ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು: ಜಿ ಟಿ ದೇವೇಗೌಡ ಆಗ್ರಹ

Date:

ಈ ಹಿಂದೆ ಟೆಲಿಫೋನ್ ಕದ್ದಾಲಿಕೆ ಪ್ರಕರಣದಲ್ಲಿ ರಾಮಕೃಷ್ಣ ಹೆಗಡೆ, ಮತ್ತೊಂದು ಪ್ರಕರಣದಲ್ಲಿ ಎಸ್. ಬಂಗಾರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಿದ್ದರು. ಸಮಾಜವಾದಿ ಹಿನ್ನೆಲೆಯಿಂದ ಬಂದಿರುವ ಸಿದ್ದರಾಮಯ್ಯ ಸಹ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ಆರೋಪ ಮುಕ್ತರಾದಲ್ಲಿ ಮತ್ತೆ ಮುಖ್ಯಮಂತ್ರಿ ಆಗಲಿ ಎಂದು ಜೆಡಿಎಸ್‌ ಕೋರ್ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ ಹೇಳಿದರು.

- Advertisement -

ಮೈಸೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಕರೆದು ಮಾತನಾಡಿದ ಅವರು, “ವಾಲ್ಮೀಕಿ ನಿಗಮದ ಹಗರಣದಲ್ಲಿ ಹಣಕಾಸು ಇಲಾಖೆಯ ನಂಟು ಸ್ಪಷ್ಟವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವುದು ಸೂಕ್ತ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

” ವಾಲ್ಮೀಕಿ ನಿಗಮದ ಒಂದು ಬ್ಯಾಂಕ್‌ ಖಾತೆಯಿಂದ ಇನ್ನೊಂದು ಖಾತೆಗೆ ಕೋಟ್ಯಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆ ಆಗಿದೆ. ಸಿದ್ದರಾಮಯ್ಯ ಅವರೇ ಹಣಕಾಸು ಸಚಿವರು. ಅವರ ಅನುಮತಿ ಇಲ್ಲದೆಯೇ ವರ್ಗಾವಣೆ ಸಾಧ್ಯ” ಎಂದು ಪ್ರಶ್ನಿಸಿದರು.

ಸಿಬಿಐ ತನಿಖೆಗೆ ಕೊಡಲಿ

“ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಮ್ಮ ಅವರಿಗೆ 50:50 ಅನುಪಾತದಲ್ಲಿ ನಿವೇಶನ ಕೊಟ್ಟಿರುವುದು ತಪ್ಪಲ್ಲ. ಆದರೆ ಅಧಿಕಾರಿಗಳು ಸಮಾನಾಂತರ ಬಡಾವಣೆಯಲ್ಲಿ ನಿವೇಶನ ನೀಡಬೇಕಿತ್ತು. ಡಿನೋಟಿಫೈ ಮಾಡಲು ಪ್ರಭಾವ, ಜಮೀನಿನ ಅಕ್ರಮ ನೋಂದಣಿ ವಿಚಾರ ನಿಜವೇ ಆಗಿದ್ದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಮುಡಾದಲ್ಲಿ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣವನ್ನು ಸಿಬಿಐಗೆ ಕೊಡಬೇಕು” ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೇರಿ | ತಟ್ಟಂಚಾವಡಿ ಉಪಚುನಾವಣೆ: AINRC ಅಭ್ಯರ್ಥಿ ಅಶೋಕ್ ಆನಂದ್‌ಗೆ ಗೆಲುವು

ಪುದುಚೇರಿಯ ತಟ್ಟಂಚಾವಡಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಲ್ ಇಂಡಿಯಾ ಎನ್‌ಆರ್‌...

ಅಯೋಧ್ಯೆಯಿಂದ ಸ್ಪರ್ಧಿಸಿ ಗೆದ್ದು ತೋರಿಸಿ: ಸಿಎಂ ಯೋಗಿಗೆ ಅಖಿಲೇಶ್ ಯಾದವ್ ಬಹಿರಂಗ ಸವಾಲು

ಉತ್ತರ ಪ್ರದೇಶದ ಮುಂಬರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು...

ಉಪಚುನಾವಣೆ: ನಂದಿಗ್ರಾಮ, ನಗಾಂವ್‌ ಫಲಿತಾಂಶದತ್ತ ಎಲ್ಲರ ಚಿತ್ತ

ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರ ಮತ್ತು ಪಶ್ಚಿಮ ಬಂಗಾಳ, ತಮಿಳುನಾಡು, ಕೇಂದ್ರಾಡಳಿತ...