ವಕೀಲನಾಗಿರುವುದರಿಂದಲೇ ಕಾನೂನು ಬಾಹಿರ ತನಿಖೆಯ ಆದೇಶ ವಾಪಸ್: ಸಿದ್ದರಾಮಯ್ಯ 

Date:

Advertisements
  • ವಿರೋಧಪಕ್ಷದ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧ: ಸಿಎಂ ಸಿದ್ದರಾಮಯ್ಯ
  • ಯಡಿಯೂರಪ್ಪ ಹಾಗೂ ಕುಮಾರಸ್ವಾಮಿಗೆ ಕಾನೂನು ಅರಿವು ಇಲ್ಲ: ಮುಖ್ಯಮಂತ್ರಿ

ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ವಿರೋಧಪಕ್ಷದವರು ಕೇಳುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ. ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಭಾಗದ ಸಮಸ್ಯೆಗಳ ಬಗ್ಗೆ ಪ್ರಮುಖವಾಗಿ ಚರ್ಚಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತ, ನಿಗಮಮಂಡಳಿ ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿ, “ಅಧ್ಯಕ್ಷರ ನೇಮಕಾತಿಗೆ ಮೊದಲ ಹಂತದಲ್ಲಿ ಶಾಸಕರನ್ನು ಪರಿಗಣಿಸಲಾಗುವುದು. ನಾನು ಹಾಗೂ ಉಪಮುಖ್ಯಮಂತ್ರಿಗಳು ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿ ಪಕ್ಷದ ವರಿಷ್ಠರಿಗೆ ನೀಡಲಾಗಿದ್ದು, ಅನುಮತಿಯನ್ನು ನಿರೀಕ್ಷಿಸಲಾಗಿದೆ” ಎಂದರು.

150 ದಿನಗಳ ಉದ್ಯೋಗ ನೀಡಲು ಕೇಂದ್ರವಿನ್ನೂ ಒಪ್ಪಿಗೆ ಸೂಚಿಸಿಲ್ಲ 

Advertisements

ಬರಪರಿಹಾರದಲ್ಲಿ ರೈತರ ಪಾಲಿನ ಮೊತ್ತದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, “ಬೆಳೆಹಾನಿ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ. ಎನ್ಡಿಆರ್ಎಫ್ ಮಾರ್ಗಸೂಚಿಯಂತೆ ನಿಗದಿಯಾಗಿರುವ ಪರಿಹಾರ ಮೊತ್ತವನ್ನು ನೀಡಲಾಗುವುದು. ಹಾವೇರಿ ಜಿಲ್ಲೆಗೆ ಕುಡಿಯುವ ನೀರು, ಮೇವು, ಉದ್ಯೋಗ ಸೇರಿದಂತೆ ವಿವಿಧ ಕಾರ್ಯಗಳಿಗೆ 226 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ” ಎಂದರು.

“ಎಲ್ಲ ಜಿಲ್ಲಾಮಂತ್ರಿಗಳು, ಜಿಲ್ಲಾಧಿಕಾರಿಗಳಿಗೆ ಬರಗಾಲದ ಪರಿಸ್ಥಿತಿಯ ಬಗ್ಗೆ ನಿಗಾ ವಹಿಸುವುದಲ್ಲದೇ, ಕುಡಿಯುವ ನೀರಿಗೆ ಕೊರತೆ ಬರದಂತೆ ನೋಡಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ. ಎನ್ಆರ್ಜಿಎಸ್ ಅಡಿ ಬರಗಾಲದ ಪರಿಸ್ಥಿತಿಯಲ್ಲಿ 150 ಮಾನವದಿನಗಳ ಉದ್ಯೋಗ ನೀಡುವ ಕೇಂದ್ರದ ನಿಯಮವಿದೆ. ಈ ಕ್ರಮಕ್ಕೆ ಕೇಂದ್ರ ಸರ್ಕಾರದವರು ಅನುಮತಿ ನೀಡಬೇಕಿದ್ದು, ಇದುವೆರಗೆ ಈ ಅನುಮತಿಯನ್ನು ನೀಡಿಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? 10 ನಿಮಿಷದ ಆಝಾನ್‌ನಿಂದ ಶಬ್ದ ಮಾಲಿನ್ಯ ಎನ್ನುವುದಾದರೆ ಡಿಜೆ ಕತೆ ಏನು?: ಗುಜರಾತ್ ಹೈಕೋರ್ಟ್

ರಾಜ್ಯದ ದುಡ್ಡು ರಾಜ್ಯಕ್ಕೆ ನೀಡುತ್ತಿಲ್ಲ

“ಇಡೀ ದೇಶದಲ್ಲಿ 12 ರಾಜ್ಯಗಳಲ್ಲಿ ಬರಗಾಲ ಪರಿಸ್ಥಿತಿಯಿದೆ. ರಾಜ್ಯಕ್ಕೆ ಬರ ಅಧ್ಯಯನಕ್ಕಾಗಿ ಕೇಂದ್ರ ತಂಡ ಪರಿಶೀಲಿಸಿದೆ. ಆದರೂ ಕೇಂದ್ರದಿಂದ ಬರಪರಿಹಾರ ಬಿಡುಗಡೆಯಾಗಿಲ್ಲ. ರಾಜ್ಯದ ದುಡ್ಡನ್ನು ರಾಜ್ಯಕ್ಕೆ ಬಿಡುಗಡೆ ಮಾಡುತ್ತಿಲ್ಲ” ಎಂದರು.

ವಕೀಲನಾಗಿರುವುದರಿಂದಲೇ ಕಾನೂನು ಬಾಹಿರ ತನಿಖೆಯ ಆದೇಶ ವಾಪಸ್ 

ಕುಮಾರಸ್ವಾಮಿಯವರು, ವಕೀಲರಾಗಿದ್ದ ಮುಖ್ಯಮಂತ್ರಿಗಳು ಡಿಕೆ ಶಿವಕುಮಾರ್ ಅವರ ತನಿಖೆಯ ಆದೇಶವನ್ನು ವಾಪಸ್ಸು ಪಡೆದಿರುವುದು ಸರಿಯೇ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, “ನಾನು ವಕೀಲನಾಗಿರುವುದರಿಂದ, ಹಿಂದಿನ ತನಿಖಾ ಆದೇಶ ಕಾನೂನು ರೀತ್ಯವಿರಲಿಲ್ಲವೆಂದು ವಾಪಸ್ಸು ಪಡೆಯಲಾಗಿದೆ. ನನಗೆ ಕಾನೂನಿನ ಅರಿವು ಇಲ್ಲದಿದ್ದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿಯಂತೆ ನಾನು ಕಾನೂನುಬಾಹಿರವಾಗಿದ್ದರೂ ತನಿಖೆಯ ಬಗ್ಗೆ ಸಮ್ಮತಿಸುತ್ತಿದ್ದೆ” ಎಂದು ತಿರುಗೇಟು ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X