ಆರಗ ಜ್ಞಾನೇಂದ್ರ ಅಸಾಮರ್ಥ್ಯವೇ ಅತ್ಯಾಚಾರದಂತಹ ದೌರ್ಜನ್ಯಗಳಿಗೆ ಕಾರಣ: ಸಿದ್ದರಾಮಯ್ಯ

Date:

  • ʼರಾಜ್ಯದ ಕಾನೂನು ಸುವ್ಯವಸ್ಥೆ ಮೇಲಿನ ನಂಬಿಕೆಯನ್ನೇ ಜನ ಕಳೆದುಕೊಂಡಿದ್ದಾರೆʼ
  • ಆರಗ ಜ್ಞಾನೇಂದ್ರ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಸಿದ್ದರಾಮಯ್ಯ

ರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಸದನದಲ್ಲಿ ಪ್ರಶ್ನೆ ಮಾಡಿದಾಗ ಮೈಮೇಲೆ ಕಂಬಳಿಹುಳ ಬಿದ್ದವರಂತೆ ಕುಣಿದಾಡಿ, ಎಗರಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಅಸಾಮರ್ಥ್ಯವೇ ಅತ್ಯಾಚಾರದಂತಹ ದೌರ್ಜನ್ಯಗಳಿಗೆ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಅತ್ಯಾಚಾರ ಪ್ರಕರಣ ಹಿನ್ನೆಲೆಯಲ್ಲಿ ಶನಿವಾರ ಸರಣಿ ಟ್ವೀಟ್‌ ಮಾಡಿರುವ ಅವರು, ಬೆಂಗಳೂರಿನ ಕಗ್ಗಲೀಪುರದ ಬಾಲಕಿಯ ಅತ್ಯಾಚಾರ ಪ್ರಕರಣ ನಡೆದು ವಾರ ಕಳೆದಿಲ್ಲ. ಅಷ್ಟರಲ್ಲೇ ಕೋರಮಂಗಲದ ಯುವತಿಯನ್ನು ನಾಲ್ವರು ರಾಕ್ಷಸರು ಅತ್ಯಾಚಾರಗೈದು ಅಟ್ಟಹಾಸ ಮೆರೆದಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಜೀವಂತವಾಗಿದೆ ಎಂಬ ನಂಬಿಕೆಯನ್ನೇ ಜನ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ದುಷ್ಟರನ್ನು, ಸಮಾಜಘಾತುಕರನ್ನು ಹಿಡಿದು ಸದೆಬಡಿಯಬೇಕಿದ್ದ ಬಿಜೆಪಿ ಸರ್ಕಾರ, ಬದಲಿಗೆ ರೌಡಿ ಶೀಟರ್‌ಗಳು, ಕೊಲೆಗಡುಕರನ್ನು ರತ್ನಗಂಬಳಿ ಹಾಸಿ, ಸನ್ಮಾನಿಸಿ ಪಕ್ಷಕ್ಕೆ ಸೇರಿಸಿಕೊಂಡಿದ್ದರ ಫಲವನ್ನು ಜನಸಾಮಾನ್ಯರು ಉಣ್ಣಬೇಕಿದೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭ್ರಷ್ಟಾಚಾರದ ವಿರುದ್ಧ ಮೋದಿ ಯುದ್ಧ ಸಾರಿರುವುದು ನಿಜವೇ?!

ಗೃಹ ಸಚಿವ ರಾಜೀನಾಮೆ ನೀಡಲಿ

ಕಠಿಣ ಕ್ರಮದ ಭರವಸೆ ನೀಡುವ ಗೃಹಸಚಿವರು ಸ್ಯಾಂಟ್ರೋ ರವಿ ಹೇಳುವ ವರ್ಗಾವಣೆ ಮಾಡಿಸಲಷ್ಟೇ ಶಕ್ತರು ಎಂಬ ಜನರ ಮಾತು ನಿಜವಾಗಿದೆ. ಸಾಮರ್ಥ್ಯ, ನೈತಿಕತೆ ಈ ಯಾವುದೂ ಇಲ್ಲದೆ ಕುರ್ಚಿಗೆ ಅಂಟಿಕೊಂಡು ಕೂತಿರುವ ಆರಗ ಜ್ಞಾನೇಂದ್ರ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಗೃಹ ಸಚಿವರ ಅದಕ್ಷತೆಯಿಂದಾಗಿ ರಾಜ್ಯದ ಪೊಲೀಸ್ ಇಲಾಖೆ ಸಂಪೂರ್ಣವಾಗಿ ಹಾದಿ ತಪ್ಪಿದೆ. ಚುನಾವಣಾ ಕಾಲದಲ್ಲಿ ಈ ರೀತಿಯ ಪೊಲೀಸ್ ನಿಷ್ಕ್ರಿಯತೆ ಅಪಾಯಕಾರಿಯಾದುದು. ಆದ್ದರಿಂದ ಚುನಾವಣಾ ಆಯೋಗ ಪೊಲೀಸ್ ಇಲಾಖೆಯ‌ ಕಾರ್ಯನಿರ್ವಹಣೆಯ ಮೇಲೆ ನಿಗಾ ಇಡಬೇಕು ಎಂದು ಕೋರಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏ.20ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ

ರಾಜ್ಯದಲ್ಲಿ ವಾಡಿಕೆಯಂತೆ ಮಳೆಯಾಗದೆ. ಕರಾವಳಿ ಪ್ರದೇಶಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ,...

ಬೆಂಗಳೂರು ಗ್ರಾಮಾಂತರ | ಕಾಂಗ್ರೆಸ್‌ನ ಡಿ.ಕೆ. ಸುರೇಶ್ ಪರ ನಟ ದರ್ಶನ್ ಪ್ರಚಾರ

ಲೋಕಸಭಾ ಚುನಾವಣೆಯ ಹಿನ್ನೆಲೆ, ರಾಜ್ಯದಲ್ಲಿ ರಾಜಕೀಯ ಪಕ್ಷದ ಅಭ್ಯರ್ಥಿಗಳು ಪ್ರಚಾರ ಭರಾಟೆ...

ರಾಜ್ಯಕ್ಕೆ ಪ್ರಧಾನಿ ಮೋದಿಯ ಕೊಡುಗೆ ಏನಿದೆ?: ಗೃಹ ಸಚಿವ ಪರಮೇಶ್ವರ್‌ ಪ್ರಶ್ನೆ

ಪ್ರಧಾನಿ ಮೋದಿಯವರು ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನರಿಗೆ ನೀಡಿದ್ದ ಭರವಸೆಗಳನ್ನು...

ಮಣಿಪುರ| 47 ಮತಗಟ್ಟೆಗಳಲ್ಲಿ ಮರು ಮತದಾನ ನಡೆಸುವಂತೆ ಕಾಂಗ್ರೆಸ್ ಒತ್ತಾಯ

ಮಣಿಪುರದ 47 ಮತಗಟ್ಟೆಗಳಲ್ಲಿ ಬೂತ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಈಶಾನ್ಯ ರಾಜ್ಯದ ಎರಡು...