ಕಾಗಿನೆಲೆ ಪೀಠ ಒಂದು ಜಾತಿಯ ನೆಲೆ ಅಲ್ಲ, ಎಲ್ಲ ಶೋಷಿತ ಜಾತಿ-ಸಮುದಾಯಗಳ ನೆಲೆ: ಸಿದ್ದರಾಮಯ್ಯ

Date:

Advertisements
  • ಕನಕದಾಸರು ಜಾತಿ‌, ಅನಕ್ಷರತೆಯ ಅಸಮಾನತೆ ಹೋಗಲಾಡಿಸಲು ಹೋರಾಡಿದರು
  • ಯಾವ ಧರ್ಮವೂ ಜಾತಿ ಆಧಾರದಲ್ಲಿ ಮನುಷ್ಯನ ಶೋಷಣೆ ಮಾಡಿ ಎನ್ನುವುದಿಲ್ಲ

ಹಿಂದಿನ ಜನ್ಮ-ಮುಂದಿನ ಜನ್ಮ ಎನ್ನುವುದೇ ಇಲ್ಲ. ಈ ಜನ್ಮದಲ್ಲಿ ನಾವು ಮಾಡುವ ಕೆಲಸಗಳೇ ಮುಖ್ಯ. ಈ ಕಾರಣಕ್ಕೆ ಬಸವಾದಿ ಶರಣರು ಮತ್ತು ಕನಕದಾಸರು ಕರ್ಮ ಸಿದ್ಧಾಂತ ಮತ್ತು ಜನ್ಮದ ಮೌಢ್ಯವನ್ನು ಸಾರಾಸಗಟಾಗಿ ತಿರಸ್ಕರಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

‌ಕಾಗಿನೆಲೆ ಮಹಾಸಂಸ್ಥಾನ ಕನಕ‌ಗುರುಪೀಠದಲ್ಲಿ ಬುಧವಾರ ಆಯೋಜಿಸಿದ್ದ 536ನೇ ಕನಕ ಜಯಂತ್ಯುತ್ಸವ ಮತ್ತು ಭಾವೈಕ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

“ಕಾಗಿನೆಲೆ ಪೀಠ ಯಾವತ್ತೂ ಒಂದು ಜಾತಿಯ ನೆಲೆ ಆಗಬಾರದು. ಇದು ಎಲ್ಲ ಶೋಷಿತ ಸಮುದಾಯಗಳ ನೆಲೆ ಆಗಬೇಕು. ಕನಕ ಜಯಂತಿ ಪ್ರಯುಕ್ತ ಭಾವೈಕ್ಯತಾ ಸಮಾವೇಶ ಏರ್ಪಿಡಿಸಿರುವ ಮಠದ ಗುರುಗಳಿಗೆ ಹೃದಯಪೂರ್ವಕವಾಗಿ ವಂದಿಸುತ್ತೇನೆ. ಇದು ಅತ್ಯಂತ ಅರ್ಥಪೂರ್ಣ ಕಾರ್ಯಕ್ರಮ” ಎಂದು ಮೆಚ್ಚುಗೆ ಸೂಚಿಸಿದರು.

Advertisements

“ನಾವ್ಯಾರೂ ಅರ್ಜಿ ಹಾಕೊಂಡು ಜಾತಿ-ಧರ್ಮ ಆರಿಸಿಕೊಂಡು ಹುಟ್ಟಿಲ್ಲ. ಮೊದಲು ಮನುಷ್ಯರು ಮನುಷ್ಯರನ್ನು ಪ್ರೀತಿಸಬೇಕು. ಜಾತಿ-ಧರ್ಮ ರಹಿತ ಮನುಷ್ಯ ಪ್ರೇಮವನ್ನೇ ಕನಕದಾಸರು ಜಗತ್ತಿಗೆ ನೀಡಿದರು” ಎಂದು ವಿವರಿಸಿದರು.

WhatsApp Image 2023 11 29 at 3.56.23 PM

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ತಪ್ಪಿದ ಘೋರ ದುರಂತ- ಆಳುವವರ ಅಲಕ್ಷ್ಯ ಅಕ್ಷಮ್ಯ

“ಕನಕಗುರು ಪೀಠ ಸ್ಥಾಪಿಸುವಾಗ ಇದನ್ನು ಕುರುಬರ ಮಠ ಆಗಬೇಕು ಎಂದು ಇಚ್ಛಿಸಲೇ ಇಲ್ಲ. ಎಲ್ಲಾ ಶೋಷಿತ ಧರ್ಮಗಳ ಮಠ ಆಗಬೇಕು ಎನ್ನುವುದು ನಮ್ಮಗಳ ಉದ್ದೇಶ ಆಗಿತ್ತು” ಎಂದು ನೆನಪು ಮಾಡಿಕೊಂಡರು.

“ಧರ್ಮ ಇರುವುದು ನಮಗಾಗಿ. ನಾವು ಧರ್ಮಕ್ಕಾಗಿ ಅಲ್ಲ. ಅದಕ್ಕೇ ಕನಕದಾಸರು ಕುಲ ಕುಲವೆಂದು ಬಡಿದಾಡದಿರಿ ಎಂದು ಹೇಳಿದ್ದು. ಬಸವಣ್ಣನವರು, ‘ಇವ ನಮ್ಮವ ಇವ ನಮ್ಮವ’ ಎಂದಿದ್ದು. ಕುವೆಂಪು ಅವರು, ‘ಹುಟ್ಟುವಾಗ ಎಲ್ಲರೂ ವಿಶ್ವ ಮಾನವರು’ ಎಂದರು, ಅಂಬೇಡ್ಕರ್ ಅವರು ಸಮ ಸಮಾಜದ ಬಗ್ಗೆ ಹೇಳಿದರು. ಬಸವಾದಿ ಶರಣರು, ಕನಕದಾಸರು, ಅಂಬೇಡ್ಕರ್, ಕುವೆಂಪು, ಸೂಫಿಗಳ ಆಶಯಗಳೆಲ್ಲಾ ಒಂದೇ ಆಗಿತ್ತು. ಆದ್ದರಿಂದ ನಾವುಗಳು ಇವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಮಲ್ಲೇಶಪ್ಪ ಹೊರಪೇಟೆ ಅವರ ಕನಕನ ಹೆಜ್ಜೆ ಮಕ್ಕಳ ಕಾದಂಬರಿಯನ್ನು ಮುಖ್ಯಮಂತ್ರಿಗಳು ಬಿಡುಗಡೆಗೊಳಿಸಿದರು. ನಿರಂಜನಾನಂದಪುರಿ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ರೇವಣಸಿದ್ದೇಶ್ವರ, ಬೀರಲಿಂಗೇಶ್ವರ, ಮೈಲಾರಲಿಂಗೇಶ್ವರ, ಮಹಾಸಿದ್ದೇಶ್ವರಿ ದೇವರುಗಳ ಕುಂಬಾಭಿಷೇಕ ನೆರವೇರಿಸಿದರು.

ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್, ಪ್ರಾಥಮಿಕ‌ ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಧಾನಸಭೆಯ ಉಪಸಭಾಪತಿ ರುದ್ರಪ್ಪ ಲಮಾಣಿ, ಮಾಜಿ ಸಚಿವರಾದ ಹೆಚ್ ಎಂ ರೇವಣ್ಣ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X