ಜಾತ್ಯತೀತ ರಾಜಕೀಯ ನೀತಿ ಸದಾ ಪಾಲಿಸುವೆ: ಸಿಎಂ ಸಿದ್ದರಾಮಯ್ಯ

Date:

Advertisements
  • ಗ್ಯಾರಂಟಿಗಳು ಅವಕಾಶ ವಂಚಿತರಿಗೆ ನ್ಯಾಯ ಒದಗಿಸುವ ಯೋಜನೆಗಳು
  • ಶಕ್ತಿ ಯೋಜನೆಯಡಿ 70 ಕೋಟಿಗೂ ಹೆಚ್ಚು ಮಹಿಳೆಯರಿಂದ ಪ್ರಯಾಣ 

ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು, ಇಂದಿರಾ ಕ್ಯಾಂಟೀನ್, ಕ್ಷೀರಭಾಗ್ಯ ಯೋಜನೆಗಳು ಎಲ್ಲ ಜಾತಿ ಧರ್ಮದ ಜನರಿಗೂ ತಲುಪುತ್ತಿದ್ದು, ಅವಕಾಶ ವಂಚಿತರಿಗೆ ನ್ಯಾಯ ಒದಗಿಸುವ ಯೋಜನೆಗಳಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ವಿಭಾಗೀಯ ಮಠದ ವತಿಯಿಂದ ಆಯೋಜಿಸಿರುವ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಹಿಂದುಳಿದ, ದಲಿತರು, ಅಲ್ಪಸಂಖ್ಯಾತರು ಮುಖ್ಯವಾಹಿನಿಗೆ ಬರಬೇಕು. ಶಕ್ತಿ ಯೋಜನೆಯಡಿ 70 ಕೋಟಿಗೂ ಹೆಚ್ಚು ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಇದರಿಂದ ಪ್ರವಾಸೋದ್ಯಮ, ಆರ್ಥಿಕ ಚಟುವಟಿಕೆಗೆ ಚುರುಕುಗೊಂಡು, ರಾಜ್ಯದ ಜಿಡಿಪಿ ಹೆಚ್ಚಾಗುತ್ತಿದೆ” ಎಂದರು.

“ರಾಜ್ಯದ ತಲಾವಾರು ಆದಾಯ ಹೆಚ್ಚಾಗಿದೆ. ಪ್ರತಿ ಅರ್ಹ ಫಲಾನುಭವಿ ಕುಟುಂಬಕ್ಕೆ ವಾರ್ಷಿಕವಾಗಿ 50 ರಿಂದ 60 ಸಾವಿರ ಸರ್ಕಾರ ಒದಗಿಸುತ್ತಿದ್ದು, ಕುಟುಂಬದ ಆರ್ಥಿಕ ಸಬಲೀಕರಣಕ್ಕೆ ಕಾರಣವಾಗಿದೆ. ಜನರ ಆಶೀರ್ವಾದದ ಫಲದಿಂದ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗುತ್ತಿದೆ. ಇತರೆ ರಾಜಕೀಯ ಪಕ್ಷಗಳು ರಾಜಕೀಯ ಪ್ರೇರಿತವಾಗಿ ಟೀಕೆ ಮಾಡುತ್ತದೆ. ವಿರೋಧಪಕ್ಷಗಳು ಮಾಡುವುದು ಕೇವಲ ಆರೋಪಗಳೇ ಹೊರತು, ಸತ್ಯವಲ್ಲ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜಾಪ್ರಭುತ್ವದ ವ್ಯಾಖ್ಯಾನ ಬದಲಿಸಿದ ಕಾಂಚಾಣ

ಜಾ‌ತ್ಯತೀತ ರಾಜಕೀಯ 

“ನಾನು ರಾಜಕೀಯಕ್ಕೆ ಬಂದು 50 ವರ್ಷಗಳಾಗಿದೆ. 2005 ರಲ್ಲಿ ಜೆಡಿಎಸ್‌ನಿಂದ ನನ್ನನ್ನು ಉಚ್ಛಾಟನೆ ಮಾಡಿದ ನಂತರ ಅನಿವಾರ್ಯವಾಗಿ ಕಾಂಗ್ರೆಸ್ ಸೇರಬೇಕಾಗಿ ಬಂತು. ಅಹ್ಮದ್ ಪಟೇಲ್ ಸೇರಿದಂತೆ ಅಂದಿನ ಕಾಂಗ್ರೆಸ್ ನಾಯಕರು ಕಾಂಗ್ರೆಸ್‌ಗೆ ಸೇರಲು ತಿಳಿಸಿದರು. ಜನರ ಆಶೀರ್ವಾದದಿಂದ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗುವ ಅವಕಾಶ ದೊರೆತಿದ್ದು, ಜಾತ್ಯತೀತ ರಾಜಕೀಯ ನೀತಿಯನ್ನು ಪಾಲಿಸುವೆ” ಏಂದು ಹೇಳಿದರು.

“ಸಂವಿಧಾನದಲ್ಲಿ ತಿಳಿಸಿದಂತೆ ಎಲ್ಲ ಜಾತಿ ಮತ್ತು ಧರ್ಮದವರನ್ನು ಗೌರವಿಸಿ, ಜಾತ್ಯತೀತವಾಗಿರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಾ, ಸಾಮಾಜಿಕ ನ್ಯಾಯದಿಂದ ವಂಚಿತರಾಗಿರುವ ವರ್ಗಗಳ ಪರವಾಗಿ ನಿಲ್ಲುವುದಾಗಿ” ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X