ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎನ್ನುವ ಮನೋಭಾವ ಇದ್ದರೆ ಜನಸೇವೆ ಸಾಧ್ಯವಿಲ್ಲ: ಸಿದ್ದರಾಮಯ್ಯ

Date:

Advertisements

ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳ ಮತ್ತು ಸಿಇಒ ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಮಾತನಾಡಿದ ಅವರು, “ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಪರಿಣಾಮಕಾರಿಯಾಗಿ ಜನ ಸಾಮಾನ್ಯರಿಗೆ ತಲುಪಿಸಲು ಡಿಸಿ, ಎಸ್‌ಪಿ, ಸಿಇಒಗಳು ಕ್ರಿಯಾಶೀಲತೆಯಿಂದ, ಸಮನ್ವಯತೆಯಿಂದ ಕೆಲಸ ಮಾಡಬೇಕು” ಎಂದರು.

“ರಾಜ್ಯದಲ್ಲಿ ಡೆಂಘೀ ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಕೆಲಸ ಮಾಡಿ. ಡಿಸಿ, ಡಿಎಚ್‌ಒಗಳು ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಸಭೆ ಮಾಡಿ ಕ್ಷಿಪ್ರವಾಗಿ ಕೆಲಸ ಮಾಡಿ. ಇಷ್ಟು ದಿನ ಉದಾಸೀನ, ನಿರ್ಲಕ್ಷ್ಯಕ್ಕೆ, ಕರ್ತವ್ಯಲೋಪಕ್ಕೆ ಕೆಳ ಹಂತದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇವತ್ತಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ” ಎಂದು ಎಚ್ಚರಿಕೆ ನೀಡಿದರು.

Advertisements

“ಡಿಸಿ, ಸಿಇಒಗಳು ತಮ್ಮ ಜಿಲ್ಲೆಯ ಸಮಗ್ರ ಮಾಹಿತಿಗಳನ್ನು ಅಂಗೈಯಲ್ಲಿ ಇಟ್ಟುಕೊಂಡು ಉತ್ಸಾಹದಿಂದ ಕೆಲಸ ಮಾಡಬೇಕು. ರಾಜಕಾರಣಿಗಳು, ಅಧಿಕಾರಿಗಳ ಅನುಭವದ ಮೇಲೆ ಆಡಳಿತ ಹೆಚ್ಚು ಪರಿಣಾಮಕಾರಿಯಾಗಿ ಆಗಬೇಕಿತ್ತು.‌ 40 ವರ್ಷಗಳ ಹಿಂದೆ ಅಧಿಕಾರಿಗಳು ಕೆಲಸ ನಿರ್ವಹಿಸುವ ರೀತಿಗೂ, ಇವತ್ತಿನ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ರೀತಿಗೂ ಹೋಲಿಸಿದರೆ ಕಾರ್ಯಾಂಗ ಮತ್ತು ಶಾಸಕಾಂಗ ಈಗ ಹೆಚ್ಚು ಪರಿಣಾಮಕಾರಿಯಾಗಿ, ಗುಣಾತ್ಮಕವಾಗಿ ಕೆಲಸ ಮಾಡುತ್ತಿಲ್ಲ ಎನ್ನುವುದು ಗೊತ್ತಾಗುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲೆಯ ಸಮಗ್ರ ಮಾಹಿತಿ ಅಗತ್ಯ

“ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆ ಪರಸ್ಪರ ಪೂರಕ. ಒಂದು ಇಲ್ಲದಿದ್ದರೆ ಮತ್ತೊಂದು ಇರಲು ಸಾಧ್ಯವಿಲ್ಲ. ಕರ್ನಾಟಕ ಗುಡ್ ಗೌರ್ನೆನ್ಸ್ ನಲ್ಲಿ ಮಾದರಿ ರಾಜ್ಯವಾಗಿದೆ ಎನ್ನುವುದನ್ನು ಮರೆಯಬಾರದು. ಈ ಹೆಗ್ಗಳಿಕೆಯನ್ನು ಮುಂದುವರೆಸಿಕೊಂಡು ಹೋಗುವ ಜವಾಬ್ದಾರಿ ನಿಮ್ಮಗಳ ಮೇಲಿದೆ. ಜಿಲ್ಲಾಧಿಕಾರಿಗಳು ಯಾವುದೇ ಜಿಲ್ಲೆಗೆ ಹೋಗುವ ಮೊದಲು ಆಯಾ ಜಿಲ್ಲೆಗಳ ಮಾನವ ಅಭಿವೃದ್ಧಿ ಸೂಚ್ಯಂಕಗಳ ಜೊತೆಗೆ ಜಿಲ್ಲೆಯ ಸಮಗ್ರ ಮಾಹಿತಿ ತಿಳಿದುಕೊಳ್ಳಬೇಕು” ಎಂದರು.

“ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಕೆಲವು ಜಿಲ್ಲೆಗಳಲ್ಲಿ ಕುಸಿತ ಕಂಡಿರುವುದನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, ಈ ಬಾರಿ ಕಾಪಿಯನ್ನು ಸಂಪೂರ್ಣ ನಿಲ್ಲಿಸಿದ್ದು ಶ್ಲಾಘನೀಯ. ಆದರೆ ಈ ಕಾರಣಕ್ಕೆ ಫಲಿತಾಂಶ ಕುಸಿತ ಆಯಿತು ಎನ್ನುವ ಸಮರ್ಥನೆ ಸರಿಯಲ್ಲ. ಡಿಸಿ, ಸಿಇಒ ಇಲಾಖಾ ಕಾರ್ಯದರ್ಶಿಗಳ ಜವಾಬ್ದಾರಿ ಇಲ್ಲವಾ ? ಆತ್ಮಾವಲೋಕನ ಮಾಡಿಕೊಂಡು ಪರಿಸ್ಥಿತಿ ಸುಧಾರಿಸಲು ಪ್ರಯತ್ನಿಸಲೇಬೇಕು” ಎಂದು ಹೇಳಿದರು.

ಜನಸಂಪರ್ಕ ಸಭೆ

“ಜನಸಂಪರ್ಕ, ಜನಸ್ಪಂದನ ಸಭೆಗಳಲ್ಲಿ 15-20 ಸಾವಿರ ಅರ್ಜಿಗಳು ಬರುತ್ತವೆ. ನೀವು ಸರಿಯಾಗಿ ಸ್ಥಳೀಯವಾಗಿ ಕೆಲಸ ಮಾಡಿದ್ದರೆ ಇಷ್ಟೊಂದು ಮಂದಿ ನನ್ನ ಬಳಿಗೆ ಏಕೆ ಬರುತ್ತಾರೆ? ಡಿಸಿ, ಸಿಇಒಗಳು ಇರೋದು ಜನಸಂಪರ್ಕ ಸಭೆಗಳಿಗೆ ಬಂದ ಅರ್ಜಿಗಳನ್ನು ಫಾರ್ವಡ್‌ ಮಾಡಿ ಮುಚ್ಚಳಿಕೆ ಕೊಟ್ಟು ಕೈತೊಳೆದುಕೊಳ್ಳೋಕಾ ಇರೋದು? ಪರಿಹಾರ ಕೊಡಿಸುವವರು ಯಾರು? ಇದಕ್ಕೇನಾ ನೀವು ಇರೋದು” ಎಂದು ಖಾರವಾಗಿ ಪ್ರಶ್ನಿಸಿದರು.

“ತಹಶೀಲ್ದಾರ್, ಜಿಲ್ಲಾಧಿಕಾರಿಗಳ ಸಮೇತ ಜಿಲ್ಲಾ , ತಾಲ್ಲೂಕು ಮಟ್ಟದ ಅಧಿಕಾರಿಗಳು ಜನರನ್ನು ನೇರ ಭೇಟಿ ಮಾಡುತ್ತಿಲ್ಲ. ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಕಡೆಯೇ ಉಳಿಯಬೇಕು ಎನ್ನುವ ನನ್ನ ಸೂಚನೆ ಸರಿಯಾಗಿ ಪಾಲನೆ ಆಗುತ್ತಿಲ್ಲ. ಪಿಡಿಒಗಳು, ವಿಎಗಳು ಕೆಲಸ ಮಾಡುವ ಜಾಗದಲ್ಲೇ ಉಳಿಯಬೇಕು. ಈ ಬಗ್ಗೆ ಡಿಸಿ, ಸಿಇಒಗಳು ಗಮನ ಹರಿಸಬೇಕು” ಎಂದು ಹೇಳದರು.

ಕುರಿಗಾಹಿಗಳಿಗೆ ಬಂದೂಕು ಲೈಸೆನ್ಸ್

“ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ನೀಡಬೇಕು, ಕುರಿ-ಮೇಕೆಗಳ ಟೆಂಟ್ ಹಾಕಿರುವ ಸ್ಥಳಕ್ಕೇ ಹೋಗಿ ಲಸಿಕೆ ಮತ್ತು ಚುಚ್ಚುಮದ್ದುಗಳನ್ನು ನೀಡಬೇಕು, ಸಂಚಾರಿ ಕುರಿಗಾಹಿಗಳಿಗೆ ಬಂದೂಕು ಲೈಸೆನ್ಸ್ ಕೊಡುವುದು ಕಡ್ಡಾಯ. ಕುರಿ ಕಳ್ಳತನ ತಡೆಯಲು ಇದು ಅಗತ್ಯ” ಎಂದು ಸೂಚನೆ ನೀಡಿದರು.

“ಮಣ್ಣಿನ ಫಲವತ್ತತೆ ಕಡಿಮೆ ಆಗುತ್ತಿದೆ. ಇದನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವ ಜೊತೆಗೆ ರೈತರಿಗೆ ಮಣ್ಣಿನ ಆರೋಗ್ಯ ಕಾರ್ಡ್ ಅನ್ನು ಕಡ್ಡಾಯವಾಗಿ ನೀಡಬೇಕು. ಪ್ರತೀ ಎರಡು ವರ್ಷಕ್ಕೊಮ್ಮೆ ಮಣ್ಣಿನ ಪರೀಕ್ಷೆ ನಡೆಸಬೇಕು. ಈ ಎಲ್ಲಾ ಕೆಲಸಗಳನ್ನು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು” ಎಂದು ಸೂಚಿಸಿದರು.

“ತಹಶೀಲ್ದಾರ್ ನ್ಯಾಯಾಲಯಗಳಲ್ಲಿ 8,234 ಪ್ರಕರಣಗಳು ಬಾಕಿ ಇವೆ. ಉಪವಿಭಾಹಾಧಿಕಾರಿಗಳ ಬಳಿ RRT (ಹಕ್ಕು ಬದಲಾವಣೆ) ಪ್ರಕರಣಗಳು 37587 ಬಾಕಿ ಇವೆ. ಇವುಗಳಲ್ಲಿ 5 ವರ್ಷಕ್ಕೂ ಮೇಲ್ಪಟ್ಟವು 7522 ಪ್ರಕರಣಗಳಿವೆ, DC ಗಳ ಬಳಿ 10838 ಪ್ರಕರಣಗಳು ಬಾಕಿ ಇವೆ. 5 ವರ್ಷಕ್ಕೂ ಮೇಲ್ಪಟ್ಟವು 4207 ಪ್ರಕರಣಗಳಿವೆ. DC ಗಳೇ ಬಾಕಿ ಉಳಿಸಿಕೊಂಡರೆ ನೀವು AC ಮತ್ತು ತಹಶೀಲ್ದಾರ್ ಗಳಿಗೆ ಏನು ಸೂಚನೆ ಕೊಡುತ್ತೀರಿ” ಎಂದು ಖಾರವಾಗಿ ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X