ಅಮಿತ್‌ ಷಾ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ: ರಾಜ್ಯದ 5 ನಗರಗಳಲ್ಲಿ ‘ಸೇಫ್‌ ಸಿಟಿ’ ಯೋಜನೆ ಜಾರಿಗೆ ಒತ್ತಾಯ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಜೂನ್ 28) ಕೇಂದ್ರ ಗೃಹ ಸಚಿವ ಅಮಿತ್‌ ಷಾ ಅವರನ್ನು ಭೇಟಿಯಾಗಿ ರಾಜ್ಯದ ಪೊಲೀಸ್‌ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿ ಕುರಿತಂತೆ ಗಮನ ಸೆಳೆದರು.

ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ಅಗತ್ಯವಿರುವ ನೆರವಿನ ಕುರಿತ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು.

ಭಾರತ ಸರ್ಕಾರವು 80 ಕೋಟಿ ರೂ. ವೆಚ್ಚದಲ್ಲಿ India Reserve Battalion ಸ್ಥಾಪನೆಗೆ ಅನುಮೋದನೆ ನೀಡಿದ್ದು, ಹೆಚ್ಚುವರಿಯಾಗಿ ಬಳ್ಳಾರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಎರಡು ಬೆಟಾಲಿಯನ್‌ ಸ್ಥಾಪನೆಗೆ ಅನುಮೋದನೆ ನೀಡುವಂತೆ ಕೋರಿದರು.

Advertisements

ನಿರ್ಭಯಾ ನಿಧಿಯ ಅಡಿಯಲ್ಲಿ ಬೆಂಗಳೂರು ನಗರದಂತೆಯೇ ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ ‘ಸೇಫ್‌ ಸಿಟಿ’ ಯೋಜನೆಯನ್ನು ತಲಾ 200 ಕೋಟಿ ರೂ. ಗಳಂತೆ ಒಟ್ಟು 1000 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಕ್ಕೆ ಅನುಮೋದನೆ ನೀಡುವುದು. ಹೈಕೋರ್ಟಿನ ಆದೇಶದಂತೆ ಬಂಧಿಸುವ ಅಧಿಕಾರ ಹೊಂದಿರುವ ಸಿಬ್ಬಂದಿಗೆ Body worn camera ಕಡ್ಡಾಯವಾಗಿರುವುದರಿಂದ ರಾಜ್ಯದಲ್ಲಿ ಇನ್ನೂ 175 ಕೋಟಿ ರೂ. ವೆಚ್ಚದಲ್ಲಿ 58,546 Body worn camera ಖರೀದಿಸುವ ಅಗತ್ಯವಿದ್ದು, 100 ಕೋಟಿ ರೂ. ನೆರವು ನೀಡುವಂತೆ ಮನವಿ ಸಲ್ಲಿಸಲಾಯಿತು.

ಪ್ರಸಕ್ತ ಸಾಲಿನಲ್ಲಿ ಬಾಡಿಗೆ ಕಟ್ಟದಲ್ಲಿರುವ/ಶಿಥಿಲಾವಸ್ಥೆಯಲ್ಲಿರುವ 100 ಪೊಲೀಸ್‌ ಠಾಣೆಗಳಿಗೆ ಹೊಸ ಕಟ್ಟಡವನ್ನು ತಲಾ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ 300 ಕೋಟಿ ರೂ. ಅಗತ್ಯವಿದೆ. ಇದಕ್ಕೆ ನೆರವು ಒದಗಿಸುವಂತೆಯೂ ಗೃಹ ಸಚಿವ ಅಮಿತ್‌ ಷಾ ಅವರನ್ನು ಕೋರಲಾಯಿತು.

ಪೊಲೀಸ್‌ ಕ್ಯಾಂಟೀನ್‌ ಸೌಲಭ್ಯ ಮಾದರಿಯಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿಗೂ ಕ್ಯಾಂಟೀನ್‌ ಸ್ಥಾಪನೆಗೆ ಅಗತ್ಯ ಅನುಮತಿಗಳನ್ನು ಒದಗಿಸುವುದು, ಪೊಲೀಸ್‌ ವಸತಿ ಗೃಹಗಳ ನಿರ್ಮಾಣಕ್ಕೆ ನೆರವು, ವಿಧಿವಿಜ್ಞಾನ ಪ್ರಯೋಗಾಲಯಗಳ ಆಧುನೀಕರಣಕ್ಕೆ ನೆರವು ಮತ್ತಿತರ ವಿಷಯಗಳ ಕುರಿತು ಸಹ ಚರ್ಚಿಸಲಾಯಿತು.

ಇದನ್ನು ಓದಿದ್ದೀರಾ? ರಾಜ್ಯ ಹಿಂದುಳಿದ ವರ್ಗಗಳ ಆಯೋಗ: ನೂತನ ಅಧ್ಯಕ್ಷರ ನೇಮಕ ಆದೇಶ ವಾಪಸ್ ಪಡೆದ ಸರ್ಕಾರ

ಈ ಸಂದರ್ಭದಲ್ಲಿ ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮೊದಲಾದವರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X