದರೂ ಕಡಿಮೆ ಮಾಡಿಕೊಳ್ಳಬೇಕು ಅಂತ ಸಿದ್ದರಾಮಯ್ಯನವರು ಮೂರು ದಿನ ಮೈಸೂರಿನಲ್ಲೇ ಠಿಕಾಣಿ ಹೂಡಿದ್ದಾರೆ” ಎಂದು ಕುಟುಕಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೈತ್ರಿ ಕಷ್ಟ; ಅದೇ ಇಷ್ಟ ಎಂದದ್ದೇಕೆ ಕುಮಾರಸ್ವಾಮಿ?

ಸಿಎಂ ಸಿದ್ದರಾಮಯ್ಯನವರೇ, ನಿನ್ನೆ ವರುಣಾದಲ್ಲಿ ತಮ್ಮ ಬುರುಡೆ ಭಾಷಣ ಕೇಳಲು ಆಸಕ್ತಿ ಇಲ್ಲದೆ ಜಾಗ ಖಾಲಿ ಮಾಡಿದ ಜನರ ನಡೆ ನೋಡಿದ ಮೇಲೆ ಜನರ ಮನಸ್ಸಿನಲ್ಲಿ ಕೆಲವು ಪ್ರಶ್ನೆಗಳು ಮೂಡುತ್ತಿವೆ. ನಿಮ್ಮ ಗ್ಯಾರಂಟಿಗಳು ಜನರನ್ನು ತಲುಪಿದೆ ಎನ್ನುವ ವಿಶ್ವಾಸವಿಲ್ಲವೇ” ಎಂದು ಪ್ರಶ್ನಿಸಿದ್ದಾರೆ.

“ಮೈಸೂರಿನಲ್ಲಿ ಹೀನಾಯವಾಗಿ ಸೋಲಿಸಿ ನಿಮ್ಮನ್ನ ಕುರ್ಚಿಯಿಂದ ಇಳಿಸಬೇಕು ಎನ್ನುವ ಹುನ್ನಾರದಿಂದ ಸ್ವಪಕ್ಷದವರೇ ಒಳೇಟು ನೀಡುವ ಭಯ ಕಾಡುತ್ತಿದೆಯೇ? ವರುಣಾದಲ್ಲಿ 60,000 ಲೀಡ್ ಬರದಿದ್ದರೆ ಕುರ್ಚಿಯಿಂದ ಇಳಿಯಬೇಕು ಎಂದು ಹೈಕಮಾಂಡ್ ಈಗಾಗಲೇ ಫರ್ಮಾನು ಹೊರಡಿಸಿದೆಯೇ?” ಎಂದು ಲೇವಡಿ ಮಾಡಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಪ್ರಕಾಶ್ ಅಂಬೇಡ್ಕರ್‌ಗೆ ಎಐಎಂಐಎಂ ಬೆಂಬಲ: ಓವೈಸಿ

ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರದ ಅಕೋಲಾ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ವಂಚಿತ್ ಬಹುಜನ ಅಘಾಡಿ...

ಕೇಂದ್ರ ಸರ್ಕಾರ ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ: ರಾಹುಲ್‌ ಗಾಂಧಿ ವಾಗ್ದಾಳಿ

"ಕೇಂದ್ರ ಸರ್ಕಾರ 20-25 ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ. ಉದ್ಯಮಿಗಳ...

ನರೇಂದ್ರ ಮೋದಿಯೇ ಭಾರತದ ದೊಡ್ಡ ಸಮಸ್ಯೆ: ಎಂ ಕೆ ಸ್ಟಾಲಿನ್

ಪ್ರಸ್ತುತ ಭಾರತದ ದೊಡ್ಡ ಸಮಸ್ಯೆ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಿದ್ದಾರೆ...

ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್‌.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ

ಪೊಲೀಸ್‌ ಅಧಿಕಾರಿ ಆಗಬೇಕೆಂಬ ರಾಜ್ಯದ ಯುವಜನರ ಭವಿಷ್ಯವನ್ನೇ ಹಾಳು ಮಾಡಿದ್ದ ಪಿಎಸ್‌ಐ...