ಮುಂದಿನ ಅವಧಿಗೂ ಸಿದ್ದರಾಮಯ್ಯ ಅವರೇ ಸಿಎಂ: ಸಚಿವ ಶಿವಾನಂದ ಪಾಟೀಲ

Date:

ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ಬಗ್ಗೆ ಕಾಂಗ್ರೆಸ್‌ ನಾಯಕರ ಹೇಳಿಕೆಗಳಿಗೆ ಕೆರಳಿರುವ ಎಐಸಿಸಿ ವರಿಷ್ಠರು ರಾಜ್ಯದ ನಾಯಕರಿಗೆ ಖಡಕ್‌ ಸೂಚನೆ ನೀಡಿದ್ದರೂ ಸಚಿವರು ಪದೇಪದೆ ಉಲ್ಲಂಘಿಸಿ ಈ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ.

- Advertisement -

ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರು ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ ಕಡೆಗಣಿಸಿ ಬೆಳಗಾವಿಯಲ್ಲಿ ಸೋಮವಾರ ಮಾತನಾಡಿ, “ಈಗಷ್ಟೇ ಅಲ್ಲ; ಮುಂದಿನ ಅವಧಿಯಲ್ಲೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಇರಬಹುದು. ಇದರಲ್ಲಿ ತಪ್ಪೇನಿದೆ” ಎಂದು ಕೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಸಿ.ಎಂ ವಿಚಾರ ನಾನು ಭವಿಷ್ಯ ನುಡಿಯುವಂಥದ್ದಲ್ಲ. ಸಿ.ಎಂ ಸ್ಥಾನದಲ್ಲಿ ಯಾರನ್ನು ಮುಂದುವರಿಸಬೇಕು ಮತ್ತು ಬದಲಿಸಬೇಕು ಎಂಬುದನ್ನು ಸಿಎಲ್‌ಪಿ ಹಾಗೂ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ಮುಖ್ಯಮಂತ್ರಿ ಬದಲಾವಣೆ ವಿಚಾರ ಪದೇಪದೆ ಚರ್ಚೆಯಾಗುತ್ತಿರುವ ಬಗ್ಗೆ ನನಗೆ ಗೊತ್ತಿಲ್ಲ. ಮಾಧ್ಯಮದವರೇ ಪದೇಪದೆ ಪ್ರಶ್ನೆ ಕೇಳಿ ಚರ್ಚೆಯಾಗುತ್ತಿದೆ ಎನ್ನುತ್ತಿದ್ದೀರಿ” ಎಂದರು.

ಡಿಜಿಟಲ್ ತೂಕದ ಯಂತ್ರ

“ರಾಜ್ಯದಾದ್ಯಂತ ಒಟ್ಟು 72 ಸಕ್ಕರೆ ಕಾರ್ಖಾನೆಗಳಿವೆ. ಕಬ್ಬಿನ ತೂಕ ಮಾಡಲು ಅನಲಾಗ್ ತೂಕದ ಯಂತ್ರಗಳನ್ನು ಬಳಸಲಾಗುತ್ತಿತ್ತು. ಈಗ ಡಿಜಿಟಲ್ ತೂಕದ ಯಂತ್ರ ಬಳಸುತ್ತಿದ್ದಾರೆ. ಸಕ್ಕರೆ ಕಾರ್ಖಾನೆಗಳಲ್ಲಿ ಸರ್ಕಾರದಿಂದಲೇ ತೂಕದ ಯಂತ್ರಗಳನ್ನು ಅಳವಡಿಸಲು ನಿರ್ಧರಿಸಿದ್ದೇವೆ. ಮೊದಲ ಹಂತದಲ್ಲಿ ಎರಡು ಮೊಬೈಲ್‌ ತೂಕದ ಯಂತ್ರಗಳನ್ನು ಅಳವಡಿಸುತ್ತೇವೆ. ಸ್ಥಳಾವಕಾಶದ ಲಭ್ಯತೆ ಆಧರಿಸಿ ನಂತರದ ದಿನಗಳಲ್ಲಿ ಕಾರ್ಖಾನೆಗಳಲ್ಲಿ ಐದರಿಂದ ಆರು ಅಳವಡಿಸುತ್ತೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ?  ದಿನ ಸಂಪಾದಕೀಯ | ಅಮೆರಿಕ ನೆಲದಲ್ಲಿ ಮೋದಿ ಸಾಧಿಸಿದ್ದಕ್ಕಿಂತ ತಲೆ ಬಾಗಿದ್ದೇ ಹೆಚ್ಚು

“ಈ ವರ್ಷ ರಾಜ್ಯದಾದ್ಯಂತ ಕಬ್ಬು ನುರಿಸುವಿಕೆ ಪ್ರಮಾಣ, ಕಳೆದ ವರ್ಷಕ್ಕಿಂತ ಕಡಿಮೆ ಇರಲಿದೆ. ಈ ವರ್ಷ 5 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ನಿರೀಕ್ಷೆಯಿದೆ. ಹಿಂದಿನ ವರ್ಷ ಬರಗಾಲವಿದ್ದ ಕಾರಣ, ಇಳುವರಿ ಮತ್ತು ಕಬ್ಬು ನುರಿಸುವಿಕೆ ಮೇಲೆ ಪರಿಣಾಮ ಬೀರಿದೆ. ಮುಂದಿನ ವರ್ಷ ನಾವು ಕಬ್ಬು ನುರಿಸುವ ಪ್ರಮಾಣದಲ್ಲಿ ಗುರಿ ಮೀರುವ ನಿರೀಕ್ಷೆಯಿದೆ” ಎಂದು ಹೇಳಿದರು.

“ಕೆಲವು ಸಕ್ಕರೆ ಕಾರ್ಖಾನೆಗಳು ಶೇ 80ರಷ್ಟು ಕಬ್ಬಿನ್ ಬಿಲ್ ಪಾವತಿಸಿದ್ದರೆ, ಇನ್ನು ಕೆಲವು ಕಾರ್ಖಾನೆಗಳು ಶೇ 75ರವರೆಗೆ ಪಾವತಿಸಿವೆ. ಒಂದು ಭಾಗ ಮಾತ್ರ ಶೇ 55ರಿಂದ 60ರಷ್ಟು ಪಾವತಿಸಿದೆ. ರೈತರ ಎಲ್ಲ ಬಾಕಿ ಬಿಲ್‌ಗಳ ಶೀಘ್ರವೇ ಪಾವತಿಯಾಗಲಿವೆ ಎಂದು ಭಾವಿಸುತ್ತೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...