ಅಧಿಕಾರದ ದರ್ಪದಿಂದ ಸಿದ್ದರಾಮಯ್ಯ ಮೆರೆಯುತ್ತಿದ್ದಾರೆ: ಬಿ ವೈ ವಿಜಯೇಂದ್ರ ಟೀಕೆ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡವಳಿಕೆ, ಅಧಿಕಾರದ ದರ್ಪದಿಂದ ಮೆರೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಟೀಕಿಸಿದರು.

- Advertisement -

ಪಂಚಮಸಾಲಿ ಲಿಂಗಾಯತ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ನಡೆಸಿದ್ದನ್ನು ಖಂಡಿಸಿ ರಾಜ್ಯ ಬಿಜೆಪಿಯಿಂದ ಬೆಳಗಾವಿ ಸುವರ್ಣಸೌಧದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಗುರುವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

“ಮುಖ್ಯಮಂತ್ರಿಗಳು ಸ್ವಾಮೀಜಿ, ರೈತಾಪಿ ವರ್ಗದ ಧರಣಿ- ಹೋರಾಟದ ಸ್ಥಳಕ್ಕೆ ತೆರಳಿ ಮನವಿ ಸ್ವೀಕರಿಸಬೇಕಿತ್ತು. ಆದರೆ ಅವರು ಮಾಡಿದ್ದೇನು? ಸುವರ್ಣಸೌಧದಲ್ಲಿ ಇದ್ದರೂ ಸಹ ಮುಖ್ಯಮಂತ್ರಿಗಳು ಮನಸ್ಸು ಮಾಡಲಿಲ್ಲ. ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿ ಮಾಡುವ ಸೌಜನ್ಯವನ್ನು ತೋರಲಿ. ಬದಲಾಗಿ ಅಮಾಯಕರ ಮೇಲೆ ಲಾಠಿ ಚಾರ್ಜ್ ಮಾಡಿಸಿದ್ದು, ಚನ್ನಮ್ಮನ ನಾಡಿನಲ್ಲಿ ಲಾಠಿಚಾರ್ಜ್ ಆಗಿರುವುದು ಅಕ್ಷಮ್ಯ ಅಪರಾಧ” ಎಂದರು.

“ಮುಖ್ಯಮಂತ್ರಿಗಳು ಯಾವ ಕಾರಣಕ್ಕೆ ಲಾಠಿ ಚಾರ್ಜ್ ಮಾಡಿಸಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಪಡೆಯುತ್ತೇವೆ. ದರ್ಪದಿಂದ ಮೆರೆದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ನಾವು ಮತ್ತು ಜಡಿಎಸ್‌ ಪಕ್ಷದವರು ಸದನದಲ್ಲಿ ಧ್ವನಿ ಎತ್ತುತ್ತೇವೆ” ಎಂದು ತಿಳಿಸಿದರು.

“ಕಾಂಗ್ರೆಸ್ ಸರಕಾರದವರು ಮೂರೂ ಬಿಟ್ಟಿದ್ದಾರೆ. 136 ಶಾಸಕರಿದ್ದೇವೆ; ಅಧಿಕಾರ ಶಾಶ್ವತ ಎಂಬ ಭ್ರಮೆಯಲ್ಲಿ ಸಿದ್ದರಾಮಯ್ಯನವರು ಇದ್ದಾರೆ. ಹಿಂದಿನ ಅವಧಿಯಲ್ಲೂ ಇದೇ ರೀತಿ ನಡೆದುಕೊಂಡಿದ್ದು, ಸಿಎಂ ಅವರನ್ನು ಸದನದಲ್ಲಿ ಪ್ರಶ್ನಿಸುತ್ತೇವೆ” ಎಂದರು.

ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಆರಂಭವಾದ ಪ್ರತಿಭಟನೆ ಸಂದರ್ಭದಲ್ಲಿ ರಾಜ್ಯದ ಮಾಜಿ ಸಚಿವರು, ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಈಗ ‘ಡಿಟೆನ್ಷನ್ ಸ್ಟೇಟ್’ – ಪ್ರತಿಭಟನಾಕಾರರ ಬಂಧನಕ್ಕೆ ಸಂಸದ ಸಂಜಯ್ ರಾವತ್ ಆಕ್ರೋಶ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳು, ಮಹಿಳೆಯರ ಮೇಲೆ ಹಲ್ಲೆ ಮಾಡಿದ ಹಿಂದೂ ರಕ್ಷಾ ದಳದ ನಾಲ್ವರ ಬಂಧನ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಗುರುದ್ವಾರ ಆವರಣದಲ್ಲಿ ದೆಹಲಿ ಪೊಲೀಸರು ಶೂ ಧರಿಸಿದ ಆರೋಪ: ‘ತಾಲಿಬಾನ್ ಮಾದರಿಯ ವರ್ತನೆ’ ಎಂದ ಪಂಜಾಬ್ ಸಿಎಂ

ದೆಹಲಿಯ ಐತಿಹಾಸಿಕ ಗುರುದ್ವಾರ ಶ್ರೀ ಬಾಂಗ್ಲಾ ಸಾಹಿಬ್‌ಗೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ...