ಬಿಎಸ್‌ವೈ ಮುಂದಿಟ್ಟು ಮತಯಾಚನೆ ಅನುಕಂಪವಲ್ಲವೆ; ಸಿದ್ದರಾಮಯ್ಯ ಸವಾಲು

Date:

  • ಮೋದಿ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ
  • ಓಟದ ಸ್ಪರ್ಧೆಗೆ ಆಗಮಿಸುವಂತೆ ಮೋದಿಗೆ ಆಹ್ವಾನ

ಪ್ರಧಾನಿ ನರೇಂದ್ರ ಮೋದಿ ಅವರು ನನ್ನೊಂದಿಗೆ ಓಟದ ಸ್ಪರ್ಧೆಗೆ ಬರಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸವಾಲು ಹಾಕಿದ್ದಾರೆ. ಅಲ್ಲದೆ, ಅನುಕಂಪದ ಮತಯಾಚನೆ ಎಂದು ತಮ್ಮನ್ನು ಟೀಕಿಸಿದ ಮೋದಿ ಅವರಿಗೆ ಬಿಎಸ್ ಯಡಿಯೂರಪ್ಪ ಅವರನ್ನು ನೆನಪಿಸಿದ್ದಾರೆ.

- Advertisement -

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ರಾಜ್ಯ ಪ್ರವಾಸದಲ್ಲಿದ್ದಾರೆ. ವಿಜಯಪುರದ ಬೃಹತ್ ಸಮಾವೇಶದ ವೇಳೆ ಮಾತನಾಡಿರುವ ಮೋದಿ, “ಸಿದ್ದರಾಮಯ್ಯ ಅವರು ಇದು ತಮ್ಮ ಕೊನೆಯ ಚುನಾವಣೆ ಎಂದು ಹೇಳುವ ಮೂಲಕ ಅನುಕಂಪದಿಂದ ಮತ ಗಳಿಸುವ ಕುತಂತ್ರ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಮೋದಿ ಅವರ ಹೇಳಿಕೆ ಕುರಿತು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದು, ಭಾರತ್ ಜೋಡೋ ಯಾತ್ರೆಯ ವೇಳೆ ರಾಹುಲ್ ಗಾಂಧಿ ಅವರ ಜೊತೆಗೆ ತಾವು ರಸ್ತೆ ಮೇಲೆ ಓಡಿರುವ ವಿಡಿಯೋ ಹಂಚಿಕೊಂಡು ಸವಾಲು ಹಾಕಿದ್ದಾರೆ.

“ನಾನು ನಿವೃತ್ತಿಯಾಗುತ್ತೇನೆ ಎಂದು ಹೇಳುತ್ತಿರುವುದು ಚುನಾವಣಾ ರಾಜಕಾರಣದಿಂದಲೇ ಹೊರತು, ಸಕ್ರಿಯ ರಾಜಕಾರಣದಿಂದ ಅಲ್ಲ. ರಾಜಕೀಯದಲ್ಲಿ ಸಕ್ರಿಯವಾಗಿರುವಷ್ಟು ಆರೋಗ್ಯದಿಂದ ಇದ್ದೇನೆ. ನರೇಂದ್ರ ಮೋದಿ ಅವರು ಸಿದ್ಧವಿದ್ದರೆ ಅವರ ಜೊತೆಯಲ್ಲಿ ಓಟದ ಸ್ಪರ್ಧೆಗೆ ನಾನು ಸಿದ್ಧ” ಎಂದು ಟ್ವೀಟ್ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್‌ನ 50 ಅಭ್ಯರ್ಥಿಗಳ ಮೇಲೆ ಐಟಿ ದಾಳಿ ನಡೆಯಲಿದೆ: ಲಕ್ಷ್ಮಿ ಹೆಬ್ಬಾಳ್ಕರ್

“ಪ್ರಧಾನಿ ಮೋದಿ ಅವರು ಏನನ್ನು ಹೇಳಲಿಕ್ಕೆ ಹೊರಟಿದ್ದಾರೆ? ಬಿ ಎಸ್ ಯಡಿಯೂರಪ್ಪನವರನ್ನು
ವಯಸ್ಸಿನ ಕಾರಣಕ್ಕಾಗಿ ಮುಖ್ಯಮಂತ್ರಿ ಸ್ಥಾನದಿಂದ ಅವಮಾನಕಾರಿಯಾಗಿ ಕಿತ್ತುಹಾಕಿದ ಬಿಜೆಪಿ, ಈಗ ಅವರನ್ನೇ ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿರುವುದಕ್ಕೆ ಕಾರಣ ಅವರ ಮೇಲಿನ ಗೌರವವೇ? ಅಥವಾ ಅನುಕಂಪ ಗಳಿಕೆಯ ತಂತ್ರವೇ?” ಎಂದು ಪ್ರಶ್ನಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...

1,870 ಕೋಟಿ ರೂ. ದೇಣಿಗೆ ದಂಧೆ ಆರೋಪ: ಗುಜರಾತ್‌ನ 3 ರಾಜಕೀಯ ಪಕ್ಷಗಳ ಅಕ್ರಮ ಬಯಲು

ಗುಜರಾತ್‌ನಲ್ಲಿ ನೋಂದಾಯಿತವಾಗಿದ್ದ, ಆದರೆ ಮಾನ್ಯತೆ ಪಡೆಯದ ಮೂರು ರಾಜಕೀಯ ಪಕ್ಷಗಳು ಆದಾಯ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ ಮಂಡಳಿಯ ಚಪ್ಪಾಳೆ

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ...

ತಮಗೆ ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ ಐಎಎಸ್ ಜಿಜಿ ಥಾಮ್ಸನ್

ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗ...