ಮೈಸೂರು ದಸರಾದಲ್ಲಿ ಏರ್ ಶೋ ನಡೆಸಲು ರಾಜನಾಥ್‌ ಸಿಂಗ್‌ಗೆ ಸಿದ್ದರಾಮಯ್ಯ ಮನವಿ

Date:

Advertisements
  • ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಕೆ
  • ಏರ್‌ ಶೋ’ ಸಹಭಾಗಿತ್ವ ದಸರಾ ಹಬ್ಬಕ್ಕೆ ಇನ್ನಷ್ಟು ರಂಗು ತುಂಬಲಿದೆ: ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಅವರನ್ನು ಭೇಟಿ ಮಾಡಿ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ಮನವಿ ಮಾಡಿದರು.

“2017 ಮತ್ತು 2019 ರಲ್ಲಿ, ಮೈಸೂರಿನ ಟಾರ್ಚ್ ಲೈಟ್ ಪರೇಡ್ ಮೈದಾನದಲ್ಲಿ ಭಾರತೀಯ ವಾಯುಪಡೆಯು ಪ್ರದರ್ಶಿಸಿದ ವಿಶೇಷ ಏರ್ ಶೋ ಮೂಲಕ ದಸರಾ ಉತ್ಸವ ಪ್ರವಾಸಿಗರು ಮತ್ತು ಕನ್ನಡಿಗರ ಗಮನ ಸೆಳೆದಿತ್ತು. ಮೈಸೂರಿನಲ್ಲಿ ನಡೆಯುವ ನಾಡಹಬ್ಬ ದಸರಾ 2023ರ ಸಂದರ್ಭದಲ್ಲಿ ಈ ಭಾರಿಯೂ ‘ಏರ್‌ಶೋ’ ಅನ್ನು ಯೋಜಿಸಲು ಸಂಬಂಧಪಟ್ಟವರಿಗೆ ತಾವು ನಿರ್ದೇಶಿಸಬೇಕು. ‘ಏರ್‌ಶೋ’ ಸಹಭಾಗಿತ್ವ ದಸರಾ ಹಬ್ಬಕ್ಕೆ ಇನ್ನಷ್ಟು ರಂಗು ತುಂಬಲಿದೆ” ಎಂದು ಸಿದ್ದರಾಮಯ್ಯ ಕೋರಿದ್ದಾರೆ.

“ಕರ್ನಾಟಕದ ವೈಭವವನ್ನು ಪ್ರದರ್ಶಿಸುವ ಹೆಸರಾಂತ ಮೈಸೂರು ದಸರಾ ಉತ್ಸವ ರಾಜ್ಯದ ಇತಿಹಾಸ ಮತ್ತು ಸಂಪ್ರದಾಯಗಳ ಸಂಕೇತವಾಗಿದ್ದು, ಈ ವರ್ಷ ಅಕ್ಟೋಬರ್ 15 ರಿಂದ 24 ರವರೆಗೆ ದಸರಾ ಆಚರಿಸಲು ನಿರ್ಧರಿಸಲಾಗಿದೆ. ಮೈಸೂರು ದಸರಾ ಆಚರಣೆಯ ಉನ್ನತಾಧಿಕಾರ ಸಮಿತಿಯ ಸಭೆಯಲ್ಲಿ ದಸರಾ ಮಹೋತ್ಸವದ ವೇಳೆ ಏರ್ ಶೋ ನಡೆಸಬೇಕೆಂಬ ಜನರ ಬಯಕೆಯನ್ನು ಸಮಿತಿಯ ಮುಂದೆ ಇಟ್ಟು ಈ ನಿರ್ಧಾರ ಕೈಗೊಳ್ಳಲಾಗಿದೆ” ಎಂದು ಸಿದ್ದರಾಮಯ್ಯ ಮನವಿ ಪತ್ರದಲ್ಲಿ ವಿವರಿಸಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X