ಸಂವಿಧಾನ-ಜನ ವಿರೋಧಿಗಳ ವಿರುದ್ಧ ಕ್ರಮಕೈಗೊಳ್ಳದಿದ್ದರೆ ನಿಮ್ಮ ವಿರುದ್ಧವೇ ಕ್ರಮ: ಅಧಿಕಾರಿಗಳಿಗೆ ಸಿದ್ದರಾಮಯ್ಯ ಎಚ್ಚರಿಕೆ

Date:

Advertisements

“ಸಂವಿಧಾನ ವಿರೋಧಿ, ಜನ ವಿರೋಧಿ ದುಷ್ಟ ಶಕ್ತಿಗಳು ಕೆಲವು ಕಡೆ ಬಾಲ ಬಿಚ್ಚುತ್ತಿವೆ. ಅವರು ಎಷ್ಟೇ ಪ್ರಭಾವಿ ಆಗಿರಲಿ, ಕಾನೂನು ಹಾಳು ಮಾಡಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಿ. ಇಲ್ಲದಿದ್ದರೆ ನಿಮ್ಮ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ” ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಶುಕ್ರವಾರ ಜಿಲ್ಲಾಧಿಕಾರಿಗಳು, ಸಿಇಒಗಳ ಜೊತೆ ಮುಖ್ಯಮಂತ್ರಿಗಳು ಸಭೆ ನಡೆಸಿದರು. “ಕಾನೂನು ಸುವ್ಯವಸ್ಥೆ ಹದಗೆಟ್ಟರೆ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಇವೆರಡಕ್ಕೂ ನೇರಾ ನೇರಾ ಸಂಬಂಧವಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ, ಅಭಿವೃದ್ಧಿ ಕುಂಟಿತವಾದಂತೆ. ಇದಕ್ಕೆ ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳು ನೇರ ಹೊಣೆ” ಎಂದು ಎಚ್ಚರಿಸಿದರು.

ಇದನ್ನು ಓದಿದ್ದೀರಾ? ಫೇಕ್ ನ್ಯೂಸ್ ತಡೆಯಲು ಆಗುತ್ತಿರುವ ಕೆಲಸ ಸಾಲದು: ಪೊಲೀಸರಿಗೆ ಸಿದ್ದರಾಮಯ್ಯ ಎಚ್ಚರಿಕೆ

Advertisements

“ಸಂವಿಧಾನದ ಆಶಯ ಮತ್ತು ಧ್ಯೇಯೋದ್ದೇಶಗಳಿಗೆ ಯಾರೂ ವಿರುದ್ಧವಾಗಿ ಕಾರ್ಯನಿರ್ವಹಿಸಬಾರದು. ಅಂತಹ ಶಕ್ತಿಗಳು ಬೆಳೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಇತ್ತೀಚಿನ ದಿನಗಳಲ್ಲಿ ಇಂತಹ ಶಕ್ತಿಗಳು ತಲೆ ಎತ್ತುತ್ತಿದ್ದು, ಅಂತಹ ಶಕ್ತಿಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕು. ಅಂತಹ ವ್ಯಕ್ತಿಗಳೂ ಯಾರೇ ಆಗಿದ್ದರೂ, ಅವರನ್ನು ಮಟ್ಟ ಹಾಕುವುದು ಅಂತಹ ಶಕ್ತಿಗಳು ಬೆಳೆಯದಂತೆ ನೋಡಿಕೊಳ್ಳಬೇಕಾದುದು ಜಿಲ್ಲಾಧಿಕಾರಿಗಳು, ಸಿಇಒ, ಎಸ್‌ಪಿಗಳ ಜವಾಬ್ದಾರಿ ತಾನೇ” ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ಜೊತೆಗೆ ಹಿಂದಿನ ಸಭೆಯಲ್ಲಿ ನೀಡಿದ ಸೂಚನೆಗಳ ಜಾರಿ ಬಗ್ಗೆಯೂ ಪರಿಶೀಲಿಸಿದರು. “ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿಗಳು ಮತ್ತು ಸಿಇಒ ಗಳು ತಮ್ಮ ಅಹಂ ಬದಿಗೊಟ್ಟಿ ಸಮನ್ವಯದಿಂದ ಕೆಲಸ ಮಾಡಿದರೆ ಮಾತ್ರ ರಾಜ್ಯದ ಸಮಗ್ರ ಅಭಿವೃದ್ಧಿ ಸಾಧ್ಯ. ಈ ಉದ್ದೇಶಕ್ಕೇ ನೀವುಗಳು ಐಎಎಸ್‌ ಮಾಡಿರುವುದು. ಇದನ್ನು ಅರ್ಥ ಮಾಡಿಕೊಳ್ಳಬೇಕು” ಎಂದರು.

ಆ ಸಭೆಯಲ್ಲಿ ವಲ್ಲಭಾಬಾಯಿ ಪಟೇಲರ “ದೇಶವನ್ನು ನೈಜ ಸ್ವಾತಂತ್ರ್ಯ ಹೋರಾಟಗಳ ಆಶಯದಲ್ಲಿ ಮುನ್ನಡೆಸಲು ಐಎಎಸ್‌ ಸೇವೆ ಇರಬೇಕು, ಇದರ ನೈಜ ಕಾಳಜಿಯನ್ನು ನೀವು ಅರ್ಥ ಮಾಡಿಕೊಳ್ಳಬೇಕು” ನುಡಿಯನ್ನು ಸಿಎಂ ನೆನೆಪಿಸಿಕೊಂಡರು. “ವಲ್ಲಭಬಾಯಿ ಅವರ ಮಾತನ್ನು ನಾವು ಅರ್ಥಮಾಡಿಕೊಳ್ಳಬೇಕು. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೆಲಸ ಮಾಡುವವರ ವಿರುದ್ಧ ಮತ್ತು ಜನಪರ ಆಶಯಗಳಿಗೆ ಸ್ಪಂದಿಸದಿದ್ದರೆ ಅವರ ವಿರುದ್ಧ ನಾವು ಕ್ರಮ ಕೈಗೊಳ್ಳಬೇಕಾಗುತ್ತದೆ. ನೀವೆಲ್ಲಾ ಸಂವಿಧಾನ ಓದಿದ್ದೀರಿ, ಅದರ ಆಶಯಗಳಿಗೆ, ಧ್ಯೇಯೋದ್ದೇಶಗಳಿಗೆ ಬದ್ದರಾಗಿದ್ದೀರಿ ಎಂದು ನಂಬಿದ್ದೇನೆ. ಇದನ್ನು ಕಾರ್ಯ ರೂಪಕ್ಕೆ ತರುವುದರಲ್ಲಿ ವಿಫಲರಾದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದೇವೆ” ಎಂದು ಎಚ್ಚರಿಸಿದರು.

“ನಾವು ಜನರ ತೆರಿಗೆ ದುಡ್ಡಿನಲ್ಲಿ ಆಡಳಿತ ನಡೆಸುತ್ತಿದ್ದೇವೆ. ನಾವು ಮತ್ತು ನೀವು ಎಲ್ಲಾ ಸವಲತ್ತುಗಳನ್ನು ಅನುಭವಿಸುತ್ತಿರುವುದು ಜನರ ತೆರಿಗೆ ಹಣದಿಂದ ಎನ್ನುವುದನ್ನು ಮರೆಯಬಾರದು. ಕಾರು, ಮನೆ ಸೇರಿ ಎಲ್ಲಾ ಸವಲತ್ತುಗಳನ್ನು ನಾವು ಕೊಟ್ಟಿರುವುದು ತೆರಿಗೆ ಹಣದಲ್ಲಿ. ಆದ್ದರಿಂದ ಜನಪರ ಧೋರಣೆಯಲ್ಲಿ ಕೆಲಸ ಮಾಡಬೇಕು. ಇದೇ ಪ್ರಜಾಪ್ರಭುತ್ವದ ಮೂಲ ಆಶಯ” ಎಂದರು.

ಇದನ್ನು ಓದಿದ್ದೀರಾ? ರಾಜ್ಯಾದ್ಯಂತ 7 ಸಾವಿರಕ್ಕೂ ಅಧಿಕ ಡೆಂಘಿ ಪ್ರಕರಣ; ಎಚ್ಚರಿಕೆ ವಹಿಸಲು ಸಿದ್ದರಾಮಯ್ಯ ಮನವಿ

ಈ ವರ್ಷ 700 ಬಾಲ್ಯ ವಿವಾಹ: ಸಿಎಂ

“ಬಾಲ್ಯ ವಿವಾಹ ಆಗುವುದು ಜಿಲ್ಲಾಧಿಕಾರಿಗಳ ಗಮನಕ್ಕೆ ಏಕೆ ಬರುವುದಿಲ್ಲ? ನಿಮ್ಮ ಕೆಳಗಿನವರು ನಿಮಗೆ ವರದಿ ಮಾಡುವುದಿಲ್ಲವೇ? ಕೆಳಗಿನವರು ನಿಮಗೆ ಹೇಳದಿದ್ದರೆ ನಿಮಗೆ ದಕ್ಷತೆ ಇಲ್ಲ ಎಂದು ಅರ್ಥ. ನಿಮಗೆ ಅಧಿಕಾರಿಗಳ ಮೇಲೆ ನಿಯಂತ್ರಣ ಇಲ್ಲ, ನಿಮ್ಮ ಬಗ್ಗೆ ಅವರಿಗೆ ಭಯ ಇಲ್ಲ ಎಂದೇ ಅರ್ಥ” ಎಂದು ತರಾಟೆಗೆ ತೆಗೆದುಕೊಂಡರು.

“ಈ ವರ್ಷ 700 ಬಾಲ್ಯ ವಿವಾಹ ನಡೆದಿದೆ, ಬಾಲ್ಯದಲ್ಲೇ ತಾಯಂದಿರಾದ ಘಟನೆಗಳೂ ವರದಿಗಳಾಗಿವೆ. ಈ ಬಗ್ಗೆ ಹಲವು ಕಡೆ ಎಫ್‌ಐಆರ್‌ ಕೂಡ ದಾಖಲಾಗಿಲ್ಲ ಎನ್ನುವುದು ನನ್ನ ಗಮನಕ್ಕೆ ಬಂದಿದೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ 700 ಬಾಲ್ಯ ವಿವಾಹ ನಡೆಯುತ್ತಿದೆ ಎಂದರೆ ಹೇಗೆ? ಬಾಲ್ಯವಿವಾಹ ತಡೆಗೆ ಕಾಯ್ದೆ, ಕಾನೂನುಗಳಿವೆ. ಆದರೂ ಇದನ್ನು ಪರಿಣಾಮಕಾರಿಯಾಗಿ ಕೆಲವು ಕಡೆ ಬಳಸಿಲ್ಲ. ಇದು ತಪ್ಪಲ್ಲವೇ” ಎಂದರು.

“ತಪಾಸಣಾ ವರದಿಗಳನ್ನು ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಬೇಕು. ಜಿಲ್ಲೆಯಲ್ಲಿ ಶಾಲೆಗಳು, ಹಾಸ್ಟೆಲ್‌ಗಳು, ವಸತಿ ಶಾಲೆಗಳು, ಸರಿಯಾಗಿ ಕಾರ್ಯನಿರ್ವಹಿಸುವುದನ್ನು ಖಾತ್ರಿಪಡಿಸಲು ನಿರಂತರವಾಗಿ ಭೇಟಿ ನೀಡಬೇಕು. ಮುನ್ಸೂಚನೆ ಇಲ್ಲದೇ ಇಂತಹ ಭೇಟಿಯನ್ನು ಪ್ರತಿ ತಿಂಗಳು ಕಡ್ಡಾಯವಾಗಿ ನಡೆಸಬೇಕು ಎಂದು ಪದೇ ಪದೇ ಸೂಚನೆ ನೀಡಿದ್ದೇನೆ. ಆದರೂ ಕೆಲವರು ಇದನ್ನು ಪಾಲಿಸಿಲ್ಲ ಎನ್ನುವ ವರದಿ ಬಂದಿದೆ. ನಿಮ್ಮ ಅಧೀನದಲ್ಲಿರುವ ಇಲಾಖೆಗಳು, ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸುವುದನ್ನು ಖಾತ್ರಿಪಡಿಸುವುದು ನಿಮ್ಮ ಜವಾಬ್ದಾರಿ. ನೀವು ದಕ್ಷತೆಯಿಂದ ಕಾರ್ಯನಿರ್ವಹಿಸದಿದ್ದರೆ ಅಧೀನ ಅಧಿಕಾರಿಗಳು ಕಾರ್ಯನಿರ್ವಹಿಸುವುದನ್ನು ಹೇಗೆ ನಿರೀಕ್ಷಿಸಬಹುದು” ಎಂದು ಕೇಳಿದರು.

ಜಿಲ್ಲಾಧಿಕಾರಿಗಳು ಕಚೇರಿಯಲ್ಲಿ ಲಭ್ಯವಿಲ್ಲದ ಬಗ್ಗೆ ದೂರು

“ಕೆಲವು ಜಿಲ್ಲಾಧಿಕಾರಿಗಳು, ಸಿಇಒಗಳು ಸರಿಯಾಗಿ ಕಚೇರಿಯಲ್ಲಿ ಸಾರ್ವಜನಿಕರಿಗೆ ಲಭ್ಯವಾಗದಿರುವ ಬಗ್ಗೆ ದೂರುಗಳು ಬಂದಿವೆ. ಸಾರ್ವಜನಿಕ ಭೇಟಿಯ ಅವಧಿಯನ್ನು ಮೊದಲೇ ಪ್ರಕಟಿಸಬೇಕು. ಶೋಷಿತರು, ಬಡವರು, ಜನಸಾಮಾನ್ಯರು ಸಾಮಾನ್ಯವಾಗಿ ಜಿಲ್ಲಾಧಿಕಾರಿ ಅವರ ಕಚೇರಿಗೆ ಬರುತ್ತಾರೆ. ಅಂತವರ ಸಂಕಷ್ಟಗಳನ್ನು ನೀವೇ ಆಲಿಸದಿದ್ದರೆ ಅದನ್ನು ಬಗೆಹರಿಸುವವರು ಯಾರು? ಯಾರ ಬಳಿ ಅವರು ತಮ್ಮ ಕಷ್ಟಗಳನ್ನು ಹೇಳಿಕೊಳ್ಳಬೇಕು” ಎಂದು ಪ್ರಶ್ನಿಸಿದರು.

“ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ವಾಸವಿರಬೇಕು. ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿ ಲಭ್ಯವಿದ್ದು, ಜನರಿಗೆ ಲಭ್ಯವಿರಬೇಕು. ಇದನ್ನು ಜಿಲ್ಲಾಧಿಕಾರಿಗಳು ಖಾತ್ರಿಪಡಿಸಬೇಕು. ಕೇಂದ್ರ ಸ್ಥಾನದಲ್ಲಿರದ ಅಧಿಕಾರಿಗಳ ವಿರುದ್ಧ ಕೈಗೊಂಡಿರುವ ಕ್ರಮದ ಬಗ್ಗೆ ನನಗೆ ವರದಿ ನೀಡಬೇಕು” ಎಂದರು.

ಇದನ್ನು ಓದಿದ್ದೀರಾ? ಸುಳ್ಳು ಬಿಟ್ಟು ಇಂದಾದರೂ ಸತ್ಯ ಮಾತನಾಡಿ ಮೋದಿ: ಸಿಎಂ ಸಿದ್ದರಾಮಯ್ಯ

ರೈತರ ಆತ್ಮಹತ್ಯೆ ಪರಿಹಾರ ಬಾಕಿ; ಸಿಎಂ ಗರಂ

ಈ ಸಭೆಯಲ್ಲಿ ಸುಮಾರು 13 ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ನೀಡುವುದು ಬಾಕಿ ಇರುವುದನ್ನು ಗಮನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಹಾವೇರಿ ಸೇರಿ ಇನ್ನೆರಡು ಜಿಲ್ಲೆಗಳಲ್ಲಿ ಒಟ್ಟು 13 ರೈತ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ಬಾಕಿ ಇರುವುದನ್ನು ಆದಷ್ಟು ಬೇಗ ಬಗೆಹರಿಸಿ ಪರಿಹಾರ ಒದಗಿಸಿ ಎಂದು ಸೂಚನೆ ನೀಡಿದರು.

ಕೆರೆ ಒತ್ತುವರಿ : ತೆರವುಗೊಳಿಸದ್ದಕ್ಕೆ ಗರಂ ಆದ ಸಿಎಂ

ಹಾಗೆಯೇ ಯಾವ್ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಕೆರೆಗಳ ಒತ್ತುವರಿ ತೆರವುಗೊಳಿಸಲಾಗಿದೆ ಎನ್ನುವುದನ್ನು ಪರಿಶೀಲಿಸಿದ ಮುಖ್ಯಮಂತ್ರಿಗಳು ಎರಡು ಮೂರು ಜಿಲ್ಲೆಗಳಲ್ಲಿ ಒಂದೂ ಕೆರೆ ಒತ್ತುವರಿ ತೆರವು ಮಾಡದಿರುವುದನ್ನು ಗಮನಿಸಿ ಗರಂ ಆದರು. ವರದಿ ತರಿಸಿಕೊಂಡು ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸಭೆಯಲ್ಲೇ ಸೂಚನೆ ನೀಡಿದರು.

ರಾಜ್ಯದಲ್ಲಿ 10931 ಕೆರೆಗಳು ಒತ್ತುವರಿಯಾಗಿವೆ. ಇದುವರೆಗೆ 6065 ಕೆರೆಗಳ ಒತ್ತುವರಿ ತೆರವು ಮಾಡಲಾಗಿದೆ. ಎಲ್ಲಾ ಕೆರೆಗಳ ಸಮೀಕ್ಷೆ ನಡೆಸಿ ಒತ್ತುವರಿ ತೆರವುಗೊಳಿಸಲು ಕಳೆದ ಸಭೆಯಲ್ಲಿ ತಿಳಿಸಿದ್ದರೂ ನಿರೀಕ್ಷಿತ ಪ್ರಗತಿಯಾಗಿಲ್ಲ. ಕೂಡಲೇ ಇದರ ಬಗ್ಗೆ ಗಮನಹರಿಸಿ, ಎಲ್ಲಾ ಕೆರೆಗಳ ಸಮೀಕ್ಷೆ ನಡೆಸಿ, ಒತ್ತುವರಿ ತೆರವುಗೊಳಿಸಿ, ಮಳೆ ನೀರು ಸರಾಗವಾಗಿ ಕೆರೆಗೆ ಹರಿದು ಬರುವಂತೆ ವ್ಯವಸ್ಥೆ ಮಾಡಬೇಕು. ಕೆರೆಗಳ ಒತ್ತುವರಿ ವಿಷಯದಲ್ಲಿ ಸರಿಯಾಗಿ ಕಾರ್ಯನಿರ್ವಹಿಸದ ಜಿಲ್ಲಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಿದರು.

“ರಾಜ್ಯದಲ್ಲಿ ಈ ವರ್ಷ 1395 ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ಪೋಕ್ಸೋ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗುವಂತೆ ನೋಡಿಕೊಳ್ಳಬೇಕು. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಸರಿಯಾದ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು” ಎಂದರು.

“ಸರ್ಕಾರಿ ಶಾಲೆಗಳಿಗೆ ಎಲ್ಲಾ ಸವಲತ್ತುಗಳನ್ನು ನೀಡದರೂ ಎಸ್ಎಸ್ಎಲ್‌ಸಿ ಮತ್ತು ಪಿಯುಸಿ ಫಲಿತಾಂಶ ಕಳಪೆಯಾಗಿರಲು ಕಾರಣವೇನು? ಈ ಬಗ್ಗೆ ಆತ್ಮಾವಲೋಕನ ನಡೆಸಬೇಕು. ತಮ್ಮ ಜಿಲ್ಲೆಗಳಲ್ಲಿ ಫಲಿತಾಂಶ ಸುಧಾರಿಸುವುದು ಆಯಾ ಜಿಲ್ಲಾಧಿಕಾರಿ ಹಾಗೂ ಸಿಇಒಗಳ ಜವಾಬ್ದಾರಿ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣ ಸುಧಾರಣೆಗೆ ಹೆಚ್ಚಿನ ಅನುದಾನ ಒದಗಿಸುತ್ತಿದ್ದರೂ, ಫಲಿತಾಂಶದಲ್ಲಿ ಯಾವಾಗಲೂ ಹಿಂದಿರಲು ಕಾರಣವೇನು? ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ, ಸಿಇಒಗಳು ನಿರಂತರ ಗಮನ ಹರಿಸಬೇಕು” ಎಂದರು.

“ರಾಜ್ಯದಲ್ಲಿ ಕಂದಾಯ ಗ್ರಾಮಗಳ ಘೋಷಣೆ ದಾಖಲೆ ಪ್ರಮಾಣದಲ್ಲಿ ಆಗಿದೆ. ಆದರೆ ಇನ್ನೂ ಬಾಕಿಯುಳಿದಿರುವ ಕಂದಾಯ ಗ್ರಾಮಗಳನ್ನು ಘೋಷಿಸುವ ಕಾರ್ಯ ಮುಂದಿನ 6 ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ಬಗರ್ ಹುಕುಂ ಅರ್ಜಿಗಳ ವಿಲೇವಾರಿ ತ್ವರಿತಗೊಳಿಸಬೇಕು. ಇದು ಯಾಕೆ ಕಡಿಮೆಯಾಗುತ್ತಿದೆ? ಪೋಡಿಮುಕ್ತ ಅಭಿಯಾನ ನಿರಂತರವಾಗಿ ಮುಂದುವರೆಸಬೇಕು. ಶೇಕಡ 63 ಪೋಡಿಮುಕ್ತ ಆಗಿದ್ದು, ಇದರಲ್ಲಿ ಶೇಕಡ 100ರಷ್ಟು ಪ್ರಗತಿ ಸಾಧಿಸಬೇಕು” ಎಂದು ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X