ಉಗ್ರ ಸಂಘಟನೆ ಸಂಪರ್ಕಿತ ಮೌಲ್ವಿ ಜೊತೆ ಸಿಎಂ ವೇದಿಕೆ ಹಂಚಿಕೆ ಆರೋಪ, ಎನ್ಐ‌ಎ ತನಿಖೆಗೆ ಬೊಮ್ಮಾಯಿ ಆಗ್ರಹ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಐಸಿಸ್ ಉಗ್ರ ಸಂಘಟನೆ ಜೊತೆ ಸಂಪರ್ಕ ಇರುವ ಮುಸ್ಲಿಂ ಮೌಲ್ವಿ ಕುಳಿತಿದ್ದಾರೆ ಎನ್ನಲಾದ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎನ್‌ಐಎಗೆ ಒಪ್ಪಿಸಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಮಾತನಾಡಿದ ಅವರು, “ಮುಖ್ಯಮಂತ್ರಿಯ ಜೊತೆ ವೇದಿಕೆ ಹಂಚಿಕೊಂಡ ಮೌಲ್ವಿಯ ವಿರುದ್ದ ವಿಜಯಪುರದಲ್ಲಿ ಪ್ರಚೋದನಾತ್ಮಕ ಭಾಷಣ ಮಾಡಿರುವ ಬಗ್ಗೆ ಪ್ರಕರಣಗಳು ದಾಖಲಾಗಿವೆ. ಅವರಿಗೆ ಐಎಸ್ಐ ಸಂಪರ್ಕ ಇರುವ ಬಗ್ಗೆ ನಮ್ಮ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೇಳಿದ್ದಾರೆ. ಮುಖ್ಯಮಂತ್ರಿಗಳು ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಎನ್ಐ‌ಎಗೆ ಒಪ್ಪಿಸಬೇಕು” ಎಂದು ಒತ್ತಾಯಿಸಿದರು.

“ಈ ಹಿಂದೆ ಕುಕ್ಕರ್ ಬಾಂಬ್ ಪ್ರಕರಣದ ಬಗ್ಗೆ ಕಾಂಗ್ರೆಸ್ ನವರು ಲಘುವಾಗಿ ಪರಿಗಣಿಸಿದ್ದರು. ಆದರೆ, ಅವರಲ್ಲಿ ಐದಾರು ಜನರು ದೇಶದ್ರೋಹ ಚಟುವಟಿಕೆಯಲ್ಲಿ ತೊಡಗಿದ್ದಾರೆ ಎನ್ನುವುದು ಬೆಳಕಿಗೆ ಬಂದಿದೆ. ಮುಖ್ಯಮಂತ್ರಿಗಳು ಮುಸ್ಲಿಂ ಸಮುದಾಯಕ್ಕೆ 10 ಸಾವಿರ ಕೋಟಿ ರೂ. ನೀಡುವುದಾಗಿ ಹೇಳಿರುವುದು ಓಲೈಕೆ ರಾಜಕಾರಣದ ಮುಂದುವರೆದ ಭಾಗ ಅಲ್ಲದೇ ಪ್ರಚೋದನಾಕಾರಿಯಾಗಿಯೂ ಇದೆ” ಎಂದು ಆರೋಪಿಸಿದ್ದಾರೆ.

Advertisements

ಇಡೀ ಕಾಂಗ್ರೆಸ್ಸಿನ ನೀತಿ ನೋಡಿದಾಗ ಅವರ ಸಚಿವ ಸಂಪುಟದ ಸಹೊದ್ಯೋಗಿ, ಅಲ್ಪಸಂಖ್ಯಾತರನ್ನು ಸ್ಪೀಕರ್ ಮಾಡಿದ್ದೇವೆ ಎಲ್ಲರೂ ಅವರ ಮುಂದೆ ಜಿ ಹುಜೂರ್ ಅನ್ನಬೇಕು ಎನ್ನುತ್ತಾರೆ ಇದೊಂದು ಪ್ರಚೋದನೆ. ಸಿಎಂ ಆದವರು ಎಲ್ಲರನ್ನು ಒಗ್ಗೂಡಿಸಿಕೊಂಡು ಹೋಗಬೇಕು. ದೇಶದ ಸಂಪತ್ತನ್ನು ಬೆಳೆಸಲು ಎಲ್ಲರೂ ದುಡಿಯಬೇಕು” ಎಂದರು.

ರೈತರ ಸಾಲ ವಸೂಲಿ ನಿಲ್ಲಿಸಲಿ

ರಾಜ್ಯದಲ್ಲಿ ಬರದಿಂದ ರೈತರು ಕಂಗಾಲಾಗಿದ್ದಾರೆ. ಬರಗಾಲಕ್ಕೆ ಹಣ ಬಿಡುಗಡೆ ಮಾಡಿಲ್ಲ. ರೈತರಿಗೆ ಬೆಳೆ ಇಲ್ಲ, ಕುಡಿಯುವ ನೀರಿಲ್ಲ, ಜಾನುವಾರುಗಳಿಗೆ ಮೇವಿಲ್ಲ, ಸರ್ಕಾರ ಇದುವರೆಗೂ ಬಿಡಿಗಾಸು ಬಿಡುಗಡೆ ಮಾಡಿಲ್ಲ. ಕೇಂದ್ರದ ಕಡೆಗೆ ಬೆರಳು ಮಾಡಿ ತೋರಿಸುತ್ತಾರೆ. ಹಿಂದೆ ಪ್ರವಾಹ ಬಂದಾಗ ನಾವು ಒಂದು ತಿಂಗಳಲ್ಲಿ ಡಿಬಿಟಿ ಮುಖಾಂತರ ರೈತರಿಗೆ ಸುಮಾರು 2,000 ಕೋಟಿ ರೂ. ಬಿಡುಗಡೆ ಮಾಡಿದ್ದೆವು. ಅವರು ಕೇವಲ 2,000 ಸಾವಿರ ನೀಡುತ್ತೇನೆ ಎನ್ನುತ್ತಾರೆ. ಇದು ರೈತರಿಗೆ ಅವಮಾನ ಮಾಡಿದಂತೆ. ಕೇಂದ್ರದ ನಿಯಮದಂತಾದರೂ ಒಣ ಬೇಸಾಯಕ್ಕೆ ಪ್ರತಿ ಹೆಕ್ಟೇರ್ ಗೆ ಕನಿಷ್ಠ 6,000 ರೂ, ನೀರಾವರಿಗೆ 18 ಸಾವಿರ ರೂ. ನೀಡುವ ಕೆಲಸ ಮಾಡಬೇಕು” ಎಂದರು.

ಅರ್ಜುನ ಸಾವಿನ ತನಿಖೆಯಾಗಲಿ

“ಆನೆ ಅರ್ಜುನ ಸಾವಿನ ಬಗ್ಗೆ ಸರ್ಕಾರ ಸತ್ಯ ಮುಚ್ಚಿಡುವ ಕೆಲಸ ಮಾಡುತ್ತಿದೆ. ಅದೇ ಕಾರಣಕ್ಕೆ ತರಾತುರಿಯಲ್ಲಿ ಅಂತ್ಯ ಸಂಸ್ಕಾರ ಮಾಡಿದ್ದಾರೆ. ಅರಣ್ಯ ಇಲಾಖೆಯಲ್ಲಿ ಅರಾಜಕತೆ ನಡೆಯುತ್ತಿದೆ. ಐಎಫ್ಎಸ್ ಅಧಿಕಾರಿಗಳ ಹಿಂಡು ಬೆಂಗಳೂರಿನಲ್ಲಿ ಆನೆ ಹಿಂಡಿನಂತಿದ್ದಾರೆ. ಅವರನ್ನು ನಾನು ಕಾಡಿಗೆ ಕಳುಹಿಸುವ ಕೆಲಸ ಮಾಡಿದ್ದೆ, ಈಗ ಮತ್ತೆ ವಾಪಸ್ ಬರುವ‌ ಕೆಲಸ ಮಾಡುತ್ತಿದ್ದಾರೆ. ಐಎಫ್ಎಸ್ ಅಧಿಕಾರಿಗಳು ಬೆಂಗಳೂರಿನಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದ್ದಾರೆ ಅವರಿಗೆ ಅರಣ್ಯದ ಜವಾಬ್ದಾರಿ ನೀಡಿ ಕಾಡಿಗೆ ಕಳುಹಿಸಬೇಕು. ಆನೆ ಅರ್ಜುನ ಹಾಗೂ ಬೆಂಗಳೂರಿನ ಚೀತಾ ಸಾವಿನ ಪ್ರಕರಣದಲ್ಲಿ ಸರಿಯಾದ ತರಬೇತಿ‌ ಇಲ್ಲದೆ ಕಾರಣವಾಗಿದೆ” ಎಂದು ದೂರಿದರು.

ಹೈಕಮಾಂಡ್ ಮಾತನಾಡುತ್ತಾರೆ

ಪಕ್ಷದ ಹಿರಿಯ ನಾಯಕ ಸೋಮಣ್ಣ ಅವರ ನಡೆಯ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಸೋಮಣ್ಣ ಅವರು ಹಿರಿಯ ನಾಯಕರು ಅವರ ಬಗ್ಗೆ ಪಕ್ಷದ ಹೈಕಮಾಂಡ್ ಗೆ ಎಲ್ಲವೂ ಗೊತ್ತಿದೆ. ಅವರು ಚುನಾವಣೆ ಮುಗಿದ ನಂತರ ದೆಹಲಿಗೆ ಹೋಗುವುದಾಗಿ ಹೇಳಿದ್ದಾರೆ. ಹೈಕಮಾಂಡ್ ಅವರನ್ನು ಕರೆದು ಮಾತನಾಡುತ್ತಾರೆ ಎನ್ನುವ ವಿಶ್ವಾಸ ಇದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿಷಯಕ್ಕೂ ಹೈಕಮಾಂಡ್ ಮಾತನಾಡುತ್ತದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X